ಕರಗಡ ಯೋಜನೆ ಕಾಮಗಾರಿ ಪರಿಶೀಲನೆ

ಕಾಮಗಾರಿ ಪರಿಶೀಲನೆ •ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ಭರವಸೆ •ಸಭೆಗೆ ತಪ್ಪು ಮಾಹಿತಿ ನೀಡಿದ ಅಧಿಕಾರಿ ವಿರುದ್ಧ ಕ್ರಮಕ್ಕೆ ಸಿ.ಟಿ.ರವಿ ಆಗ್ರಹ

Team Udayavani, Jun 25, 2019, 9:54 AM IST

cm-tdy-1..

ಚಿಕ್ಕಮಗಳೂರು: ಜಿಪಂ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಸಿ.ಟಿ.ರವಿ ಮಾತನಾಡಿದರು.

ಚಿಕ್ಕಮಗಳೂರು: ಸಣ್ಣ ನೀರಾವರಿ ಸಚಿವರೊಂದಿಗೆ ಚರ್ಚಿಸಿ ಕರಗಡ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲಿಸಲು ತಂತ್ರಜ್ಞರನ್ನು ಸ್ಥಳಕ್ಕೆ ಕಳುಹಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಅನುಪಾಲನಾ ವರದಿ ಕುರಿತು ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್‌ ಮಾತನಾಡಿ, ಕರಗಡ ಕುಡಿಯುವ ನೀರಿನ ಯೋಜನೆ ಕಾಮಗಾರಿಯ ಮೊದಲ ಹಂತ ಸಿಬಿಎಲ್ ವರೆಗೆ ಪೂರ್ಣಗೊಂಡಿದೆ. ಮಳೆ ಬಂದು ದೇವಿಕೆರೆ ತುಂಬಿದಲ್ಲಿ ನೀರು ನಾಲೆಯಲ್ಲಿ ಹರಿಯುತ್ತದೆ ಎಂದು ವರದಿ ಸಲ್ಲಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಸಿ.ಟಿ.ರವಿ, ಅಧಿಕಾರಿಗಳು ಸಭೆಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ನಿನ್ನೆ ತಮ್ಮ ಮನೆಗೆ ಬಂದಿದ್ದ ಇಲಾಖೆ ಸಹಾಯಕ ಇಂಜಿನಿಯರ್‌ ಕಾಮಗಾರಿ ಪೂರ್ಣಗೊಂಡಿದೆ ಎಂದು ತಿಳಿಸಿದ್ದರು. ಕೂಡಲೇ ತಾವು ಸ್ಥಳೀಯ ತಾಪಂ ಸದಸ್ಯರಿಗೆ ಸ್ಥಳಕ್ಕೆ ತೆರಳಿ ಕಾಮಗಾರಿ ಪೂರ್ಣಗೊಂಡಿದೆಯೋ ಇಲ್ಲವೋ ಎಂಬು ದನ್ನು ಪರಿಶೀಲಿಸಿ, ವೀಡಿಯೋ ಮಾಡಿ ಕಳುಹಿಸುವಂತೆ ತಿಳಿಸಿದೆ. ಅವರು ಸ್ಥಳಕ್ಕೆ ತೆರಳಿ ವೀಡಿಯೋ ಮಾಡಿ ಕಳುಹಿಸಿದ್ದಾರೆ. ಕೆಲವೆಡೆ ಸಿಬಿಎಲ್ ವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ. ಅವಕಾಶ ನೀಡಿದರೆ ವೀಡಿಯೋ ಪ್ರದರ್ಶಿಸುವುದಾಗಿ ಹೇಳಿದರು.

