ಶಿಕ್ಷಕರಿಂದ ಲಂಚ : ಕಡೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ
Team Udayavani, Oct 19, 2022, 8:07 AM IST
ಕಡೂರು: ಶಾಲೆಯೊಂದಕ್ಕೆ ನಿಯೋಜನೆ ಮಾಡಲು ಶಿಕ್ಷಕರೊಬ್ಬರಿಂದ ಲಂಚ ಪಡೆಯುವಾಗ ಕಡೂರು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್ ಜಯಣ್ಣ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಸಹ ಶಿಕ್ಷಕ ಎನ್.ಎಸ್ ರಾಜಪ್ಪ ಅವರಿಂದ 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ಕ್ಷೇತ್ರ ಶಿಕ್ಷಣಾಕಾರಿ ಕೆ.ಎನ್ ಜಯಣ್ಣ ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕರುಗಳಾದ ಸಚ್ಚಿನ್ ಮತ್ತು ಬಿ.ಮಲ್ಲಿಕಾರ್ಜುನ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ತಾಲ್ಲೂಕಿನ ಜಿ.ತಿಮ್ಮಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿಯೋಜನೆ ಮೇರೆಗೆ ಕರ್ತವ್ಯದಲ್ಲಿದ್ದ ರಾಜಪ್ಪ ಅವರನ್ನು ಗರ್ಜೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಿಯೋಜನೆ ಮಾಡಲು ಕ್ಷೇತ್ರ ಶಿಕ್ಷಣಾಕಾರಿಗಳು ಹಣದ ಬೇಡಿಕೆ ಇಟ್ಟಿದ್ದು, ಮಂಗಳವಾರ ಈ ಸಂಬಂಧ ಶಿಕ್ಷಕ ರಾಜಪ್ಪ ಅವರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಜಿ.ತಿಮ್ಮಾಪುರ ಗೇಟ್ನಲ್ಲಿ 15 ಸಾವಿರ ಲಂಚ ನೀಡುವಾಗ ಸಿಕ್ಕಿಬಿದ್ದಿದ್ದಾರೆ.
ಇದನ್ನೂ ಓದಿ : ಬಾಗಲಕೋಟೆ : ಪ್ರೇಮಿಗಳನ್ನು ಒಂದು ಮಾಡುವುದಾಗಿ ನಂಬಿಸಿ ಕರೆದೊಯ್ದು ಮರ್ಯಾದಾ ಹತ್ಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.