ಚಾರ್ಮಾಡಿ ಘಾಟ್‌ನಲ್ಲಿ ಪ್ರವಾಸಿಗರ ದಂಡು
Team Udayavani, Jun 8, 2020, 3:25 PM IST
ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್‌ನಲ್ಲಿ ಕಂಡು ಬಂದ ಪ್ರವಾಸಿಗರ ದಂಡು.
ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್, ದೇವರಮನೆ, ರಾಣಿಝರಿ ಮುಂತಾದ ಪ್ರದೇಶಗಳಿಗೆ ಪ್ರವಾಸಿಗರು ಹರಿದುಬರುತ್ತಿದ್ದು, ಕೋವಿಡ್ ಹರಡದಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸದಿರುವುದು ಅಪಾಯವನ್ನು ಆಹ್ವಾನಿಸುವಂತಿದೆ.
ಭಾನುವಾರ ದೇವರಮನೆ, ಚಾರ್ಮಾಡಿ ಘಾಟ್‌ನಲ್ಲಿ ಪ್ರವಾಸಿಗರು ಗುಂಪು ಗುಂಪಾಗಿ ಸೇರಿ ಫೋಟೋ ತೆಗೆದುಕೊಳ್ಳುವುದು ಕಂಡು ಬಂದರೆ, ಕೆಲ ಪ್ರವಾಸಿಗರು ಮಾಸ್ಕ್ ಧರಿಸದೇ ವಾಹನದಲ್ಲಿ ಜೋರಾಗಿ ಹಾಡು ಹಾಕಿಕೊಂಡು ನೃತ್ಯ ಮಾಡುತ್ತಿದ್ದುದು ಕಂಡು ಬಂದಿತು. ದಕ್ಷಿಣ ಕನ್ನಡ, ಹಾಸನ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳಿಂದ ಪ್ರವಾಸಿಗರು ಬರುತ್ತಿದ್ದು, ಸಾಮಾಜಿಕ ಅಂತರ ಅನುಸರಿಸದೇ ಇರುವುದು ಅಪಾಯವನ್ನು ಆಹ್ವಾನಿಸವಂತಿದೆ. ಚಾರ್ಮಾಡಿ ಘಾಟ್‌ನಲ್ಲಿ ಸೆಲ್ಫಿ, ಫೋಟೋ ತೆಗೆಯಬಾರದು ಎಂದು ಸೂಚನಾಫಲಕ ಅಳವಡಿಸಿದ್ದರೂ ಫೋಟೋ ತೆಗೆಯುತ್ತಿರುವುದು ಕಂಡು ಬರುತ್ತಿದೆ.
ಕೆಲ ಪ್ರವಾಸಿಗರು ದೇವರಮನೆ, ಚಾರ್ಮಾಡಿ ಘಾಟ್‌ಗೆ ಬೈಕ್‌ನಲ್ಲಿ ಗುಂಪು ಗುಂಪಾಗಿ ಬಂದು ಮದ್ಯ ಸೇವನೆ ಮಾಡಿ ಮೋಜು-ಮಸ್ತಿಯಲ್ಲಿ ತೊಡಗುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಮಾತನಾಡಿದ ಸ್ಥಳೀಯರಾದ ಶ್ರೇಯಸ್ ಬಿ. ಹೊಸಳ್ಳಿ, ದೇವರಮನೆ, ಚಾರ್ಮಾಡಿ ಘಾಟ್ ಗೆ ಹೊರ ಜಿಲ್ಲೆಗಳಿಂದ ಪ್ರವಾಸಿಗರು ಬರುತ್ತಿದ್ದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುತ್ತಿಲ್ಲ. ಅಲ್ಲದೇ, ಮಾಸ್ಕ್ ಧರಿಸದಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಆದ್ದರಿಂದ, ಪ್ರವಾಸಿಗರು ಕಟ್ಟುನಿಟ್ಟಾಗಿ ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.