ಅಧಿಕಾರಿಗಳು ಈ ಹಿಂದೆ ಇದೇ ಕಾಮಗಾರಿ ಕುರಿತು ವಿಧಾನಸೌಧಕ್ಕೆ ತಪ್ಪು ಮಾಹಿತಿ ನೀಡಿದ್ದರು. ಈಗ ಕೆಡಿಪಿ ಸಭೆಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಈಗಲೇ ಸ್ಥಳಕ್ಕೆ ತೆರಳಿ ಪರಿಶೀಲಿಸೋಣ. ಕಾಮಗಾರಿ ಪೂರ್ಣಗೊಂಡಿದ್ದರೆ ನಾನೇ ಅಧಿಕಾರಿಗಳಿಗೆ ಶಹಭಾಷ್‌ಗಿರಿ ನೀಡುತ್ತೇನೆ. ಕಾಮಗಾರಿ ಪೂರ್ಣಗೊಂಡಿಲ್ಲದಿದ್ದರೆ ತಪ್ಪು ಮಾಹಿತಿ ನೀಡಿದ ಅಧಿಕಾರಿಯನ್ನು ಅಮಾನತು ಮಾಡಿ ಎಂದು ಆಗ್ರಹಿಸಿದರು.

ವಿಧಾನ ಪರಿಷತ್‌ ಶಾಸಕ ಎಸ್‌.ಎಲ್. ಬೋಜೇಗೌಡ ಮಾತನಾಡಿ, ಕಾಮಗಾರಿ ನಿರ್ವಹಿಸಲು ಅನುದಾನದ ಕೊರತೆ ಇಲ್ಲ. ಮುಖ್ಯಮಂತ್ರಿಗಳು ಅಗತ್ಯವಿದ್ದಷ್ಟು ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. ಈ ಕಾಮಗಾರಿ ಕುರಿತು ಹಲವು ಸಭೆಗಳನ್ನು ನಡೆಸಲಾಗಿದೆ. ಆದರೂ, ಅಧಿಕಾರಿಗಳ ನಿರ್ಲಕ್ಷ ್ಯದಿಂದಾಗಿ ಕಾಮಗಾರಿ ಈವರೆಗೂ ಪೂರ್ಣಗೊಂಡಿಲ್ಲ ಎಂದರು.

ಸಚಿವ ಕೆ.ಜೆ.ಜಾರ್ಜ್‌ ಮಾತನಾಡಿ, ಕೆರೆಗೆ ನೀರು ಹರಿಯುವುದು ಮುಖ್ಯ. ಮೊದಲು ಅದರತ್ತ ಗಮನ ಹರಿಸೋಣ. ಕಾಮಗಾರಿ ಪೂರ್ಣಗೊಂಡಿದೆಯೋ ಇಲ್ಲವೋ ಎಂಬುದನ್ನು ತಂತ್ರಜ್ಞರೇ ತೀರ್ಮಾನಿಸಬೇಕಿದೆ. ಸಣ್ಣ ನೀರಾವರಿ ಸಚಿವರೊಂದಿಗೆ ಈ ಕುರಿತು ಚರ್ಚಿಸುತ್ತೇನೆ. ಸಮರ್ಥ ತಂತ್ರಜ್ಞ ರೊಂದಿಗೆ ಆಗಮಿಸಿ ಸ್ಥಳ ಪರಿಶೀಲಿಸುವಂತೆ ಕೋರುತ್ತೇನೆ. ಆ ನಂತರ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಅವರೇ ತೀರ್ಮಾನಿಸಲಿ ಎಂದು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್. ಬೋಜೇಗೌಡ ಮಾತನಾಡಿ, ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಅವರು ಈ ಹಿಂದೆ ಸಿಎಂ ಆಗಿದ್ದಾಗ ಯೋಜನೆಗೆ ಮಂಜೂರಾತಿ ನೀಡಿ 3.50 ಕೋಟಿ ರೂ. ಬಿಡುಗಡೆ ಮಾಡಿದ್ದರು ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಸಿ.ಟಿ.ರವಿ, ಸಭೆಗೆ ತಪ್ಪು ಮಾಹಿತಿ ಹೋಗಬಾರದು. ಕಾಮಗಾರಿಗೆ ಅನುದಾನ ಬಿಡುಗಡೆ ಆಗಿದ್ದು ಯಾವಾಗ ಎಂಬ ಮಾಹಿತಿಯನ್ನು ಇಲಾಖೆಯವರೇ ನೀಡಲಿ. ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಯೋಜನೆಗೆ ಅನುದಾನ ಬಿಡುಗಡೆ ಆಗಿದೆ ಎಂದು ತಿಳಿಸಿದರು.

