ಕಾಲಮಿತಿಯಲ್ಲಿ ಹಕ್ಕು ಪತ್ರ- ಪಹಣಿ ವಿತರಿಸಿ: ಸಚಿವ ರವಿ

Team Udayavani, Aug 12, 2020, 3:22 PM IST

ಕಾಲಮಿತಿಯಲ್ಲಿ ಹಕ್ಕು ಪತ್ರ- ಪಹಣಿ ವಿತರಿಸಿ: ಸಚಿವ ರವಿ

ಕೊಪ್ಪ: ಕಾಲಮಿತಿಯಲ್ಲಿ ಹಕ್ಕುಪತ್ರ, ಪಹಣಿ ವಿತರಣೆಗೆ ಕ್ರಮ ವಹಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಮಂಗಳವಾರ ತಾಲೂಕಿನಲ್ಲಿ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ತಾಲೂಕು ಕಚೇರಿಯಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು. ಕಳೆದ 2 ವರ್ಷ 3 ತಿಂಗಳ ಹಿಂದೆ ಅಕ್ರಮ- ಸಕ್ರಮ ಸಮಿತಿಯಲ್ಲಿ ಮಂಜೂರಾದ ಹಕ್ಕುಪತ್ರ ಇನ್ನೂ ವಿತರಿಸಿಲ್ಲ. ವಿತರಣೆಯಾದ ಹಕ್ಕುಪತ್ರಗಳಿಗೆ ಪಹಣಿ ಹಾಕಿಲ್ಲ. ಇದರಿಂದ ರೈತರಿಗೆ ಸರ್ಕಾರದ ಯಾವುದೇ ಸವಲತ್ತು ಸಿಗುತ್ತಿಲ್ಲ. ಬೆಳೆಹಾನಿ ಪರಿಹಾರಕ್ಕೆ ಅರ್ಜಿ ಹಾಕಲು ಸಾಧ್ಯವಾಗುತ್ತಿಲ್ಲ. ಬ್ಯಾಂಕ್‌ನಿಂದ ಸಾಲ ಪಡೆಯಲು ಅವಕಾಶವಿರುವುದಿಲ್ಲ. ಇದರ ಜೊತೆಗೆ 94(ಸಿ) ಅರ್ಜಿಗಳು ವಿಲೇವಾರಿಯಾಗದೇ ಉಳಿದಿವೆ. ಫಲಾನುಭವಿಗಳು ತಾಲೂಕು ಕಚೇರಿಗೆ 2 ವರ್ಷದಿಂದ ಬರುತ್ತಲೇ ಇದ್ದಾರೆ. ವಿನಾಃಕಾರಣ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ಸ್ಥಳದಲ್ಲಿದ್ದ ಮಾಜಿ ಸಚಿವ ಡಿ.ಎನ್‌. ಜೀವರಾಜ್‌ ಸಿ.ಟಿ. ರವಿ ಅವರ ಗಮನಕ್ಕೆ ತಂದರು. ಕುಂಟು ನೆಪ ನೀಡಿ ಹಕ್ಕುಪತ್ರ ಮತ್ತು ಪಹಣಿಗೆ ಸತಾಯಿಸುವುದು ಸರಿಯಲ್ಲ. ದಾಖಲೆ ಸರಿಯಿಲ್ಲದಿದ್ದರೆ ಅರ್ಜಿಗಳನ್ನು ತಿರಸ್ಕರಿಸಿ, ಸರಿಯಿರುವುದನ್ನು ಅಂಗೀಕರಿಸಿ ಹಕ್ಕುಪತ್ರಗಳನ್ನು ಕಾಲಮಿತಿಯೊಳಗೆ ವಿತರಿಸಬೇಕು. ಹಕ್ಕುಪತ್ರಕ್ಕೆ ಯಾವುದೇ ಸಬೂಬು ಹೇಳದೇ ಪಹಣಿ ಹಾಕಿಕೊಡಬೇಕು ಎಂದು ಸಿ.ಟಿ. ರವಿ ಸೂಚಿಸಿದರು.

ಶಾಸಕ ಟಿ.ಡಿ. ರಾಜೇಗೌಡ ಮಾತನಾಡಿ, ಈಗಾಗಲೇ ಸಾಕಷ್ಟು ಹಕ್ಕಪತ್ರಗಳನ್ನು ಕೊಟ್ಟಿದ್ದೇವೆ. ಸರ್ಕಾರ ಈಗಾಗಲೇ ಅಕ್ರಮ- ಸಕ್ರಮ ಸಮಿತಿ ರಚನೆ ಮಾಡಿದೆ. ಮುಂದಿನ ದಿನಗಳಲ್ಲಿ ಸಮಿತಿ ಸಭೆ ಕರೆಯುವ ಮೂಲಕ ಫಾರಂ 50, 53 ಮತ್ತು 57 ಅಡಿ ಅರ್ಜಿ ಸಲ್ಲಿಸಿದ ರೈತರಿಗೆ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಒಟ್ಟು 34 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು. ಸಭೆಗೂ ಮುನ್ನ ತಾಲೂಕಿನ ಉತ್ತಿನಗದ್ದೆ ಮತ್ತು ನೈಬೀ ರಸ್ತೆ ಮುಂತಾದ ಕಡೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಜಿಪಂ ಅಧ್ಯಕ್ಷೆ ಸುಜಾತ ಕೃಷ್ಣಪ್ಪ, ಸದಸ್ಯರಾದ ಎಸ್‌.ಎನ್‌. ರಾಮಸ್ವಾಮಿ, ದಿವ್ಯ ದಿನೇಶ್‌, ತಾಪಂ ಅಧ್ಯಕ್ಷೆ ಜಯಂತಿ ನಾಗರಾಜ್‌, ಜಿಲ್ಲಾಧಿಕಾರಿ ಬಗಾದಿ ಗೌತಮ್‌, ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಅಕ್ಷಯ್‌, ಉಪವಿಭಾಗಾಧಿಕಾರಿ ಡಾ| ನಾಗರಾಜ್‌, ತಹಶೀಲ್ದಾರ್‌ ಪರಮೇಶ್ವರ್‌, ತಾಲೂಕು ಕಾರ್ಯ ನಿರ್ವಹಣಾಧಿಕಾರಿ ನವೀನ್‌ಕುಮಾರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

9

Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ

8

Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.