ಭದ್ರಾ ಕುಡಿಯುವ ನೀರಿನ ಯೋಜನೆಗೆ ಕೋಟಿ ರೂ.
Team Udayavani, Jun 29, 2020, 4:32 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕಡೂರು: ಭದ್ರಾ ಕುಡಿಯುವ ನೀರಿನ ಶಾಶ್ವತ ತೊಂದರೆ ನಿವಾರಣೆಗೆ ಒಂದು ಕೋಟಿ ರೂ. ಮಂಜೂರಾಗಿದೆ ಎಂದು ಬೆಳ್ಳಿಪ್ರಕಾಶ್ ಹೇಳಿದರು.
ಭಾನುವಾರ ತರೀಕೆರೆ ಸಮೀಪದ ಕುಡಿಯುವ ನೀರಿನ ಶುದ್ಧೀಕರಣ ಘಟಕದ ವೀಕ್ಷಣೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಕ್ಕವಳ್ಳಿ ಡ್ಯಾಂನಿಂದ ಪೈಪ್ ಲೈನ್ ಮೂಲಕ ಕಡೂರು-ಬೀರೂರು ಪಟ್ಟಣಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆಯಿಂದ ಹಲವಾರು ವರ್ಷಗಳಿಂದ ಕುಡಿಯುವ ನೀರಿಗೆ ತೊಂದರೆಯಾಗದಂತೆ ಪಟ್ಟಣದ ಜನತೆ ನೆಮ್ಮದಿಯಿಂದ ನೀರು ಕುಡಿಯುತ್ತಿದ್ದು, ಲಕ್ಕವಳ್ಳಿ ಮತ್ತು ತರೀಕೆರೆ ಸಮೀಪದ ಶುದ್ಧೀಕರಣ ಘಟಕಗಳಲ್ಲಿ ಪದೇ ಪದೆ ಪಂಪ್ ಗಳು ದುರಸ್ತಿಗೆ ಬರುತ್ತಿತ್ತು. ಇದರ ಶಾಶ್ವತ ಪರಿಹಾರಕ್ಕೆ ಒಂದು ಕೋಟಿ ರೂ. ಮಂಜೂರಾಗಿದ್ದು, ಟೆಂಡರ್ ಕರೆಯಲಾಗಿದೆ ಎಂದು ತಿಳಿಸಿದರು.
ಶುದ್ದಿಕರಣ ಘಟಕಗಳಲ್ಲಿ ಪಂಪ್ ಗಳು ಪದೇ ಪದೇ ಕೈಕೊಡುವುದರಿಂದ ಪಟ್ಟಣಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗುತ್ತಿರುವುದು ಸಾಮಾನ್ಯವಾಗಿದೆ. ಶಾಶ್ವತ ಪರಿಹಾರಕ್ಕಾಗಿ ಎರಡು ಹೊಸ ಪಂಪ್ ಗಳನ್ನು ಖರೀದಿ ಮಾಡಲು ಈಗಾಗಲೇ ಟೆಂಡರ್ ಕರೆಯಲಾಗಿದೆ. ಒಂದು ಪಂಪ್ ಖರೀದಿಸಿಲು 65 ಲಕ್ಷ ರೂ. ವೆಚ್ಚವಾಗುತ್ತಿತ್ತು. ಎರಡು ಹೊಸ ಪಂಪ್ ಗಳನ್ನು ಅಳವಡಿಕೆ ಮಾಡುವುದರಿಂದ ನೀರಿಗಾಗಿ ಪದೇ ಪದೆ ಅನುಭವಿಸುವ ತೊಂದರೆಗೆ ಶಾಶ್ವತ ಪರಿಹಾರ ದೊರಕಲಿದೆ ಎಂದರು.
ಘಟಕದ ಕಟ್ಟಡಕ್ಕೆ ಸುಣ್ಣ-ಬಣ್ಣ ಕಾರ್ಯ ಪೂರ್ಣಗೊಳಿಸಲಾಗಿದೆ. ಘಟಕದ ಆವರಣದ ಸುತ್ತ ವಿದ್ಯುತ್ ದೀಪಗಳನ್ನು ಅಳವಡಿಸುವ ಕಾರ್ಯ ನಡೆಯುತ್ತಿದೆ. ಇದರಿಂದಾಗಿ ನಾವು ಸೂಚಿಸಿದ ಕಾರ್ಯಗಳಲ್ಲಿ ಶೇ.50 ಕಾಮಗಾರಿಗಳು ಮುಗಿದಿವೆ ಎಂದರು. ಮುಂಬರುವ ದಿನಗಳಲ್ಲಿ ಕಡೂರು-ಬೀರೂರು ಪಟ್ಟಣಗಳಿಗೆ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆಯಾಗದಂತೆ ಅನುಕೂಲಕರವಾಗಲು ಈಗಿನಿಂದಲೇ ಜವಾಬ್ದಾರಿ ಯುತವಾಗಿ ಕಾರ್ಯನಿರ್ವಹಿಸಲು ತಿಂಗಳಲ್ಲಿ ಎರಡು ಬಾರಿಯಾದರೂ ಪಂಪ್ ಹೌಸ್‌ಗಳಿಗೆ ಭೇಟಿ ನೀಡಲಾಗುವುದು. ಪಂಪ್‌ಹೌಸ್‌ಗಳಲ್ಲಿ ರಾತ್ರಿ ಪಾಳೆಯದಲ್ಲಿ ಕಾರ್ಯನಿರ್ವಹಿಸುವ ಕೆಲಸಗಾರರಿಗೆ ವಿಶ್ರಾಂತಿ ಕೊಠಡಿ ವ್ಯವಸ್ಥೆ ಕಲ್ಪಿಸಲು ಅಂದಾಜಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಬೀರೂರು ಪುರಸಭಾ ಸದಸ್ಯರಾದ ಸುದರ್ಶನ್, ಮಾರ್ಗದ ಮಧು, ಮುಖಂಡ ಕೆ.ಆರ್. ಚಂದ್ರು ಮತ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
MUST WATCH
ಹೊಸ ಸೇರ್ಪಡೆ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.