ಕಾಫಿನಾಡಲ್ಲಿ ಬಂದ್‌ಗೆ ಸಿಕ್ತು ಬೆಂಬಲ

Team Udayavani, Dec 6, 2020, 4:15 PM IST

ಕಾಫಿನಾಡಲ್ಲಿ  ಬಂದ್‌ಗೆ ಸಿಕ್ತು ಬೆಂಬಲ

ಚಿಕ್ಕಮಗಳೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ರಾಜ್ಯ ಸರ್ಕಾರ ತಕ್ಷಣ ರದ್ದುಪಡಿಸಬೇಕೆಂದು ಒತ್ತಾಯಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಶನಿವಾರ ಕರೆದಿದ್ದ ಕರ್ನಾಟಕ ರಾಜ್ಯ ಬಂದ್‌ಗೆ ಕಾಫಿನಾಡಿನಲ್ಲಿ ಭಾಗಶಃ ಬೆಂಬಲ ವ್ಯಕ್ತವಾಯಿತು.

ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಬಂದ್‌ಗೆ ಬೆಂಬಲ ವ್ಯಕ್ತವಾದರೆ, ಕೆಲವು ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆಗೆ ಸೀಮಿತವಾಗಿದ್ದು, ವ್ಯಾಪಾರ ವಹಿವಾಟು, ಜನಸಂಚಾರ ಎಂದಿನಂತಿತ್ತು. ಶನಿವಾರ ಬೆಳಗ್ಗೆಯಿಂದಲೇ ವಿವಿಧ ಕನ್ನಡಪರ ಸಂಘಟನೆಯ ನೂರಾರು ಕಾರ್ಯಕರ್ತರು ರಸ್ತೆಗಿಳಿದು ನಗರದಾದ್ಯಂತ ತಂಡೋಪ ತಂಡವಾಗಿ ಸಂಚರಿಸಿ ಬಂದ್‌ಗೆ ಸಾರ್ವಜನಿಕರು ಬೆಂಬಲ ನೀಡುವಂತೆ ಮನವಿ ಮಾಡಿ ತೆರೆದಿದ್ದ ಅಂಗಡಿ- ಮುಂಗಟ್ಟುಗಳನ್ನು ಬಂದ್‌ ಮಾಡಿಸಿದ ದೃಶ್ಯಗಳು ಕಂಡು ಬಂದವು.

ನಗರದ ಎಂ.ಜಿ. ರಸ್ತೆ, ಐ.ಜಿ. ರಸ್ತೆ, ಮಾರ್ಕೆಟ್‌ ರಸ್ತೆ, ಅಂಗಡಿ- ಮುಂಗಟ್ಟುಗಳನ್ನು ಬಂದ್‌ ಮಾಡಿ ಬೆಂಬಲ ಸೂಚಿಸಿದರು. ಆಟೋ, ಟ್ಯಾಕ್ಸಿ, ಖಾಸಗಿ ಬಸ್‌, ಸರಕು ಸಾಗಣೆ, ಲಾರಿ ಸಂಚಾರ ಸಂಪೂರ್ಣ ಸ್ತಬ್ಧವಾಗಿತ್ತು. ಪೆಟ್ರೋಲ್‌ ಬಂಕ್‌, ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌, ಹೊಟೇಲ್‌ಗ‌ಳವರು ಬಾಗಿಲು ಮುಚ್ಚಿ ಬಂದ್‌ಗೆ ಬೆಂಬಲ ನೀಡಿದರು.

ಹೊರ ಜಿಲ್ಲೆಗೆ ಹೋಗುವ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರವನ್ನು ಸಂಪೂರ್ಣವಾಗಿ ಬಂದ್‌ ಮಾಡಲಾಗಿತ್ತು. ನಗರದ ಸುತ್ತಮುತ್ತಲ ಗ್ರಾಮಗಳಿಗೆ ತೆರಳುವ ಕೆಎಸ್‌ಆರ್‌ಟಿಸಿಬಸ್‌ಗಳು ಅತ್ಯಂತ ವಿರಳವಾಗಿ ಸಂಚರಿಸಿದವು. ಅಲ್ಲೊಂದು ಇಲ್ಲೊಂದು ಆಟೋಗಳು ಸಂಚರಿಸಿದವು. ಗ್ರಾಹಕರಿಲ್ಲದೇ ಖಾಲಿ ಹೊಡೆಯುತ್ತಿದ್ದ ದೃಶ್ಯ ಕಂಡು ಬಂದವು.

