1 ತಿಂಗಳ ಕಠಿಣ ಲಾಕ್‌ಡೌನ್ ಅಗತ್ಯ: ತಾರಾದೇವಿ
Team Udayavani, May 8, 2021, 4:28 PM IST
ಚಿಕ್ಕಮಗಳೂರು: ಕೋವಿಡ್ ಕರ್ಫ್ಯೂ ವಿಫಲವಾಗಿದ್ದು ರಾಜ್ಯ ಸರ್ಕಾರ ಒಂದು ತಿಂಗಳ ಕಠಿಣ ಲಾಕ್‌ಡೌನ್ ಜಾರಿಗೆ ಮುಂದಾಗಬೇಕೆಂದು ಕೇಂದ್ರ ಮಾಜಿ ಸಚಿವೆ ಡಿ.ಕೆ. ತಾರಾದೇವಿ ಸಿದ್ಧಾರ್ಥ ತಿಳಿಸಿದರು.
ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವೆಂಟಿಲೇಟರ್, ಆಕ್ಸಿಜನ್, ಹಾಸಿಗೆ ತುರ್ತು ನಿಗಾ ಘಟಕ ಸೌಲಭ್ಯವಿಲ್ಲದೆ ಜನರು ಮೃತಪಡುತ್ತಿದ್ದು, ಸರ್ಕಾರ ಸರಿಯಾದ ಸಮಯದಲ್ಲಿ ಎಚ್ಚರ ವಹಿಸಿದ್ದರೆ ಇಂತಹ ಪರಿಸ್ಥಿತಿ ರಾಜ್ಯಕ್ಕೆ ಬರುತ್ತಿರಲಿಲ್ಲ ಎಂದು ಹೇಳಿದ್ದಾರೆ. ಆಮ್ಲಜನಕ ಸಂಗ್ರಹ, ವಿತರಣೆಯಲ್ಲಿ ಸರ್ಕಾರ ಕೈ ಚೆಲ್ಲಿದ್ದರೂ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ರೋಗಿಗಳಿಗೆ ಆಮ್ಲಜನಕ ಸಿಗದೆ ಮೃತಪಡುತ್ತಿದ್ದಾರೆ. ಸರ್ಕಾರ ನಿರ್ಲಕ್ಷ್ಯ ಧೋರಣೆ ಮುಂದುವರಿಸಿದರೆ ಚಾಮರಾಜ ನಗರದ ಘಟನೆ ಜಿಲ್ಲಾ ಆಸ್ಪತ್ರೆಗಳಲ್ಲೂ ಸಂಭವಿಸುವ ಸಾಧ್ಯತೆ ಇರುವುದರಿಂದ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಸೋಂಕುಪ್ರಮಾಣ ಕಡಿಮೆ ಮಾಡಲು ಲಾಕ್‌ಡೌನ್ ವಿಧಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಜನರು ಆತಂಕಕ್ಕೆ ಒಳಗಾಗುವಂತೆ ಮಾಡಿದೆ. ವೆಂಟಿಲೇಟರುಗಳು ಮತ್ತು ಹಾಸಿಗೆಗಳ ಸಂಖ್ಯೆ, ಆಕ್ಸಿಜನ್ ಬೇಡಿಕೆ, ಅಗತ್ಯ ಔಷ ಧಗಳ ಪೂರೈಕೆ ವ್ಯವಸ್ಥೆ ಹಾಗೂ ಕೋವಿಡ್ ಕೇರ್ ಸೆಂಟರ್‌ಗಳನ್ನು ಜಿಲ್ಲಾ ಕೇಂದ್ರಗಳಲ್ಲಿ ಮತ್ತುತಾಲೂಕು ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್ ಮುಕ್ತವಾಯಿತೇ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.