ಅಂತರ್ ರಾಜ್ಯ ಎಟಿಎಂ ಕಾರ್ಡ್ ವಂಚಕ ಮೂಡಿಗೆರೆ ಪೊಲೀಸರ ಬಲೆಗೆ
70 ಎಟಿಎಂ ಕಾರ್ಡ್ ಗಳ ಸಹಿತ ಚಿನ್ನಾಭರಣವೂ ವಶ
Team Udayavani, Jun 16, 2022, 6:13 PM IST
ಮೂಡಿಗೆರೆ : ಹಲವರಿಗೆ ಸಹಾಯ ಕೇಳುವ ನೆಪದಲ್ಲಿ ವಂಚಿಸುತ್ತಿದ್ದ ಅಂತರ್ ರಾಜ್ಯ ಎಟಿಎಂ ವಂಚಕನೊಬ್ಬನನ್ನು ಮೂಡಿಗೆರೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ತಂಬಿರಾಜು ಎನ್ನುವವನಾಗಿದ್ದು ತಮಿಳುನಾಡಿನ ತೇಣಿ ಜಿಲ್ಲೆಯಾವನಾಗಿದ್ದಾನೆ. ಈತನ ಮೇಲೆ ಹಿಂದೆ ತಮಿಳುನಾಡಿನಲ್ಲಿ ಒಟ್ಟು 11 ಪ್ರಕರಣಗಳು ತನಿಖಾ ಹಂತದಲ್ಲಿವೆ. ಬಂಧಿತನ ಬಳಿ 70 ವಿವಿಧ ಬ್ಯಾಂಕಿನ ಎಟಿಎಂ ಕಾರ್ಡ್ ಗಳು. 60 ಗ್ರಾಂ ಚಿನ್ನ 35 ಸಾವಿರ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈತನ ಮೇಲೆ ರಾಜ್ಯದಲ್ಲಿ 7 ಪ್ರಕರಣಗಳು ದಾಖಾಲಾಗಿದ್ದು ತನಿಖೆ ಮುಂದುವರೆದಿದೆ.
ವಿಚಾರಣೆ ವೇಳೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂಡಿಗೆರೆ, ತರೀಕೆರೆ, ಮಂಡ್ಯ ಜಿಲ್ಲೆಯ ಮಳವಳ್ಳಿ, ಕೆ ಆರ್ ಪೇಟೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಹಾಗೂ ಬೆಂಗಳೂರಿನಲ್ಲಿ ಎಟಿಎಂ ಗ್ರಾಹಕರಿಗೆ ಮೋಸ ಮಾಡಿ ಹಣ ಪಡೆದು ಹಾಗೂ ಜ್ಯುವೆಲರಿ ಗಳಲ್ಲಿ ಮೋಸ ಮಾಡಿದ ಎಟಿಎಂ ಗಳಲ್ಲಿ ಸ್ವೈಪ್ ಮಾಡಿ ಚಿನ್ನವನ್ನು ಪಡೆಯುತ್ತಿರುವುದು ಬಯಲಾಗಿದೆ.
ಜೂನ್ 8 ರಂದು ಮೂಡಿಗೆರೆಯ ಕಾಫಿ ಬೆಳೆಗಾರರೊಬ್ಬರಿಗೆ ಮೂಡಿಗೆರೆ ಪಟ್ಟಣದ ಕರ್ನಾಟಕ ಬ್ಯಾಂಕ್ ಎಟಿಎಂನಲ್ಲಿ ಈತ ಹಣವನ್ನು ಡ್ರಾ ಮಾಡಲು ಸಹಾಯ ಮಾಡುವ ನೆಪದಲ್ಲಿ ಎಟಿಎಂ ಕಾರ್ಡ್ ನ್ನು ಬದಲಾಯಿಸಿಕೊಂಡು ಹೋಗಿ ಚಿಕ್ಕಮಗಳೂರು ಎಟಿಎಂನಲ್ಲಿ 25 ಸಾವಿರ ರೂ ಹಣವನ್ನು ಡ್ರಾ ಮಾಡಿ, ಚಿಕ್ಕಮಗಳೂರು ಅರಹಮ್ ಜ್ಯುವೆಲರಿ ಶಾಪ್ ನಲ್ಲಿ 75 ಸಾವಿರ ರೂ ಹಣವನ್ನು ಸ್ವೈಪ್ ಮಾಡಿ ಚಿನ್ನವನ್ನು ಖರೀದಿ ಮಾಡಿದ್ದ.
ಈ ಕುರಿತು ವಂಚನೆಗೊಳಗಾದ ವ್ಯಕ್ತಿ ಮೂಡಿಗೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದು. ಪ್ರಕರಣವನ್ನು ಚಿಕ್ಕಮಗಳೂರು ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಉಪ ಅಧೀಕ್ಷಕರು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿದ್ದಾರೆ.
ಮೂಡಿಗೆರೆ ಸರ್ಕಲ್ ಇನ್ಸ್ ಪೆಕ್ಟರ್ ಸೋಮಶೇಖರ್ ಜೆಸಿ ಇವರ ಸಾರಥ್ಯದಲ್ಲಿ ಮೂಡಿಗೆರೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆದರ್ಶ, ಪೊಲೀಸ್ ಸಿಬ್ಬಂದಿಗಳಾದ ಗಿರೀಶ್, ಲೋಹಿತ್, ವಸಂತ್,ಮನು ಕುಮಾರ, ಇವರೊಂದಿಗೆ ಜೂನ್ 11 ರಂದು ಮಡಿಕೇರಿಯಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.