Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್ ನಲ್ಲಿ ಲೈಂಗಿಕ ಕಿರುಕುಳ ಆರೋಪ
Team Udayavani, Sep 22, 2024, 3:19 PM IST
ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಜಿಲ್ಲೆಯ ಕಡೂರು ಪಟ್ಟಣದಲ್ಲಿ ಕೇಳಿ ಬಂದಿದೆ.
ಕಡೂರು ಪಟ್ಟಣದ ಸಲೂನ್ ವೊಂದಕ್ಕೆ 8 ವರ್ಷದ ಮಗುವನ್ನ ಮಗುವಿನ ತಾಯಿ ಕಟ್ಟಿಂಗ್ ಗಾಗಿ ಕರೆದುಕೊಂಡು ಬಂದಿದ್ದಳು. ಈ ವೇಳೆ ಮಗುವನ್ನು ಕಟ್ಟಿಂಗ್ ಶಾಪ್ ನಲ್ಲಿ ಬಿಟ್ಟು ಮನೆಯನ್ನು ಬೀಗ ಹಾಕಿಕೊಂಡು ಬರುತ್ತೇನೆ ಎಂದು ಹೇಳಿ ಹೋದಾಗ ಆಕೆ ಬರುವಷ್ಟರಲ್ಲಿ ಕಟ್ಟಿಂಗ್ ಶಾಪ್ ವ್ಯಕ್ತಿ ಸಲೂನ್ ಬಾಗಿಲು ಹಾಕಿಕೊಂಡು ಮಗುವಿನ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಈ ವೇಳೆ ಮಗು ಕಿರುಚಿ ಕೊಂಡಿದ್ದು ಸ್ಥಳಕ್ಕೆ ಬಂದ ತಾಯಿ ಕೂಡ ಕಿರುಚಾಡಿದ್ದಾಳೆ. ಈ ವೇಳೆ ಸಲೂನ್ ವ್ಯಕ್ತಿ ಮಗುವಿಗೆ ಲೈಂಗಿಕ ದೌರ್ಜನ್ಯ ನೀಡಿದ್ದಾನೆಂದು ಆರೋಪಿಸಿ ಒಂದು ಕೋಮಿನ ಸಾವಿರಾರು ಜನ ಸೇರಿ ಕಟ್ಟಿಂಗ್ ಶಾಪ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಕಟ್ಟಿಂಗ್ ಶಾಪ್ ವ್ಯಕ್ತಿಯ ಮೇಲೂ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಸಲೂನ್ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಕಲ್ಲು ತೂರಾಟ ನಡೆಸಿದ್ದು ಈ ವೇಳೆ ನಾಲ್ವರು ಮಹಿಳೆಯರಿಗೆ ಕಲ್ಲು ಬಿದ್ದು ಗಾಯಗಳಾಗಿವೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಚ್ ನಡೆಸಿದ್ದಾರೆ.
ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಸಲೂನ್ ವ್ಯಕ್ತಿ ಮೇಲೆ ಪೊಸ್ಕೋ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.