ಜಾನಪದ ಪುನರುಜ್ಜೀವನಗೊಳ್ಳಲಿ


Team Udayavani, Mar 18, 2019, 9:20 AM IST

chikk-1.jpg

ಶಿವಮೊಗ್ಗ: ತಾಂತ್ರಿಕ ಯುಗದಲ್ಲಿ ಜಾನಪದವನ್ನು ಪರಿಭಾವಿಸುವ ಕ್ರಮದಲ್ಲಿ ಬದಲಾವಣೆ ಮಾಡಿ ಅದನ್ನು ಮುಂದಿನ ಪೀಳಿಗೆಗೆ ಉಳಿಸಬೇಕಾಗಿದೆ ಎಂದು ಸಾಹಿತಿ ಸಣ್ಣರಾಮ ಅಭಿಪ್ರಾಯಪಟ್ಟರು. ಸಹ್ಯಾದ್ರಿ ಪ್ರೌಢಶಾಲಾ ಆವರಣದಲ್ಲಿ ಕರ್ನಾಟಕ ಜಾನಪದ ಪರಿಷತ್‌ನಿಂದ ಭಾನುವಾರ ಆಯೋಜಿಸಿದ್ದ ಜಾನಪದ ಅರಿವು ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಜಾನಪದ ಪುನರುಜ್ಜೀವನ ವಿಷಯ ಕುರಿತು ಮಾತನಾಡಿದ ಅವರು, ಜಾನಪದವನ್ನು ಇಂದು ಸಂವಾದದಲ್ಲಿ ಮಾತ್ರ ಸೃಷ್ಟಿ ಮಾಡುತ್ತಿದ್ದೇವೆ. ಹಾಗಾಗಿ ಅದನ್ನು ಮುಂದಿನ ತಲೆಮಾರಿಗೆ ಕೊಂಡೊಯ್ಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ಕಾಲಕ್ಕೆ ತಕ್ಕಂತೆ ಜನಪದ ಕಲೆಗಳು ಬದಲಾವಣೆಯಾಗುತ್ತಿವೆ. ಹಿಂದೆ ಡೊಳ್ಳು ಕುಣಿತ ಮಾತ್ರವಿತ್ತು. ಇಂದು ಡೊಳ್ಳಿನ ಕುಣಿತ ಜತೆಗೆ ವೀರಗಾಸೆ ಗತ್ತು, ಕೋಲಾಟ ಸೇರ್ಪಡೆಯಾಗಿವೆ. ಜತೆಗೆ ಅನೇಕ ಉತ್ತರ ಕರ್ನಾಟಕದ ಕಲೆಗಳು ಸೇರ್ಪಡೆಯಾಗಿವೆ. ಜಾನಪದದ ಆಶಯಗಳಿಗೆ ಧಕ್ಕೆ ಬಾರದಂತೆ ಜನಪದ ಕಲೆಗಳನ್ನು ಕಾಲಕ್ಕೆ ತಕ್ಕಂತೆ ಬದಲಾಯಿಸಬಹುದು ಎಂದು ವಿದ್ವಾಂಸರು ಅಭಿಪ್ರಾಯಪಡುತ್ತಾರೆ. ಆದರೆ, ಜನಪದ ಕಲೆಯನ್ನು ಬೆಳೆಸುವಾಗ ಅದರದ್ದೇ ಆದ ಕ್ರಮವಿರುತ್ತದೆ. ಅದನ್ನು ಅನುಸರಿಸಬೇಕು ಎಂದು ಸಲಹೆ ನೀಡಿದರು. ಜಾನಪದ ಪ್ರಕಾರಗಳು ಎಲ್ಲಾ ಸಂದರ್ಭಗಳಲ್ಲಿಯೂ ಬಳಕೆಯಾಗುವಂತಹುದು.

ಜನಪದ ಕಲೆಗಳು ಸಂದರ್ಭವನ್ನು ಮೀರಿ ಬೆಳೆಯುತ್ತಿವೆ. ಜಾಗತೀಕರಣವನ್ನು ಮೆಟ್ಟಿ ನಿಂತ ಅದ್ಭುತ ಶಕ್ತಿ ಅದು. ಯಾವುದೇ ಸಂದರ್ಭವನ್ನು ಜೀರ್ಣಿಸಿಕೊಳ್ಳುವ ಶಕ್ತಿ ಅದಕ್ಕೆ ಇದೆ. ಪ್ರಸ್ತುತ ಸಂದರ್ಭದಲ್ಲಿ ಬಳಕೆಯಾಗುತ್ತಿರುವ ಜನಪದ ಕಲೆಗಳು ಎಷ್ಟರ ಮಟ್ಟಿಗೆ ಜನರನ್ನು ತಲುಪುತ್ತಿವೆ ಎಂದು ತಿಳಿಯಬೇಕಿದೆ ಎಂದರು.

ಸಾಹಿತಿ ಡಾ| ಮುತ್ತಯ್ಯ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ನಮಗೆ ಏನು ಬೇಕೋ ಅದು ತಕ್ಷಣ ಸಿಗುವ ವಾತಾವರಣ ಇದೆ. ಈ ಎಲ್ಲಾ ಸೌಲಭ್ಯ ದೊರಕುವಾಗ ಯಾವುದೋ ಒಂದು ಕೊರತೆ ಇದೆ ಎಂದು ಅನಿಸುತ್ತದೆ. ಇದಕ್ಕೆ ಕಾರಣ ನಾಮ್ಮ ಮನಸ್ಸು ಗೊಂದಲದಲ್ಲಿದೆ. ನಮಗೆ ನೆಮ್ಮದಿ ಸಿಗಬೇಕು ಎಂದರೆ ಪುನಃ ನಾವು ಪೂರ್ವಿಕರ ಕಾಲಕ್ಕೆ ಹೋಗಬೇಕು ಎಂದು ಅಂದುಕೊಳ್ಳುತ್ತೇವೆ. ಎಲ್ಲೂ ಸಿಗದ ನೆಮ್ಮದಿಯನ್ನು ಜಾನಪದದಲ್ಲಿ ಕಾಣಲು ಹೊರಟಿದ್ದೇವೆ. ಅಂದರೆ ಪೂರ್ವಿಕರು ಸೃಷ್ಟಿಸಿದ ಕಾಲಘಟ್ಟಕ್ಕೆ ಹೋಗಲು ಬಯಸುತ್ತಿದ್ದೇವೆ ಎಂದು ವಿಶ್ಲೇಷಿಸಿದರು.

ಪರಿಷತ್‌ ಅಧ್ಯಕ್ಷ ಡಿ.ಮಂಜುನಾಥ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಡಾ| ಮೋಹನ್‌ ಚಂದ್ರಗುತ್ತಿ, ಎಚ್‌.ಟಿ. ಕೃಷ್ಣಮೂರ್ತಿ, ಡಾ| ಕವಿತಾ ಚಂದ್ರಗುತ್ತಿ. ಟಿ.ಪಿ. ನಾಗರಾಜ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡೂರಲ್ಲಿ 40 ವರ್ಷದವರಿಗೂ ವೃದ್ದಾಪ್ಯ ವೇತನ! ಯೋಜನೆಯಲ್ಲಿ ಗೋಲ್‌ಮಾಲ್‌?

ಕಡೂರಲ್ಲಿ 40 ವರ್ಷದವರಿಗೂ ವೃದ್ದಾಪ್ಯ ವೇತನ! ಯೋಜನೆಯಲ್ಲಿ ಗೋಲ್‌ಮಾಲ್‌?

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ

Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ

Chikkamagaluru: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಯುವಕ ಮೃತ್ಯು

Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ

Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.