ಸಚಿವ ಕೆ.ಜೆ.ಜಾರ್ಜ್‌ ಮಾತನಾಡಿ, ಯಾವ ಮುಖ್ಯಮಂತ್ರಿ ಅನುದಾನ ಬಿಡುಗಡೆ ಮಾಡಿದ್ದರೂ ಅದು ಸರ್ಕಾರದ ಹಣವೇ. ಈಗ ಆ ವಿಚಾರದ ಕುರಿತು ಚರ್ಚೆ ಅವಶ್ಯಕತೆ ಇಲ್ಲ. ಕಾಮಗಾರಿ ಪೂರ್ಣಗೊಂಡು ಕೆರೆಗಳಿಗೆ ನೀರು ಹರಿದರೆ ಸಾಕು ಎಂದು ಹೇಳಿ ಚರ್ಚೆಗೆ ಮುಕ್ತಾಯ ಹಾಡಿದರು.

ನೋಟಿಫಿಕೇಶನ್‌ ರದ್ಧತಿಗೆ ಪ್ರಸ್ತಾವನೆ: ಸಭೆಯಲ್ಲಿ ಕುದುರೆಮುಖ ವಿಷಯ ಪ್ರಸ್ತಾಪ ವಾದಾಗ ಸಚಿವ ಕೆ.ಜೆ.ಜಾರ್ಜ್‌ ಕೆಐಓಸಿಎಲ್ನ ಟೌನ್‌ಶಿಪ್‌ ಏನಾಯಿತು ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌, ಕಳಸವನ್ನು ಹೊಸ ತಾಲೂಕಾಗಿ ಘೋಷಿಸಲಾಗಿದೆ. ಟೌನ್‌ಶಿಪ್‌ ಕಳಸದಿಂದ ಕೇವಲ 10 ಕಿ.ಮೀ. ದೂರದಲ್ಲಿದೆ. ಅಲ್ಲಿನ ಕಟ್ಟಡಗಳನ್ನು ತಾಲೂಕು ಕಚೇರಿ ಹಾಗೂ ಇನ್ನಿತರೆ ಸರ್ಕಾರಿ ಕಚೇರಿಗಳಿಗೆ ಬಳಸಿಕೊಳ್ಳಲು ಉದ್ದೇಶಿಸಲಾಗಿದ್ದು, ಶೀಘ್ರದಲ್ಲಿಯೇ ಸರ್ಕಾ ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಸಿಎಂ ಬಳಿಗೆ ನಿಯೋಗ: ಕಳೆದ ವರ್ಷಕೊಡಗಿನಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾ ದಾಗ ಕಾಫಿ ಬೆಳೆಗಾರರಿಗೆ ವಿಶೇಷ ಪ್ಯಾಕೇಜ ಅನ್ನು ರಾಜ್ಯ ಸರ್ಕಾರದಿಂದ ನೀಡಲಾಗಿದೆ. ಹಾಗಾಗಿ, ನಮ್ಮ ಜಿಲ್ಲೆಗೂ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು. ನಷ್ಟವಾಗಿರುವ ಬಗ್ಗೆ ಜಿಲ್ಲಾಡಳಿತದಿಂದ ಸರ್ಕಾರಕ್ಕೆ ಪ್ರಸ್ತಾವನೆಯೂ ಹೋಗಿದೆ ಎಂದು ಶಾಸಕ ಸಿ.ಟಿ.ರವಿ ಹೇಳಿದರು.

 

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

9

Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ

8

Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.