Kottigehara: ಸಂಸ್ಕಾರದಿಂದ ಉತ್ತಮ ಶಿಕ್ಷಣ : ಶ್ರೀ ಗುಣನಾಥ ಸ್ವಾಮೀಜಿ ಹೇಳಿಕೆ
Team Udayavani, Jan 12, 2025, 5:18 PM IST
ಕೊಟ್ಟಿಗೆಹಾರ: ಸಂಸ್ಕಾರದಿಂದ ಉತ್ತಮ ಶಿಕ್ಷಣ ಮತ್ತು ಉದ್ಯೋಗ ಪಡೆಯಬಹುದು ಎಂದು ಶುಕ್ರವಾರ ಜಾವಳಿಯ ಬಿಜಿಎಸ್ ಶಾಲೆಯಲ್ಲಿ ವಿಜೃಂಭಣೆಯಿಂದ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿದ್ದ ಆದಿಚುಂಚನಗಿರಿ ಶೃಂಗೇರಿ ಮಹಾ ಸಂಸ್ಥಾನ ಮಠದ ಶ್ರೀ ಗುಣನಾಥ ಸ್ವಾಮೀಜಿ ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಗುಣನಾಥ ಸ್ವಾಮೀಜಿ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳು ವ್ಯಕ್ತಿತ್ವವನ್ನು ರೂಪಿಸುತ್ತವೆ. ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಮತ್ತು ಛಲ ಬೆಳೆಸಿಕೊಳ್ಳುವುದರ ಜೊತೆಗೆ ಕಠಿಣ ಪರಿಶ್ರಮದ ಮೂಲಕ ಸಾಧನೆಯ ಹಾದಿಯಲ್ಲಿ ನಡೆಯಬೇಕು ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಿಂದಲೆ ಗುರಿಯನ್ನು ನಿಗದಿಪಡಿಸಿಕೊಳ್ಳಬೇಕು ಆಗ ಮಾತ್ರ ಯಶಸ್ಸು ಸಾಧ್ಯ ಅಷ್ಟೇ ಅಲ್ಲ ತಮ್ಮ ತಂದೆ ತಾಯಿ ಗುರು ಹಿರಿಯರನ್ನು ಗೌರವಿಸಬೇಕು ಹಾಗಾಗಿ ಪ್ರತಿವರ್ಷ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಕಾರ್ಯಕ್ರಮವನ್ನು ನಡೆಸಿಕೊಂಡು ಬರಬೇಕು ಎಂದು ಬಿಜಿಎಸ್ ಶಾಲಾ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಬಿಜಿಎಸ್ ಶಾಲಾ ಮುಕ್ಯೋಪಾಧ್ಯಯಾರಾದ ಸುರೇಶ್ ಮಾತನಾಡಿ ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಭವಿಷ್ಯವನ್ನು ರೂಪಿಸಿಕೊಳ್ಳಬೇಕಾದರೆ ಸತತ ಪರಿಶ್ರಮ ಪಡಬೇಕು ವಿದ್ಯಾರ್ಥಿ ಜೀವನದಿಂದಲೇ ಶಿಸ್ತು ಸಂಯಮ ಧನಾತ್ಮಕ ಚಿಂತನೆ ರೂಡಿಸಿಕೊಳ್ಳುವದರ ಜೊತೆಗೆ ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಹವ್ಯಾಸಗಳನ್ನು ಬೆಳೆಸುವ ಮೂಲಕ ಮಕ್ಕಳಲ್ಲಿ ಮಾನಸಿಕ ಧೃಡತೆಯನ್ನು ಬೆಳೆಸಬೇಕೆಂದರು.
ಶಾಲಾ ವಾರ್ಷಿಕೋತ್ಸವದ ವೇದಿಕೆಯಲ್ಲಿ ಹೇಮಂತ್ ಚಂದ್ರ ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ಮೂಡಿಗೆರೆ, ಆಡಳಿತ ಮಂಡಳಿ ಸದಸ್ಯರಾದ ಚನ್ನಕೇಶವ ಗೌಡ, ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರದೀಪ್, ಎಂ ವಿ ಜಗದೀಶ್, ಪರಿಕ್ಷಿತ್ ಜಾವಳಿ, ಶಶಿಧರ್, ಉಪಾಧ್ಯಕ್ಷ ಮನೋಹರ್, ಶ್ರೀನಾಥ್ ವಾಟೆಖಾನ್, ಕಾಫಿ ಬೆಳೆಗಾರರಾದ ಗಿಲ್ಬರ್ಟ್ ಲೋಬೊ, ಕೇಶವೇ ಗೌಡ, ಉಪನ್ಯಾಸ ದುಗ್ಗಪ್ಪಗೌಡ ಶಿಕ್ಷಣ ತಜ್ಞರು, ಶಿಕ್ಷಕರಾದ ಯೋಗೇಶ್, ಗೌರಿಬಾಯಿ, ಸತೀಶ್, ಸಾಗರ್, ಆಶಾಕಿರಣ. ಅನ್ನಪೂರ್ಣಹಾಗೂಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: Udupi: ಮಹಾಕುಂಭ ಮೇಳದ ಯಶಸ್ಸಿಗಾಗಿ ಮಠ -ಮನೆ, ಮಂದಿರಗಳಲ್ಲಿ ಪ್ರಾರ್ಥಿಸಲು ಪೇಜಾವರ ಶ್ರೀ ಕರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ
Bengaluru: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು; ಭುಗಿಲೆದ್ದ ಆಕ್ರೋಶ
Mudhol: ಎರಡು ದಿನಗಳ ಕಾರ್ಯಾಚರಣೆ ಬಳಿಕ ಮೊಸಳೆ ಸೆರೆ
Congress: ಇದೇ ಅವಧಿಯಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ: ಶಾಸಕ ಶಿವಗಂಗಾ
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ
ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ
Bengaluru: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು; ಭುಗಿಲೆದ್ದ ಆಕ್ರೋಶ
Tulu Film: ರೂಪೇಶ್ ಶೆಟ್ರ ‘ಜೈ’ ಸಿನಿಮಾಗೆ ಬಂದ್ರು ಬಾಲಿವುಡ್ ಸೂಪರ್ ಸ್ಟಾರ್
ಮಕ್ಕಳ ಮೇಲೆ ಗದರದೇ, ಕೈ ಮಾಡದೆ ಶಿಸ್ತನ್ನು ಮೂಡಿಸುವುದು ಹೇಗೆ? ಇಲ್ಲಿದೆ ಕೆಲವು ಸಲಹೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.