ಕಡೂರು: ಎಲ್ಲೆಡೆ ಹೆಚ್ಚಿದ ಜನಸಂದಣಿ

Team Udayavani, May 5, 2020, 6:47 PM IST

ಕಡೂರು: ಎಲ್ಲೆಡೆ ಹೆಚ್ಚಿದ ಜನಸಂದಣಿ

ಕಡೂರು: ಲಾಕ್‌ಡೌನ್‌ನಿಂದ ಸಡಿಲಿಕೆ ದೊರೆತಿದ್ದೇ ತಡ ಸೋಮವಾರ ಪಟ್ಟಣವು ಜನ ಮತ್ತು ವಾಹನ ಸಂದಣಿಯಿಂದ ತುಂಬಿ ತುಳುಕುತ್ತಿತ್ತು. ಚಿಕ್ಕಮಗಳೂರು ಜಿಲ್ಲೆ ಗ್ರೀನ್‌ ವಲಯದಲ್ಲಿ ಗುರುತಿಸಿಕೊಂಡ ಹಿನ್ನೆಲೆಯಲ್ಲಿ ಸರ್ಕಾರ ಸಡಿಲಿಕೆ ಘೋಷಿಸಿದ್ದರ ಪರಿಣಾಮ ರೈಲ್ವೆ, ಸಿನಿಮಾ, ಶಾಲಾ ಕಾಲೇಜು ಹೊರತು ಪಡಿಸಿ ಉಳಿದೆಲ್ಲಾ ಚಟುವಟಿಕೆಗಳು ಹಿಂದಿನಂತೆ ಕಾರ್ಯಾರಂಭ ಮಾಡಿದವು.

ಕಳೆದ 45 ದಿನಗಳಿಂದ ಬಾಗಿಲು ಹಾಕಿದ್ದ ಅಂಗಡಿ, ಹೊಟೇಲ್‌ ಮಾಲೀಕರು ಬೆಳಗ್ಗೆ ಪೂಜೆ ಸಲ್ಲಿಸಿ ಶುಭಾರಂಭ ಮಾಡಿದರು. ಹೊಟೇಲ್‌ಗ‌ಳು ಬಹುತೇಕ ತೆರೆದಿದ್ದು ಪಾರ್ಸಲ್‌ಗೆ ಮಾತ್ರ ಸೀಮಿತವಾಗಿವೆ. ಬೇಕರಿ, ಕಬ್ಬಿಣ, ಸಿಮೆಂಟ್‌, ಹಾರ್ಡ್ ವೇರ್‌, ಬಟ್ಟೆ ಅಂಗಡಿ, ಎಲೆಕ್ಟ್ರಿಕಲ್‌, ಹಣ್ಣು, ವೈನ್‌ ಶಾಪ್‌ಗ್ಳು ತೆರೆದು ವ್ಯಾಪಾರ ನಡೆಸುತ್ತಿದ್ದವು.

ಅಂಗಡಿ ಮುಂಗಟ್ಟುಗಳ ಮುಂದೆ ಖರೀದಿಗೆ ಸೇರುವ ಜನರು ಅಂತರ ಕಾಪಾಡುತ್ತಿಲ್ಲ. ಯುವಕರು ಮಾಸ್ಕ್ ಧರಿಸದೇ ಓಡಾಡುತ್ತಿದ್ದ ದೃಶ್ಯಗಳು ಕಂಡು ಬರುತ್ತಿವೆ. ಕಡೂರು ಕೆಎಸ್‌ಆರ್‌ಟಿಸಿ  ಬಸ್‌ ನಿಲ್ದಾಣದಲ್ಲಿ ಬಸ್‌ ಸಂಚಾರ ಆರಂಭವಾಗಿದ್ದು. ಕಡೂರು- ಚಿಕ್ಕಮಗಳೂರು, ತರೀಕೆರೆ ಪಟ್ಟಣಗಳಿಗೆ ಬಸ್‌ ಸಂಚಾರ ಆರಂಭವಾಗಿದೆ. ನಿಲ್ದಾಣಕ್ಕೆ ಬರುವ ಪ್ರಯಾಣಿಕರಿಗೆ ಅವರು ತೆರಳುವ ಊರು ಯಾವುದೆಂದು ತಿಳಿದು ವ್ಯವಸ್ಥೆ ಮಾಡಿ ಒಂದು ಬಸ್‌ನಲ್ಲಿ 27 ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಿದ್ದೇವೆ. ಚಿಕ್ಕಮಗಳೂರು ಮತ್ತು ತರೀಕೆರೆಗೆ ಈಗಾಗಲೇ 22 ಟ್ರಿಪ್‌ ಕಳುಹಿಸಲಾಗಿದೆ. ಪ್ರತಿಯೊಬ್ಬ ಪ್ರಯಾಣಿಕರು ಅಂತರ ಕಾಪಾಡಿಕೊಂಡು ಇರಲು ಸೂಚಿಸಿದ್ದು ಮಾಸ್ಕ್ ಧರಿಸಿದ್ದರೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ನಿಲ್ದಾಣಕ್ಕೆ ಬಂದಾಕ್ಷಣ ಅವರನ್ನು ಸಾರಿಗೆ ನೌಕರರೇ ಟೆಂಪರೇಚರ್‌ ಖಚಿತಪಡಿಸಿಕೊಂಡು ನಂತರ ಅವರ ಊರುಗಳಿಗೆ ಕಳುಹಿಸಲಾಗುತ್ತಿದೆ. ಈಗಾಗಲೇ ಓರ್ವರಿಗೆ ಟೆಂಪರೇಚರ್‌ ಹೆಚ್ಚಾಗಿದ್ದರಿಂದ ಕಡೂರು ಆಸ್ಪತ್ರೆಗೆ ಕಳುಹಿಸಿದ್ದೇವೆ ಎಂಬ ಮಾಹಿತಿಯನ್ನು ಡಿಪೋ ವ್ಯವಸ್ಥಾಪಕ ಚನ್ನಬಸವೇಗೌಡರು ತಿಳಿಸಿದರು.

ಚಿಕ್ಕಮಗಳೂರು ಡಿಪೋದಲ್ಲಿ ಕೆಲಸ ಮಾಡುತ್ತಿದ್ದೇನೆ. 42 ದಿನಗಳಿಂದ ಕೆಲಸವಿರಲಿಲ್ಲ. ಇವತ್ತಿನಿಂದ ಪ್ರಾರಂಭವಾಗಿದೆ. ಮನೆಯಲ್ಲಿರಲು ಹಿಂಸೆಯಾಗುತ್ತಿತ್ತು. ನಿಲ್ದಾಣದಲ್ಲಿ ಸ್ಯಾನಿಟೈಸರ್‌ನಿಂದ ಕೈ ಶುದ್ಧೀಕರಿಸಿದ ನಂತರ ಬಸ್‌ ಹತ್ತಲು ಅವಕಾಶ ನೀಡುತ್ತೇವೆ. ಮಾಸ್ಕ್ ಧರಿಸಿಲ್ಲ ಎಂದರೆ ಪ್ರಯಾಣಿಕರನ್ನು ಕರೆದೊಯ್ಯುವುದಿಲ್ಲ.?– ಸುಗಮೇಶ್‌ ಬಿ.ಎಸ್‌., ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

Lokayukta

Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

Naxal-Meeting

Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್‌ ಮುಕ್ತವಾಯಿತೇ?

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.