ಬ್ಲಡ್‌ಬ್ಯಾಂಕ್ ಸ್ಥಾಪನೆಗೆ ಮುಂದಾಗಿ: ಕೆಂಪರಾಜು
Team Udayavani, Apr 22, 2020, 4:38 PM IST
ಕಡೂರು: ಪಟ್ಟಣದ ನಂದಿ ಕ್ರೀಡಾಭವನದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಭರತ್ ಕೆಂಪರಾಜು ಆಯೋಜಿಸಿದ್ದ ರಕ್ತ ಸಂಗ್ರಹ ಕಾರ್ಯಕ್ರಮದಲ್ಲಿ ಯುವಕರು ರಕ್ತ ನೀಡಿದರು.
ಕಡೂರು: ಕಡೂರು ಸಾರ್ವಜನಿಕ ಆಸ್ಪತ್ರೆಗೆ ತುರ್ತಾಗಿ ಬ್ಲಡ್ ಬ್ಯಾಂಕ್ ಅವಶ್ಯಕತೆ ಇದೆ. ಆದ್ದರಿಂದ ಶಾಸಕರು ಗಮನ ಹರಿಸಿ ಬ್ಲಡ್ ಬ್ಯಾಂಕ್ ತೆರೆಯಲು ಮುಂದಾಗಬೇಕೆಂದು ಜಿಪಂ ಮಾಜಿ ಅಧ್ಯಕ್ಷ ಕೆ.ಎಂ. ಕೆಂಪರಾಜು ಹೇಳಿದರು.
ಪಟ್ಟಣದ ನಂದಿ ಕ್ರೀಡಾಭವನದಲ್ಲಿ ಕಾಂಗ್ರೆಸ್ ಯುವಮುಖಂಡ ಕೆ.ಎಂ. ಭರತ್ ಕೆಂಪರಾಜು ಮತ್ತು ಎನ್‌ಎಸ್ ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಯಾಣ ತೇಜಸ್ವಿ ಮತ್ತು ಯುವ ಕಾಂಗ್ರೆಸ್ ಅಧ್ಯಕ್ಷ ಬೀರೂರು ಹರ್ಷ, ಬೀರೂರು ಸ್ವಾಭಿಮಾನಿ ಬಳಗದ ವತಿಯಿಂದ ಆಯೋಜಿಸಲಾಗಿದ್ದ ರಕ್ತ ಸಂಗ್ರಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಹಿಂದೆ ರೆಡ್‌ಕ್ರಾಸ್ ಸಂಸ್ಥೆಯ ಸಹಕಾರದಿಂದ ರಕ್ತನಿಧಿ ಘಟಕ ಆರಂಭಿಸಲಾಗಿತ್ತು. ಆದರೆ ಕಾಲಕ್ರಮೇಣ ಚಿಕ್ಕಮಗಳೂರಿಗೆ ವರ್ಗಾವಣೆಗೊಂಡಿತು. ಕಡೂರು- ಬೀರೂರು ಪಟ್ಟಣಗಳು ದಿನೇ ದಿನೇ ಬೆಳೆಯುತ್ತಿವೆ. ರಾಷ್ಟ್ರೀಯ ಹೆದ್ದಾರಿ ಅವಳಿ ಪಟ್ಟಣದಲ್ಲಿ ಹಾದು ಹೋಗಿದ್ದು ಅಫಘಾತ ವಲಯವೆಂದು ಗುರುತಿಸಿಕೊಂಡಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಂ. ವಿನಾಯಕ ಮಾತನಾಡಿದರು. ಚಿಕ್ಕಮಗಳೂರಿನ ವಿಶ್ವ ವುಮೇನ್ ಆ್ಯಂಡ್ ಚೈಲ್ಡ್ ವೆಲ್‌ಫೇರ್ ಆರ್ಗನೈಸೇಷನ್‌ನ ಬ್ಲಾಡ್ ಬ್ಯಾಂಕಿನ ವ್ಯವಸ್ಥಾಪಕ ತಿಮ್ಮಯ್ಯ ಮತ್ತು ಸಿಬ್ಬಂದಿ ವರ್ಗದವರು ಸುಮಾರು 56 ಜನರ ರಕ್ತವನ್ನು ಸಂಗ್ರಹಿಸಿದರು. ಪತ್ರಕರ್ತರಾದ ಬಾಲುಮಚ್ಚೇರಿ 54 ನೇ ಬಾರಿ ರಕ್ತ ನೀಡಿ ವೈಯಕ್ತಿಕ ದಾಖಲೆ ಮಾಡಿದರೆ ಮತ್ತೋರ್ವ ಪತ್ರಕರ್ತ ನಾಗೇಂದ್ರ ಪ್ರಸಾದ್ 8 ನೇ ಬಾರಿ ರಕ್ತ ನೀಡಿದರು. ಭರತ್ ಕೆಎಂಕೆ, ಕಾಂಗ್ರೆಸ್ ಕಿಸಾನ್ ಸೆಲ್‌ನ ಬೀರೂರು ಘಟಕದ ಅಧ್ಯಕ್ಷ ಪ್ರದೀಪ್ ಹಾಗೂ ಯುವಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.