ಮಣಿಪಾಲ ಆರೋಗ್ಯ ಕಾರ್ಡ್ ಸದ್ಬಳಕೆಗೆ ಕರೆ
Team Udayavani, Jul 5, 2020, 5:33 PM IST
ಕೊಪ್ಪ:ಮಣಿಪಾಲ್ ಆರೋಗ್ಯ ಕಾರ್ಡ್ ವಿತರಿಸಲಾಯಿತು.
ಕೊಪ್ಪ: ಕಡಿಮೆ ವೆಚ್ಚದಲ್ಲಿ ಆರೋಗ್ಯ ಸೇವೆ ನೀಡಲು ಮಣಿಪಾಲ ಆರೋಗ್ಯ ಕಾರ್ಡ್ ಸೌಲಭ್ಯವನ್ನು 19 ವರ್ಷಗಳಿಂದ ಒದಗಿಸಲಾಗುತ್ತಿದೆ. ಈ ವರ್ಷ ಮಣಿಪಾಲ ಆರೋಗ್ಯ ಕಾರ್ಡ್ ನೋಂದಣಿ ಮತ್ತು ವಿತರಣೆಗೆ ಚಾಲನೆ ನೀಡಲಾಗಿದ್ದು, ಸದ್ಬಳಕೆ ಮಾಡಿ ಕೊಳ್ಳಬೇಕೆಂದು ಮಣಿಪಾಲ ಕಸ್ತೂರಿಬಾ ಆಸ್ಪತ್ರೆ ಉಪ ವ್ಯವಸ್ಥಾಪಕ ಮೋಹನ ಶೆಟ್ಟಿ ಹೇಳಿದರು.
ಪಟ್ಟಣದಲ್ಲಿ ಗಾಯತ್ರಿ ಸಹಕಾರಿ ಸೌಹಾರ್ದ ಸೊಸೈಟಿ ಸಭಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಡ್‌ಗೆ ನೋಂದಾಯಿಸಿದ ವರ್ಷದ ಅವಧಿಯಲ್ಲಿ ಎಷ್ಟು ಬಾರಿಯಾದರೂ ಉಪಯೋಗಿಸಬಹುದು. ವೈದ್ಯರ ಸಮಾಲೋಚನೆಗೆ ಶೇ.50 ರಿಯಾಯಿತಿ, ಪ್ರಯೋಗಾಲಯ ಪರೀಕ್ಷೆಗೆ ಶೇ.30, ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಗೆ ಸಲಕರಣೆ ಹೊರತುಪಡಿಸಿ ಶೇ. 25, ಸಿ.ಟಿ, ಎಂ.ಆರ್.ಐ, ಅಲ್ಟ್ರಾಸೌಂಡ್ ತಪಾಸಣೆಗೆ ಶೇ. 20, ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಗೆ ಶೇ. 20, ಔಷಧ ಖರೀದಿಗೆ ಶೇ.
12 ರಿಯಾಯಿತಿ ನೀಡಲಾಗಿದೆ ಎಂದರು.
ಕೊಪ್ಪದಲ್ಲಿ ಮಾಹಿತಿಗಾಗಿ 9449340738, 9449455380, 9481622625 ಸಂಪರ್ಕಿಸಬಹುದು ಎಂದರು. ಗಾಯತ್ರಿ ಸಹಕಾರಿ ಸೌಹಾರ್ದ ಸೊಸೈಟಿ ಅಧ್ಯಕ್ಷ ವಿಶ್ವನಾಥ್, ಯಡಗೆರೆ ಸೌಹಾರ್ದ ಸೊಸೈಟಿ ಸಿಇಒ ಸುಧೀರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.