ಆಟೋ, ಟ್ಯಾಕ್ಸಿ ಸಂಚಾರ ಇಲ್ಲದಿರುವುದರಿಂದ ಗ್ರಾಮೀಣ ಪ್ರದೇಶದಿಂದ ನಗರಕ್ಕೆ ಆಗಮಿಸಿದವರು ಪರದಾಡಬೇಕಾಯಿತು. ಅಲ್ಲೊಂದು ಇಲ್ಲೊಂದು ಆಟೋ ಸಂಚಾರ ಇದ್ದರೂ ಕಾರ್ಯಕರ್ತರು ಆಟೋಗಳನ್ನು ತಡೆದುಬಂದ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡು ವಾಪಸ್‌ ಕಳಿಸಿದರು. ಇನ್ನು ಖಾಸಗಿ ವಾಹನ ಸಂಚಾರ ಎಂದಿಗಿಂತ ಕಡಿಮೆ ಸಂಖ್ಯೆಯಲ್ಲಿತ್ತು.

ಮಧ್ಯಾಹ್ನದ ವೇಳೆಗೆ ನಗರದ ಬಹುತೇಕ ಅಂಗಡಿ- ಮುಂಗಟ್ಟುಗಳನ್ನು ತೆರೆದ ಮಾಲೀಕರು ಎಂದಿನಂತೆ ವ್ಯಾಪಾರ- ವಹಿವಾಟು ನಡೆಸಿದರು. ವಾಹನ ಸಂಚಾರ, ಜನಸಂಚಾರ ಎಂದಿನಂತೆ ಮುಂದುವರಿಯಿತು. ಸರ್ಕಾರಿ ಕಚೇರಿ, ಮೆಡಿಕಲ್‌ ಶಾಪ್‌, ಆಸ್ಪತ್ರೆ, ಬ್ಯಾಂಕ್‌ ಸೇರಿದಂತೆಸರ್ಕಾರಿ ಕಚೇರಿಗಳು ಎಂದಿನಂತೆ ತೆರೆದಿದ್ದರೂ ಬಂದ್‌ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಿಂದ ಹೆಚ್ಚಿನ ಸಂಖ್ಯೆಯಜನರು ನಗರದತ್ತ ಮುಖ ಮಾಡದಿದ್ದರಿಂದ ಸರ್ಕಾರಿ ಕಚೇರಿಗಳಲ್ಲಿ ಜನರ ಸಂಖ್ಯೆ ವಿರಳವಾಗಿತ್ತು. ಒಟ್ಟಾರೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆದಿದ್ದ ರಾಜ್ಯ ಬಂದ್‌ಗೆ ಜಿಲ್ಲೆಯಲ್ಲಿ ಭಾಗಶಃ ಬೆಂಬಲ ವ್ಯಕ್ತವಾಯಿತು.

ಪೊಲೀಸ್‌ ಬಿಗಿ ಬಂದೋಬಸ್ತ್: ಬಂದ್‌ ಹಿನ್ನೆಲೆಯಲ್ಲಿಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪೊಲೀಸ್‌ ಇಲಾಖೆ ಬಿಗಿ ಪೊಲೀಸ್‌ ಬಂದೋಬಸ್ತ್ ಕೈಗೊಂಡಿತ್ತು. ನಗರದ ಹನುಮಂತಪ್ಪ ವೃತ್ತ, ಆಜಾದ್‌ ಪಾರ್ಕ್‌ ವೃತ್ತ ಸೇರಿದಂತೆ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಬಂದೋಬಸ್ತ್ ಕೈಗೊಳ್ಳಲಾಯಿತು.? ಮಧ್ಯಾಹ್ನದ ವೇಳೆಗೆ ಬಹುತೇಕ ಅಂಗಡಿ- ಮುಂಗಟ್ಟುಗಳು ತೆರೆದುಕೊಂಡವು!

ಶನಿವಾರ ಬೆಳಗ್ಗೆಯಿಂದ ನಗರದ ಐಜಿ ರಸ್ತೆ, ಎಂಜಿ ರಸ್ತೆ, ಮಾರ್ಕೆ ಟ್‌ ರಸ್ತೆ ಸೇರಿದಂತೆ ಎಲ್ಲಾ ರಸ್ತೆಗಳಲ್ಲಿನ ಅಂಗಡಿ- ಮುಂಗಟ್ಟುಗಳನ್ನು ಬಂದ್‌ ಮಾಡಲಾಗಿತ್ತು. ಮಧ್ಯಾಹ್ನ 12 ಗಂಟೆಗೆ ವಿವಿಧ ಕನ್ನಡ ಪರ ಸಂಘಟನೆ ಕಾರ್ಯಕರ್ತರುಹನುಮಂತಪ್ಪ ವೃತ್ತದಿಂದ ಆಜಾದ್‌ ಪಾರ್ಕ್‌ ವೃತ್ತದ ವರೆಗೂ ಪ್ರತಿಭಟನೆ ಮೆರವಣಿಗೆ ಸಾಗುತ್ತಿದ್ದಂತೆ ಮುಚ್ಚಿದ್ದ ಅಂಗಡಿ- ಮುಂಗಟ್ಟುಗಳು ತೆರೆದುಕೊಂಡವು.

ಟಾಪ್ ನ್ಯೂಸ್

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ

Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ

Chikkamagaluru: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಯುವಕ ಮೃತ್ಯು

Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ

Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು

Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು

Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ

Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.