ಮುಳ್ಳಯ್ಯನಗಿರಿಯಲ್ಲಿ ಪ್ರವಾಸಿವಾಹನ ಕಡಿವಾಣಕ್ಕೆ ಒತ್ತಾಯ


Team Udayavani, Jan 30, 2021, 4:47 PM IST

Insist on travel cuts at mullayyanagiri

ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ಸಾಲಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ ರಾಜ್ಯದ ಅತೀ ಎತ್ತರದ ಪ್ರದೇಶ, ಶೋಲಾಕಾಡು, ಹುಲ್ಲುಗಾವಲಿನಿಂದ ಕೂಡಿರುವ ಸೂಕ್ಷ್ಮ ಪರಿಸರವಾಗಿದೆ. ವಾರಾಂತ್ಯದಲ್ಲಿ ಬರುವ ಪ್ರವಾಸಿಗರು ಭೇಟಿ ನೀಡಿ ಸಾಕಷ್ಟು ಪರಿಸರ ಮಾಲಿನ್ಯ ಉಂಟು ಮಾಡುತ್ತಿದ್ದು,  ಪ್ರವಾಸಿ ವಾಹನಕ್ಕೆ ಕಡಿವಾಣ ಹಾಕಬೇಕೆಂದು ಜಿಲ್ಲಾ ವನ್ಯಜೀವಿ ಗೌರವ ಪರಿಪಾಲಕ ಜಿ. ವೀರೇಶ್‌ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾರು, ಜೀಪು, ಮಿನಿಬಸ್‌ ಸೇರಿದಂತೆ ಹಲವು ವಾಹನಗಳು ಮುಳ್ಳಯ್ಯನಗಿರಿಯಲ್ಲಿ ಜಮಾವಣೆ ಗೂಂಡು ಸಮಸ್ಯೆ ಸೃಷ್ಟಿಸಿವೆ. ಗಿರಿಪ್ರದೇಶದ ರಸ್ತೆಗಳು ವಾಹನಗಳಿಂದ ನಿತ್ಯ ಟ್ರಾಪಿಕ್‌ ಜಾಮ್‌ ಆಗುತ್ತಿದ್ದು, ಸುತ್ತಮುತ್ತಲ ಗ್ರಾಮಸ್ಥರಿಗೆ ನಿತ್ಯ ಕಿರಿಕಿರಿ ಉಂಟುಮಾಡುತ್ತಿದೆ ಎಂದು ತಿಳಿಸಿದ್ದಾರೆ. ಮುಳ್ಳಯ್ಯನಗಿರಿಯಲ್ಲಿ ವಾಹನಗಳ ನಿಲುಗಡೆಗೆ ಅವಕಾಶ ನೀಡಿ ಸಾಕಷ್ಟು ತೊಂದರೆ ಆಗುತ್ತಿದೆ.

ಸಾವಿರಾರು ವಾಹನಗಳು ಇಲ್ಲಿ ನಿಲ್ಲಲು ಸ್ಥಳ ಇಲ್ಲ. ಈ ವಾಹನಗಳ ಸಂಚಾರದಿಂದ ಇಲ್ಲಿನ ವನ್ಯಜೀವಿಗಳ ಮುಕ್ತ ಸಂಚಾರಕ್ಕೆ ಮತ್ತು ಅವುಗಳ ವಾಸಸ್ಥಾನಕ್ಕೂ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ. ಸೀತಾಳಯ್ಯನಗಿರಿ ಪ್ರದೇಶದಲ್ಲೂ ಇದೇ ಪರಿಸ್ಥಿತಿ ಇದ್ದು, ಪ್ರವಾಸಿಗರು ಬೆಟ್ಟಗಳ ಮೇಲೆ ಹೋಗಿ ಮೋಜುಮಸ್ತಿ ಮಾಡುತ್ತಾ ನೈಸರ್ಗಿಕ ಹುಲ್ಲುಗಾವಲು ಮತ್ತು 12ವರ್ಷಗಳಿಗೊಮ್ಮೆ ಹೂ ಬಿಡುವ ಕುರಂಜಿ ಗಿಡಗಳಿಗೂ ಹಾನಿಯಾಗುತ್ತಿದೆ. ಪರಿಸರ ಪ್ರವಾಸೋದ್ಯಮ ಇಂದು ಸ್ಥಳೀಯರಿಗೆ ಮಾರಕವಾಗಿ ಪರಿಣಮಿಸಿದ್ದು ರಾಶಿ ರಾಶಿ ಕಸ ಗಿರಿ ಸುಂದರ ವಾತಾವರಣವನ್ನು ಕಲುಷಿತ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಮುಳ್ಳಯ್ಯನಗಿರಿ, ಇನಾಂ ದತ್ತಪೀಠ, ಮಾಣಿಕ್ಯಧಾರ ಪದೇಶಗಳಿಗೆ ಪ್ರವಾಸಿ ವಾಹನ ಸಂಚಾರ ನಿರ್ಬಂಧಿಸಿ ಜಿಲ್ಲಾಡಳಿತ ವತಿಯಿಂದ ಸರ್ಕಾರಿ ವಾಹನಗಳ ವ್ಯವಸ್ಥೆ ಕಲ್ಪಿಸಬೇಕು. ಕೈಮರದಲ್ಲಿ ಸರ್ಕಾರಿ ಭೂಮಿ ಗುರುತಿಸಿ ಅಲ್ಲಿ ಪ್ರವಾಸಿ ವಾಹನಗಳ ನಿಲುಗಡೆ ಅವಕಾಶ ಕಲ್ಪಿಸಬೇಕು. ಸರ್ಕಾರಿ ಸ್ವಾಮ್ಯದ ವಾಹನಗಳು ಅಥವಾ ಖಾಸಗಿ ಅವರಿಂದ ವಾಹನಗಳಿಗೆ ಟೆಂಡರ್‌ ಕರೆದು ವಾಹನ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಚಿಕ್ಕಬಳ್ಳಾಪುರ: ಉದ್ಯಾನದ ಜಾಗವನ್ನು ಅತಿಕ್ರಮಣ ಮಾಡಿ ಕಟ್ಟಿದ್ದ ಮನೆ, ಕಾಂಪೌಂಡ್ ನೆಲಸಮ

ಈ ಹಿಂದೆ ಕೆಎಸ್‌ಆರ್‌ಟಿಸಿ ಮಿನಿ ಬಸ್‌ಗೆ ಸಂಚಾರ ವ್ಯವಸ್ಥೆ ಕಲ್ಪಿಸಲು ಜಿಲ್ಲಾಡಳಿತ ಚಿಂತನೆ ನಡೆಸಿತ್ತು. ಆದರೆ ಅದು ಕಾರ್ಯಗತಗೊಂಡಿಲ್ಲ, ಈ ವ್ಯವಸ್ಥೆಯನ್ನು ಕಲ್ಪಿಸುವುದರಿಂದ ಸರ್ಕಾರಕ್ಕೂ ಆದಾಯವಾಗಲಿದೆ ಎಂದು ತಿಳಿಸಿರುವ ಅವರು, ಸ್ಥಳೀಯರಿಗೂ ಅನುಕೂಲವಾಗುತ್ತದೆ ಮತ್ತು ಪರಿಸರ ರಕ್ಷಣೆ ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

7

Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.