Kottigehara: ಔಷಧಿ ಸಿಂಪಡಣೆ ವೇಳೆ ದೋಟಿಗೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಮೃತ್ಯು
Team Udayavani, Oct 30, 2024, 8:57 PM IST
ಕೊಟ್ಟಿಗೆಹಾರ: ಅಡಿಕೆ ಮತ್ತು ಕಾಳುಮೆಣಸಿಗೆ ಔಷಧಿ ಸಿಂಪರಣೆ ಮಾಡುವ ವೇಳೆ ದೋಟಿಗೆ ವಿದ್ಯುತ್ ತಂತಿ ತಗುಲಿ ಕಾರ್ಮಿಕರೋರ್ವರು ಮೃತಪಟ್ಟಿರುವ ಘಟನೆ ಬಣಕಲ್ ಠಾಣಾ ವ್ಯಾಪ್ತಿಯ ಮತ್ತಿಕಟ್ಟೆಯಲ್ಲಿ ಬುಧವಾರ(ಅ.30) ನಡೆದಿದೆ.
ಮತ್ತಿಕಟ್ಟೆ ಗ್ರಾಮದ ಎಕ್ಬಾಲ್ ಎಸ್ಟೇಟ್ ನಲ್ಲಿ ಬುಧವಾರ ಮುಂಜಾನೆ ಈ ದುರ್ಘಟನೆ ನಡೆದಿದೆ. ಮೃತ ಕಾರ್ಮಿಕ ಉತ್ತರಪ್ರದೇಶ ಮೂಲದ ರತನ್ ಲಾಲ್ (27 ವರ್ಷ) ಎಂದು ತಿಳಿದು ಬಂದಿದೆ.
ತೋಟದಲ್ಲಿ ಅಡಿಕೆ ಮತ್ತು ಕಾಳುಮೆಣಸಿಗೆ ಸ್ಪ್ರೇ ಮಾಡುತ್ತಿದ್ದ ವೇಳೆ ಅಲ್ಯುಮಿನಿಯಂ ದೋಟಿ ವಿದ್ಯುತ್ ಲೈನಿಗೆ ತಾಗಿದ್ದು ಇದರಿಂದ ವಿದ್ಯುತ್ ಪ್ರವಹಿಸಿ ಕಾರ್ಮಿಕ ತೀವ್ರ ಗಾಯಗೊಂಡಿದ್ದರು. ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತ ದೇಹವನ್ನು ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Tragedy: ಕೂಲಿ ಆಸೆಗೆ ತೆಂಗಿನ ಮರ ಏರಿದ್ದ ಅವಿವಾಹಿತ ಯುವಕ ಆಯತಪ್ಪಿ ಬಿದ್ದು ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.