ಲಿಂಗಾಯತ ಮಹಾರ್ಯಾಲಿ: ಜನಜಾಗೃತಿ ಜಾಥಾ

Team Udayavani, Sep 5, 2017, 3:16 PM IST

05-Z-1.jpg

ಕಡೂರು: ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮ ಮಾನ್ಯತೆ ಹಾಗೂ ಸರ್ಕಾರದ ಸೌಲಭ್ಯ ಪಡೆಯಲು ಕಲಬುರ್ಗಿಯಲ್ಲಿ ನಡೆಯಲಿರುವ ಲಿಂಗಾಯತ ರ್ಯಾಲಿ ಪೂರ್ವಭಾವಿಯಾಗಿ ಪಟ್ಟಣದಲ್ಲಿ ರಾಷ್ಟ್ರೀಯ ಬಸವದಳ ಒಕ್ಕೂಟದ ಪದಾಧಿಕಾರಿಗಳು ಬೈಕ್‌ ರ್ಯಾಲಿ ನಡೆಸಿದರು.

ಲಿಂಗಾಯತ ಧರ್ಮ ಮಹಾಸಭಾ ಮತ್ತು ರಾಷ್ಟ್ರೀಯ ಬಸವದಳ ಒಕ್ಕೂಟದ ಮುಖಂಡರಾದ ಎ.ಸಿ.ಲೋಕೇಶಪ್ಪ ಲಿಂಗಾಯತ ಮತ್ತು ಬಾಣೂರು ಚನ್ನಬಸಪ್ಪ ನೇತೃತ್ವದಲ್ಲಿ ಜನಜಾಗೃತಿ ಜಾಥಾ ನಡೆಯಿತು. ತಾಲೂಕಿನ ಎಸ್‌. ಕೊಪ್ಪಲು, ದೇವನೂರು, ಕಬ್ಬಳಿ, ಆರ್‌.ಜಿ.ಕೊಪ್ಪಲು, ಬಳ್ಳೇಕೆರೆ, ಗೆದೆಹಳ್ಳಿ ಮಾರ್ಗವಾಗಿ ಕಡೂರು ಪಟ್ಟಣಕ್ಕೆ ಬಂದ ಜಾಥಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ರಾಷ್ಟ್ರೀಯ ಹೆದ್ದಾರಿ 206ರ ಮೂಲಕ ಹಿರೇನಲ್ಲೂರು, ಗಿರಿಯಾಪುರ, ಬಾಸೂರು, ಬಿಸಲೆರೆ ಮಾರ್ಗವಾಗಿ ಸಾಗಿ ಆಡಿಗೆರೆ ಗ್ರಾಮದಲ್ಲಿ ಮುಕ್ತಾಯವಾಯಿತು. 

ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರೀಯ ಬಸವದಳ ಒಕ್ಕೂಟದ ಮುಖಂಡ ಎ.ಸಿ.ಲೋಕೇಶಪ್ಪ ಲಿಂಗಾಯತ್‌, ಈ ಹೋರಾಟ ಸ್ವತಂತ್ರ ಧರ್ಮಕ್ಕಾಗಿ. ವೀರಶೈವ ಧರ್ಮವು ವೈದಿಕ ಧರ್ಮದ ಅವಿಭಾಜ್ಯ ಅಂಗವಾಗಿದೆ. ಲಿಂಗಾಯತವು ಅಹಿಂದ ಹಾಗೂ ಸ್ವತಂತ್ರ ಧರ್ಮವಾಗಿದೆ ಎಂದರು. ರಾಜ್ಯ ಸರ್ಕಾರ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಒತ್ತಾಯಿಸಿ ಸೆ.10ರಂದು ಕಲಬುರ್ಗಿಯಲ್ಲಿ ನಡೆಲಿರುವ ಲಿಂಗಾಯತ ಮಹಾ ರ್ಯಾಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಜಿಲ್ಲೆಯ ಮಠಾಧೀಶರು ಬೆಂಬಲಿಸದಿರುವುದು ಬೇಸರದ ಸಂಗತಿ. ಉತ್ತರ ಕರ್ನಾಟಕದ ಎಲ್ಲ ಮಠಾಧಿಧೀಶರು ಲಿಂಗಾಯತ ಸ್ವತಂತ್ರ ಧರ್ಮಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಈ ನಮ್ಮ ಹೋರಾಟಕ್ಕೆ ಸಿದ್ದಗಂಗಾ ಶ್ರೀಗಳು ಮತ್ತು ಸುತ್ತೂರು ಶ್ರೀಗಳು
ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಮಾಹಿತಿ ನೀಡಿದರು.  ಕಡೂರು ತಾಲೂಕಿನಲ್ಲಿ 10 ರಾಷ್ಟ್ರೀಯ ಬಸವದಳ ಹಾಗೂ ಎರಡು ಬಸವ ಮಂಟಪ ಕಾರ್ಯ ನಿರ್ವಹಿಸುತ್ತಿದೆ. ತಾಲೂಕಿನಾದ್ಯಂತ ಬಸವದಳ ಸಂಘಟನೆ ಉತ್ತಮವಾಗಿದೆ ಎಂದು ತಿಳಿಸಿದರು.

ಜಯಚನ್ನೇಗೌಡ, ಎಸ್‌.ಕೊಪ್ಪಲು ರಘು, ಉಮೇಶ್‌, ಮಂಜುಳಾ, ಶಿವಮೂರ್ತಿ, ರತ್ನಮ್ಮ, ಜಮುನಾ ಚಂದ್ರಪ್ಪ, ಸುಧಾ, ಓಂಕಾರಪ್ಪ, ಎಲ್‌. ಪಾಟೇಲ್‌ ರ್ಯಾಲಿಯಲ್ಲಿ ಭಾಗವಹಿಸಿದ್ದರು. 

ಟಾಪ್ ನ್ಯೂಸ್

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-kottigehara

Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.