ದಾನ ಪ್ರವೃತ್ತಿ ರೂಢಿಸಿಕೊಳ್ಳಿ
Team Udayavani, Apr 26, 2020, 4:08 PM IST
ಜಗಳೂರು: ಪಟ್ಟಣದ ಎಪಿಎಂಸಿಯಲ್ಲಿ ಹಮಾಲಿ ಕಾರ್ಮಿಕರಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಹಾಗೂ ಶಾಸಕ ಎಸ್.ವಿ. ರಾಮಚಂದ್ರ ಆಹಾರ ಕಿಟ್ ವಿತರಿಸಿದರು.
ಜಗಳೂರು: ಅಮೇರಿಕ, ಚೀನಾ, ಇಟಲಿ ಸೇರಿದಂತೆ ಮುಂದುವರಿದ ರಾಷ್ಟ್ರಗಳಲ್ಲಿ ಕೋವಿಡ್ ಹಾವಳಿಯಿಂದ ಪ್ರತಿನಿತ್ಯ ಸಾವಿರಾರು ಜನ ಸಾಯುತ್ತಿದ್ದಾರೆ. ಆದರೆ ನಮ್ಮ ದೇಶದಲ್ಲಿ ಪರಿಸ್ಥಿತಿ ಕೈಮೀರದಂತೆ ಪ್ರಧಾನಿ ನೋಡಿಕೊಳ್ಳುತ್ತಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.
ಪಟ್ಟಣದ ತರಳುಬಾಳು ಕೆಂದ್ರದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಆಹಾರ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೋವಿಡ್ ಮಹಾ ಮಾರಿ ಇಡೀ ವಿಶ್ವವನ್ನೇ ನಡುಗಿಸಿದೆ. ಹಾಗಾಗಿ ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಇಂಥ ಕಷ್ಟದ ಪರಿಸ್ಥಿತಿಯಲ್ಲಿ ಉಳ್ಳವರು ಇಲ್ಲದವರಿಗೆ ದಾನ ಮಾಡುವಂತ ಗುಣಗಳನ್ನು ಬೆಳೆಸಿಕೊಳ್ಳಬೇಕು. ಫೋಟೋಗೆ ಫೋಸ್ ನೀಡುವಂತಹ ಕೆಲಸ ಮಾಡಬಾರದು ಎಂದರು.
ಯಾರು ಕೂಡ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ. ನೆಗಡಿ, ಕೆಮ್ಮು, ಜ್ವರ ಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು ಎಂದು ಸಲಹೆ ನೀಡಿದರು. ಶಾಸಕ ಎಸ್.ವಿ. ರಾಮಚಂದ್ರ ಮಾತನಾಡಿ, ಸವಿತಾ ಸಮಾಜ, ಅಲೆಮಾರಿ ಸಮಾಜ, ಛಾಯಾಗ್ರಾಹಕರು, ಆಟೋ ಚಾಲಕರು,ಬಟ್ಟೆ ಹೊಲೆಯುವವರು ಸೇರಿದಂತೆ ಬಹುತೇಕ ಸಮುದಾಯಗಳಿಗೆ ಸುಮಾರು 2 ಸಾವಿರ ಆಹಾರ ಕಿಟ್‌ಗಳನ್ನು ವಿತರಿಸಲಾಗಿದೆ ದಾನಿಗಳು ಸಹಕಾರ ನೀಡುತ್ತಿದ್ದು ಆರ್ಹರಿಗೆ ಆಹಾರದ ಕಿಟ್
ಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ನಂತರ ಪಟ್ಟಣದ ಎಪಿಎಂಸಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಮಾಲರಿಗೆ ಆಹಾರ ಕಿಟ್‌ಗಳನ್ನು ಸಂಸದರು ವಿತರಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಹುಲ್ಲುಮನಿ ತಿಮ್ಮಣ್ಣ, ತಾಪಂ ಇಒ ಮಲ್ಲಾ ನಾಯ್ಕ, ಸಿಪಿಐ ದುರುಗಪ್ಪ, ಪಿಎಸ್‌ಐ ಉಮೇಶ್‌ಬಾಬು, ಎಪಿಎಂಸಿ ಕಾರ್ಯದರ್ಶಿ ಯೋಗರಾಜು, ಅಧ್ಯಕ್ಷ ಹನುಮಂತಪ್ಪ, ಮಾಜಿ ಅಧ್ಯಕ್ಷ ಡಕ್ ರಾಜಣ್ಣ, ಬಿಜೆಪಿ ತಾಲೂಕು ಅಧ್ಯಕ್ಷ ಪಲ್ಲಾಗಟ್ಟೆ ಮಹೇಶ್, ಮುಖಂಡರಾದ ಬಿಸ್ತುವಳ್ಳಿ ಬಾಬು, ಸೂರರೆಡ್ಡಿಹಳ್ಳಿ ಶರಣಪ್ಪ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ
C.T.Ravi ಪರವಾಗಿ ಸ್ವಾಮಿ ಕೊರಗಜ್ಜನ ಮೊರೆ ಹೋದ ಬಿಜೆಪಿ ಕಾರ್ಯಕರ್ತರು
Mahakumbha Mela: ಕುಂಭಮೇಳದಲ್ಲಿ ಶೃಂಗೇರಿ ಸಹಿತ 4 ಆಮ್ನಾಯ ಪೀಠದ ಶ್ರೀಗಳು ಭಾಗಿ
Threat letter: ಚಿಕ್ಕಮಗಳೂರು ಅಂಚೆ ಕಚೇರಿಯಿಂದ ಸಿ.ಟಿ.ರವಿಗೆ ಬೆದರಿಕೆಗೆ ಪತ್ರ ರವಾನೆ!
Kottigehara: ಸ್ವೀಟ್ ಬಾಕ್ಸ್‌ನಲ್ಲಿ ಗೋಮಾಂಸ ಇಟ್ಟು ಮಾರಾಟ: ಇಬ್ಬರ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.