ಕೊಟ್ಟಿಗೆಹಾರ: ನಮಾಜ್ – ವಿಶೇಷ ಪ್ರಾರ್ಥನೆ
Team Udayavani, May 25, 2020, 6:43 AM IST
ಕೊಟ್ಟಿಗೆಹಾರ: ಮುಸ್ಲಿಂ ಸಮುದಾಯದವರು ಭಾನುವಾರ ಬೆಳಗ್ಗೆ ಹೊಸ ಬಟ್ಟೆ ಧರಿಸಿ ಮನೆಯಲ್ಲಿಯೇ ಕುಟುಂಬದವರು ಕುಳಿತು ಕುರಾನ್ ಓದಿ ನಮಾಜ್‌ನೊಂದಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಕೋವಿಡ್ ಲಾಕ್‌ಡೌನ್‌ನಿಂದ ಮಸೀದಿಯಲ್ಲಿ ಸಾಮೂಹಿಕ ನಮಾಜ್ ಹಾಗೂ ಪ್ರಾರ್ಥನೆ ಸಲ್ಲಿಸಲು ಸಾಧ್ಯವಾಗಿಲ್ಲ. ಆದರೂ ಉಪವಾಸ ವ್ರತವನ್ನು ಚಾಚೂ ತಪ್ಪದೇ ಮಾಡಿ ಬಂದಿದ್ದರು. ಹೀಗಾಗಿ ಮುಸಲ್ಮಾನರು ಮನೆಯಲ್ಲಿಯೇ ಕುಳಿತು ರಂಜಾನ್ ಹಬ್ಬ ಆಚರಿಸಿದರು. ಬಣಕಲ್, ಚಕ್ಕಮಕ್ಕಿ, ಕೊಟ್ಟಿಗೆಹಾರ, ಗಬ್‌ಗಲ್ ಸುತ್ತಮುತ್ತಲಿನ ಮುಸಲ್ಮಾನರು ಸರಳವಾಗಿಯೇ ಹಬ್ಬ ಆಚರಿಸಿದರು. ಮಂಗಳೂರು ಮೂಲದ ಮುಸಲ್ಮಾನರು ಭಾನುವಾರ ಹಬ್ಬ ಆಚರಿಸಿದರೆ ಉಳಿದ ಮುಸಲ್ಮಾನರು ಸೋಮವಾರ ಹಬ್ಬ ಆಚರಿಸಲು ಸಿದ್ದತೆ ನಡೆಸುತ್ತಿದ್ದರು. ಭಾನುವಾರ ಜನತಾ ಕರ್ಫ್ಯೂ ಇದ್ದ ಕಾರಣ ರಂಜಾನ್ ಹಬ್ಬಕ್ಕೆ ಆಪ್ತರನ್ನು ಮನೆಗೆ ಕರೆದು ಹಬ್ಬದ ಸಂಭ್ರಮ ಹಂಚಿಕೊಳ್ಳಲು ಸಾಧ್ಯವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.