ಕಾರ್ಯಸಾಧನೆಗೆ ಭಗವಂತನ ಅನುಗ್ರಹ ಅಗತ್ಯ

ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳ ಅಭಿಮತ

Team Udayavani, Feb 29, 2020, 6:25 PM IST

29-February-35

ಕಳಸ: ಯಾವುದಾದರೂ ಕಾರ್ಯ ಸಾಧ್ಯವಾಗ ಬೇಕಾದರೆ ಭಗವಂತನ ಅನುಗ್ರಹ ಮತ್ತು ಪರಿಪೂರ್ಣ ಪ್ರಯತ್ನ ಇವೆರಡೂ ಇರಬೇಕು. ಇವೆರಡರಲ್ಲಿ ಯಾವುದಾದರೂ ಒಂದು ಇಲ್ಲವೆಂದರೂ ನಾವಂದುಕೊಂಡ ಕೆಲಸವಾಗಲು ಸಾಧ್ಯವಿಲ್ಲ ಎಂದು ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದ ಕಿರಿಯ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಹೇಳಿದರು.

ಶುಕ್ರವಾರ ಕಳಸದ ಕಲಶೇಶ್ವರ ಸ್ವಾಮಿ ದೇವಸ್ಥಾನದ ಯಾಗಶಾಲೆಯ ಶಿಲಾನ್ಯಾಸ ಹಾಗೂ ನೂತನ ಶ್ರೀ ಪಾರ್ವತಿ ಕಲಶೇಶ್ವರಸ್ವಾಮಿ ದಾಸೋಹ ಭವನದ ಉದ್ಘಾಟನೆ ನೆರವೇರಿಸಿದ ನಂತರ ಆಶೀರ್ವಚನ ನೀಡಿದರು.

ನಮ್ಮ ಜೀವನಕ್ಕೆ ಭಗವಂತನ ಅನುಗ್ರಹ ಅತೀ ಮುಖ್ಯ. ಭಗವಂತನ ಅನುಗ್ರಹವನ್ನು ಪಡೆಯುವುದು ನಮ್ಮ ಕರ್ತವ್ಯ. ಇದರಿಂದ ನಮ್ಮ ಜೀವನವನ್ನು ಸುಗಮಗೊಳಿಸಬಹುದು. ಮಾನವ ಜನ್ಮ ಅತ್ಯಂತ ಶ್ರೇಷ್ಠವಾದ ಜನ್ಮ. ಈ ಜನ್ಮವನ್ನು ವ್ಯರ್ಥ ಮಾಡದೆ ದಿನದಲ್ಲಿ ಒಂದು ಸಮಯವನ್ನು ಆಧ್ಯಾತ್ಮಿಕವಾಗಿ ಮುಂದುವರೆಯಲು ಮೀಸಲಿಡಬೇಕು ಎಂದರು.

ದೇಶಾದಾದ್ಯಂತ ಅನೇಕ ಪ್ರಸಿದ್ಧ ಕ್ಷೇತ್ರಗಳಿವೆ. ಈ ಕ್ಷೇತ್ರಗಳನ್ನು ಚೆನ್ನಾಗಿಟ್ಟುಕೊಳ್ಳಬೇಕು. ಭಗವಂತನ ಸಾನ್ನಿಧ್ಯ, ಅಲ್ಲಿಯ ಪೂಜಾ ವಿಧಾನ, ಸಂಪ್ರದಾಯಗಳನ್ನು ಸಂರಕ್ಷಿಸಿಕೊಳ್ಳಬೇಕು. ಈ ಹಿಂದೆ ಯಾವ ರೀತಿ ಪೂಜೆ-ಪುನಸ್ಕಾರಗಳು, ಆಚಾರ ವಿಚಾರಗಳು ನಡೆಯುತ್ತಿತ್ತೋ ಅದಕ್ಕೆ ಯಾವುದಕ್ಕೂ ಧಕ್ಕೆ ಬರದ ರೀತಿಯಲ್ಲಿ ಮುಂದುವರೆಸಿಕೊಂಡು ಹೋಗಬೇಕು ಎಂದು ಹೇಳಿದರು.

ಹೊರನಾಡಿನ ಧರ್ಮಕರ್ತ ಡಾ| ಭೀಮೇಶ್ವರ ಜೋಷಿ ಮಾತನಾಡಿ, ಕಲಶೇಶ್ವರ ದೇವಸ್ಥಾನದಲ್ಲಿ ಈ ಹಿಂದೆ ನಡೆದ ಅಷ್ಟಬಂಧ ಬ್ರಹ್ಮಕಲಶ ಸಂದರ್ಭದಲ್ಲಿ ಜಗದ್ಗುರು ಭಾರತೀ ತೀರ್ಥ ಮಹಾಸ್ವಾಮಿಗಳು ಆಗಮಿಸಿ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟಿದ್ದರು. ಇಲ್ಲಿಯ ಭಕ್ತರ ಆಶಯದಂತೆ ಇಲ್ಲಿ ದಾಸೋಹ ಭವನ ವಾಗಿದೆ. ಯಾಗಶಾಲೆಗೂ ಶಿಲನ್ಯಾಸ ಮಾಡಲಾಗಿದೆ ಎಂದು ಹೇಳಿದರು.

ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತನಾಡಿ, ಕಲಶೇಶ್ವರ ದೇವಸ್ಥಾನ ರಾಜ್ಯದಲ್ಲಿ ಗುರುತಿಸಿಕೊಂಡಿರುವ ದೇವಸ್ಥಾನವಾಗಿದೆ. ಇಲ್ಲಿಗೆ ಇನ್ನಷ್ಟು ಭಕ್ತರು ಬರುವಂತ ಪರಿಸ್ಥಿತಿ ನಿರ್ಮಾಣವಾಗಬೇಕು. ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಬೇಕಾಗಿದೆ. ಯಾತ್ರಿ ನಿವಾಸ ಮಾಡಲು ಅನುದಾನ ಬಿಡುಗಡೆಯಾಗಿದೆ. ಅದರ ಕಾಮಗಾರಿಯನ್ನು ಕೂಡ ಆದಷ್ಟು ಬೇಗ ಪ್ರಾರಂಬಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಎನ್‌.ಎಂ.ಹರ್ಷ, ಜಿಪಂ ಸದಸ್ಯ ಕೆ.ಆರ್‌.ಪ್ರಭಾಕರ್‌, ತಾಪಂ ಸದಸ್ಯರಾದ ಮಹಮ್ಮದ್‌ ರಫೀಕ್‌, ಮೀನಾಕ್ಷಿ ಮೋಹನ್‌, ಕಾರ್ಯನಿರ್ವಹಣಾ ಧಿಕಾರಿ ಕೆ.ಎನ್‌. ಯೋಗೇಶ್‌ ಇತರರಿದ್ದರು.

ಟಾಪ್ ನ್ಯೂಸ್

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

PUNJAB

Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

1-man-mohan

Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

PUNJAB

Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

5

Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು

2

Kasaragod: ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.