ಸಜ್ಜನ ವ್ಯಕ್ತಿತ್ವದ ಜಯಪ್ರಕಾಶ್ ಹೆಗ್ಡೆ ಗೆಲ್ಲಿಸಿ: ಶಾಸಕ ಎಚ್.ಡಿ.ತಮ್ಮಯ್ಯ
ಬಡವರ ಬದುಕನ್ನು ಹಸನುಗೊಳಿಸಲು ಕಾಂಗ್ರೆಸ್ ಅನ್ನು ಬೆಂಬಲಿಸಿ
Team Udayavani, Apr 17, 2024, 12:48 PM IST
ಉದಯವಾಣಿ ಸಮಾಚಾರ
ಚಿಕ್ಕಮಗಳೂರು: ಸರಳ ಸಜ್ಜನಿಕೆ ವ್ಯಕ್ತಿತ್ವದ ಕೆ.ಜಯಪ್ರಕಾಶ್ ಹೆಗ್ಡೆಯವರು ಹಿಂದೆ ಸಂಸದರಾಗಿ ಮಾಡಿದ ಅಭಿವೃದ್ಧಿ ಕಾರ್ಯ
ಕ್ರಮಗಳು ಇಂದಿಗೂ ಜನಮಾನಸದಲ್ಲಿ ಉಳಿದಿವೆ. ಅವರನ್ನು ಮತ್ತೊಮ್ಮೆ ಸಂಸದರನ್ನಾಗಿ ಮಾಡುವಂತೆ ಶಾಸಕ ಎಚ್.ಡಿ. ತಮ್ಮಯ್ಯ ಮನವಿ ಮಾಡಿದರು.
ಮಂಗಳವಾರ ನಗರದ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಮನೆ-ಮನೆಗೆ ಕರಪತ್ರ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಹಿಂದುಳಿದ ದೀನದಲಿತರ, ಬಡವರ ಬದುಕನ್ನು ಹಸನುಗೊಳಿಸಲು ಕಾಂಗ್ರೆಸ್ ಅನ್ನು ಬೆಂಬಲಿಸುವಂತೆ ತಿಳಿಸಿದರು.
ರಾಜ್ಯ ಸರ್ಕಾರದ 5 ಗ್ಯಾರಂಟಿಗಳ ಜೊತೆಗೆ ರಾಷ್ಟ್ರೀಯ ಕಾಂಗ್ರೆಸ್ ಬಿಡುಗಡೆ ಮಾಡಿರುವ 5 ಗ್ಯಾರಂಟಿ ಯೋಜನೆಗಳ ಪ್ರತಿಗಳನ್ನು
ಮನೆಗಳಿಗೆ ನೀಡಿ ಮತ ನೀಡುವಂತೆ ಮನವರಿಕೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಮುಖ್ಯಮಂತ್ರಿ
ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಬಿಡುಗಡೆ ಮಾಡಿರುವ
ಚುನಾ ವಣಾ ಪ್ರಣಾಳಿಕೆಯಾಗಿ 5 ನ್ಯಾಯಗಳಾದ ಯುವನ್ಯಾಯ, ರೈತನ್ಯಾಯ, ಪಾಲು ದಾರಿಕೆ ನ್ಯಾಯ, ಮಹಿಳಾ ನ್ಯಾಯ,
ಶ್ರಮಿಕ ನ್ಯಾಯ ಇವುಗಳ ಗ್ಯಾರಂಟಿ ಕಾರ್ಡನ್ನು ಮತದಾರರಿಗೆ ನೀಡಿ ಮತ ಕೇಳುತ್ತೇವೆಂದು ತಿಳಿಸಿದರು. ವಿಧಾನಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಸಹಿಸಿಕೊಳ್ಳದೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಮಹಿಳೆಯರನ್ನು ಅಪಮಾನಿಸುವ ಕೆಲಸ ಮಾಡಿದ್ದಾರೆ. ಅವರ ಹೇಳಿಕೆ ಖಂಡನೀಯ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಮಂಜೇಗೌಡ ಮಾತನಾಡಿ, ಜಯಪ್ರಕಾಶ್ ಹೆಗ್ಡೆ ಗೆಲುವಿಗೆ ಪ್ರತಿ ಮನೆಗೆ 5 ಗ್ಯಾರಂಟಿಗಳನ್ನು ಮನವರಿಕೆ ಮಾಡಲು ಕರಪತ್ರ ಹಂಚುತ್ತಿದ್ದೇವೆ. ಈ ನಿಟ್ಟಿನಲ್ಲಿ ಭ್ರಷ್ಟ ಬಿಜೆಪಿ ಸರ್ಕಾರವನ್ನು ತೊಲಗಿಸಿ ಜನರ ಬದುಕಿಗೆ ಆಶ್ರಯ ನೀಡುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕೆಂದು ವಿನಂತಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪ ಗೌಡ, ಡಾ| ಡಿ.ಎಲ್. ವಿಜಯಕುಮಾರ್, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎಲ್. ಮೂರ್ತಿ, ನಗರಸಭೆ ಸದಸ್ಯರಾದ ಲಕ್ಷ್ಮಣ, ಮಂಜುಳಾ ಲಕ್ಷ್ಮಣ, ಸಿ.ಪಿ. ಲಕ್ಷ್ಮಣ, ಕಾವ್ಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.