ಕಾರಿನಲ್ಲಿ ಹೋಗುತಿದ್ದವರನ್ನೇ ಅಟ್ಟಾಡಿಸಿದ ಕಾಡಾನೆ : ಕಾಫಿನಾಡಿನಲ್ಲಿ ಕಾಡಾನೆಗಳ ಪುಂಡಾಟ
Team Udayavani, Aug 11, 2022, 9:42 AM IST
ಕೊಟ್ಟಿಗೆಹಾರ : ಕಾಫಿನಾಡಿನಲ್ಲಿ ಕಾಡಾನೆಗಳ ಪುಂಡಾಟ ಮುಂದುವರೆದಿದ್ದು ಕಾರಿನಲ್ಲಿ ಹೋಗುತಿದ್ದವರನ್ನು ಕಾಡಾನೆಯೊಂದು ಅಟ್ಟಾಡಿಸಿಕೊಂಡು ಹೋದ ಘಟನೆ ಮೂಡಿಗೆರೆ ತಾಲೂಕಿನ ದೇವರಮನೆ ಬಳಿ ನಡೆದಿದೆ.
ಜಿಲ್ಲೆಯಲ್ಲಿ ಕಾಡಾನೆಗಳು ಬೀಡು ಬಿಟ್ಟಿದ್ದು ಕಾಫಿ, ಅಡಿಕೆ ಕೃಷಿ ತೋಟಗಳನ್ನು ಪುಡಿಗಟ್ಟಿವೆ ಅಲ್ಲದೆ ಮೂಡಿಗೆರೆ ತಾಲೂಕಿನ ದೇವರಮನೆ ಬಳಿ ಕಾಡಾನೆಯೊಂದು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರನ್ನು ಬೆನ್ನಟ್ಟಿದೆ ಈ ವೇಳೆ ಕಾರು ಚಾಲಕ ಪ್ರಾಣಾಪಾಯದಿಂದ ಕಾರು ಚಲಾಯಿಸಿ ರಕ್ಷಣೆಗೆ ಮುಂದಾಗಿದ್ದಾನೆ ಆದರೆ ಚಾಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ನುಗ್ಗಿದೆ ಕಾರಿನಲ್ಲಿದ್ದ ಚಾಲಕ ಸೇರಿ ಒಟ್ಟು ಮೂವರು ಅಲ್ಲಿಂದ ತಪ್ಪಿಸಿಕೊಂಡು ಜೀವ ಉಳಿಸಿಕೊಂಡಿದ್ದಾರೆ.
ಕಾಡಾನೆಗಳ ಹಿಂಡು ಪ್ರತ್ಯಕ್ಷ
ಮೂಡಿಗೆರೆ ತಾಲೂಕಿನ ಹಾಂದಿ, ವಿಜಯನಗರ, ಹೊಸಪೇಟೆ ಸುತ್ತಮುತ್ತ ಗುರುವಾರ ಮುಂಜಾನೆ 13 ಕಾಡಾನೆ ಲಗ್ಗೆ ಇಟ್ಟಿದ್ದು ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಕಾಫಿ, ಅಡಿಕೆ ತೋಟಗಳಿಗೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಕೃಷಿ, ಬೆಳೆ ನಾಶ ಮಾಡಿದೆ.
ಅರಣ್ಯ ಇಲಾಖೆ ವಿರುದ್ಧ ಆಕ್ರೋಶ
ಕಳೆದ ಹಲವು ದಿನಗಳಿಂದ ಕಾಡಾನೆಗಳು ದಾಳಿ ನಡೆಸುತ್ತಿದ್ದು ಆನೆಗಳ ದಾಳಿ ತಡೆಗೆ ಅರಣ್ಯ ಇಲಾಖೆ ಯಾವುದೇ ಕ್ರಮಕೈಗೊಳ್ಳದಿರುವುದರಿಂದ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ : ಮಾಲಿ ಸೈನ್ಯದ ಮೇಲೆ ಉಗ್ರ ದಾಳಿ: 42 ಮಂದಿ ಸಾವು, 22 ಕ್ಕೂ ಹೆಚ್ಚು ಸೈನಿಕರಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.