![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Feb 20, 2024, 6:49 PM IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚುತ್ತಿದ್ದಂತೆ ಕಾಡ್ಗಿಚ್ಚು ಪ್ರಕರಣಗಳು ಜಾಸ್ತಿಯಾ ಗುತ್ತಿದೆ. ಇತ್ತೀಚೆಗೆ ಮುಳ್ಳಯ್ಯ ನಗಿರಿ ಸಮೀಪದ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿತ್ತು, ಇದೀಗ ಜಿಲ್ಲೆಯ ತರೀಕೆರೆ ತಾಲೂಕು ಕೆಮ್ಮಣ್ಣುಗುಂಡಿ ಪ್ರವಾಸಿ ತಾಣದಲ್ಲಿನ ಪರ್ವತ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂದಿದೆ.
ಕೆಮ್ಮಣ್ಣುಗುಂಡಿ ಝಡ್ ಪಾಯಿಂಟ್ ಸಮೀಪದ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಮತ್ತೊಂದು ಕಡೆ ಗಾಳಿ ಮತ್ತು ವಾತಾವರಣದಲ್ಲಿ ಉಷ್ಣಾಂಶ ಜಾಸ್ತಿ ಇರುವುದ ರಿಂದ ಬೆಂಕಿ ನಂದಿಸಲು ತೊಡಕ್ಕಾಗುತ್ತಿದೆ.
ಕೆಮ್ಮಣ್ಣುಗುಂಡಿ ಝಡ್ ಪಾಯಿಂಟ್ ಪ್ರದೇಶ ಭದ್ರ ಹುಲಿ ಸಂರಕ್ಷಿತಾರಣ್ಯ ವ್ಯಾಪ್ತಿಯಲ್ಲಿ ಬರುತ್ತಿದ್ದು, ಇಲ್ಲಿನ ಶೋಲಾ ಹುಲ್ಲುಗಾವಲು, ಪ್ರಾಣಿ ಪಕ್ಷಿಗಳನ್ನು ಕಾಡ್ಗಿಚ್ಚು ಬಲಿ ಪಡೆದುಕೊಳ್ಳುತ್ತಿದೆ. ಜಿಲ್ಲೆಯಲ್ಲಿ ಅತೀ ಹೆಚ್ಚು ಅರಣ್ಯ ಪ್ರದೇಶವನ್ನು ಒಳಗೊಂಡಿದ್ದು ಈ ವರ್ಷ ವಾತಾವರಣದಲ್ಲಿನ ಉಷ್ಣಾಂಶ ಏರಿಕೆಯಿಂದ ಕಾಡ್ಗಿಚ್ಚು ಪ್ರಕರಣಗಳು ಹೆಚ್ಚು ಆಗುತ್ತಿದ್ದು ಕಾಡ್ಗಿಚ್ಚು ತಡೆಯುವುದು ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ತಲೆಬೇನೆ ಯಾಗಿದೆ.
ಇದನ್ನೂ ಓದಿ: Hunasur: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ, ಕೊಲೆ ಶಂಕೆ; ಗ್ರಾಮಸ್ಥರ ಪ್ರತಿಭಟನೆ
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.