ಚಿಕ್ಕಮಗಳೂರು: ಬಾರ್ ಮುಂದೆ ಹೆಚ್ಚಾದ ಅಪಘಾತ; ಬಾರ್ ಸ್ಥಳಾಂತರಕ್ಕೆ ಆಗ್ರಹಿಸಿ ಪ್ರತಿಭಟನೆ
Team Udayavani, Aug 13, 2022, 6:46 PM IST
ಚಿಕ್ಕಮಗಳೂರು: ಬಾರ್ ಮುಂದೆ ಅಪಘಾತ ಹೆಚ್ಚಾಗುತ್ತಿದೆ. ಕೂಡಲೇ ಬಾರ್ ಸ್ಥಳಾಂತರ ಮಾಡಲು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಸಮೀಪದ ಭಕ್ತರಹಳ್ಳಿಯಲ್ಲಿ ನಡೆದಿದೆ.
ಬಾರ್ ಓಪನ್ ಆದ ಒಂದೇ ವರ್ಷದಲ್ಲಿ ಬಾರ್ ಮುಂದೆಯೇ ಏಳಕ್ಕೂ ಹೆಚ್ಚು ಜನ ಅಪಘಾತದಿಂದ ಸಾವನ್ನಪ್ಪಿದ್ದಾರೆ. ಎರಡು ದಿನದ ಹಿಂದೆಯಷ್ಟೇ ಬಾರ್ ನಿಂದ ಹೊರ ಬಂದ ಇಬ್ಬರು ಯುವಕರಿಗೆ, ಬಾರ್ ಮುಂದೆಯೇ ಟಿಪ್ಪರ್ ಲಾರಿಯೊಂದು ಢಿಕ್ಕಿ ಹೊಡೆದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಘಟನೆ ಸ್ಥಳೀಯರನ್ನು ರೊಚ್ಚಿಗೇಳುವಂತೆ ಮಾಡಿದೆ. ತಕ್ಷಣ ಬಾರ್ ಬಂದ್ ಮಾಡಬೇಕೆಂದು ಪ್ರತಿಭಟನೆ ಮಾಡಿ ಆಗ್ರಹಿಸಿದ್ದಾರೆ. ಈ ವೇಳೆ, ಬಾರ್ ಮಾಲೀಕರು, ಸ್ಥಳಿಯರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ಕೂಡ ನಡೆದಿದೆ.
ಇದನ್ನೂ ಓದಿ: ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ: ತನ್ನದೇ ಪಡಿತರ ಚೀಟಿ ರದ್ದಿಗೆ ಮೊರೆ ಹೋದ ಪತಿ!
ಸ್ಥಳಕ್ಕೆ ಅಬಕಾರಿ ಇಲಾಖೆ ಹಾಗೂ ಡಿವೈಎಸ್ಪಿ ಭೇಟಿ ನೀಡಿ ಪ್ರತಿಭಟನಾನಿರತರನ್ನು ಸಮಾಧಾನ ಮಾಡಿದ್ದಾರೆ. ಮುಂದಿನ 10 ದಿನಗಳವರೆಗೆ ಬಾರ್ ಓಪನ್ ಮಾಡದಂತೆ ಬಾರ್ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ.
10 ದಿನಗಳ ಒಳಗೆ ಬಾರನ್ನು ಸ್ಥಳಾಂತರಿಸುವುದಾಗಿ ಸ್ಥಳಿಯರಿಗೆ ಭರವಸೆ ನೀಡಿದ್ದಾರೆ. ಸ್ಥಳಿಯರು ಕೂಡ ತಾತ್ಕಾಲಿಕವಾಗಿ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. 10 ದಿನಗಳಲ್ಲಿ ಬಾರ್ ಕ್ಲೋಸ್ ಆಗಬೇಕು ಅಥವ ಸ್ಥಳಾಂತರಗೊಳ್ಳಬೇಕು. ಒಂದು ವೇಳೆ ಬಾರ್ ಮತ್ತೆ ಓಪನ್ ಆದರೆ ಹೋರಾಟದ ರೂಪುರೇಷೆಯನ್ನು ಬದಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.