Kaduru; ಗಾಂಜಾ ಮತ್ತಿನಲ್ಲಿ ಗನ್, ಡ್ರ್ಯಾಗರ್ ಹಿಡಿದು ತಿರುಗುತ್ತಿದ್ದವ ಪೊಲೀಸ್ ಬಲೆಗೆ
Team Udayavani, Oct 9, 2023, 12:54 PM IST
ಚಿಕ್ಕಮಗಳೂರು: ಗಾಂಜಾ ಮತ್ತಿನಲ್ಲಿ ಗನ್ ಹಿಡಿದು ತಿರುಗಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ಆರೋಪಿಯಿಂದ ಗನ್ ಹಾಗೂ ಜೀವಂತ ಗುಂಡುಗಳನ್ನು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ.
ಬೀರೂರು ಮೂಲದ ಸಮೀರ್ ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ ಒಂದು ಲೋಡೆಡ್ ಗನ್, ಹತ್ತು ಸಜೀವ ಗುಂಡುಗಳು, ಎರಡು ಚಾಕು, ಒಂದು ಡ್ರಾಗರ್, 40 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗಾಂಜಾ ವ್ಯಸನಿಯಾಗಿದ್ದ ಸಮೀರ್, ಭಾನುವಾರ ರಾತ್ರಿ ವೇಳೆ ಕಡೂರು ಪಟ್ಟಣದ ಎಪಿಎಂಸಿ ಆವರಣದಲ್ಲಿ ಗನ್ ಹಾಗೂ ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುತ್ತಿದ್ದ. ಅಲ್ಲದೆ ಸಾರ್ವಜನಿಕರಿಗೆ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ. ಇದರಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದರು.
ಇದನ್ನೂ ಓದಿ:Assembly Election; ಪಂಚರಾಜ್ಯ ಚುನಾವಣೆಗೆ ಮುಹೂರ್ತ ನಿಗದಿ: ನ.7 ರಿಂದ ಡಿ.3 ವರೆಗೆ ಮತಹಬ್ಬ
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಸ್ಥಳೀಯರ ಸಹಕಾರದಿಂದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಆರೋಪಿ ಸಮೀರ್ ಸೆಕೆಂಡ್ ಹ್ಯಾಂಡ್ ವಾಹನ ಮಾರಾಟ ವೃತ್ತಿ ಮಾಡುತ್ತಿದ್ದ ಎನ್ನಲಾಗುತ್ತಿದ್ದು, ಅಕ್ರಮವಾಗಿ ಗನ್ ಖರೀದಿಸಿ ತನ್ನಲ್ಲಿ ಇಟ್ಟುಕೊಂಡಿದ್ದ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.