ಮಿಡತೆ ದಾಳಿ: ಅಡಕೆ ತೋಟಕ್ಕೆ ಅಧಿಕಾರಿಗಳ ಭೇಟಿ
Team Udayavani, Jun 12, 2020, 8:26 AM IST
ಶೃಂಗೇರಿ: ಮಿಡತೆ ದಾಳಿಗೆ ತುತ್ತಾಗಿರುವ ಕೂಗೋಡು ಗ್ರಾಪಂ ವ್ಯಾಪ್ತಿಯ ಕೊಚ್ಚವಳ್ಳಿ ಅಶೋಕ್ ಹೆಗ್ಡೆ ಅವರ ಅಡಕೆ ತೋಟಕ್ಕೆ ರೈತಸಂಘದ ಪದಾಧಿಕಾರಿಗಳು ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.
ವಿದ್ಯುತ್ ಸ್ಥಗಿತದಿಂದ ನೀರಿನ ಲಭ್ಯತೆ ಇಲ್ಲದೇ ಕೀಟನಾಶಕ ಸಿಂಪಡಣೆಗೆ ಮುಂದೂಡಿದ್ದಾರೆ. ಹಾಗಾಗಿ, ಗುರುವಾರ ಅಡಕೆ ತೋಟದಲ್ಲಿ ಮಿಡತೆ ಕಾಣುತ್ತಿದ್ದು, ಕಾಳು ಮೆಣಸಿನ ಬಳ್ಳಿಯ ಮೇಲೂ ಮಿಡತೆ ದಾಳಿ ಮಾಡಿದೆ. ಈ ಹಿನ್ನೆಲೆಯಲ್ಲಿ ರೈತರಿಗೆ ಸಲಹೆ ನೀಡಿರುವ ತೋಟಗಾರಿಕೆ ಇಲಾಖೆ, ಮಿಡತೆ ನಿಯಂತ್ರಣ ಕ್ರಮ ಸೂಚಿಸಿದೆ. ಉತ್ತರ ಪ್ರದೇಶದಲ್ಲಿ ಕಂಡು ಬಂದಿರುವ ಮಿಡತೆ ಇದಲ್ಲ ಎಂದು ಸ್ಪಷ್ಟಪಡಿಸಲಾಗಿದ್ದು,ಮರಳುಗಾಡಿನ ಮಿಡತೆಯಲ್ಲ. ಈ ಮಿಡತೆ ಮಲೆನಾಡು ಭಾಗದಲ್ಲಿ ಹಿಂದಿನಿಂದಲೂ ಇದ್ದು, ನಿರ್ದಿಷ್ಟ ಕಳೆ, ಸಸ್ಯವನ್ನು ತಿನ್ನುತ್ತವೆ. 1 ಲೀ. ನೀರಿಗೆ 2 ಮಿ.ಲೀ. ಕ್ಲೋರೋಫೈರಿಫಾಸ್ ಕೀಟನಾಶಕ ಬಳಸಬೇಕು. ದ್ರಾವಣವನ್ನು ಗರಿ ಮತ್ತು ಕಾಫಿ ಎಲೆಯ ಮೇಲೂ ಸಿಂಪಡಣೆ ಮಾಡಬೇಕು. ಬೊರ್ಡೋ ದ್ರಾವಣದೊಂದಿಗೆ ಮಿಶ್ರಣ ಮಾಡಬಾರದು. ಕೃಷಿ ಇಲಾಖೆಯಲ್ಲಿ ಈ ಔಷ ಧ ಲಭ್ಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎ.ಬಿ.ಸಂಜಯ್ ಹಾಗೂ ಸಹಾಯಕ ನಿರ್ದೇಶಕ ಶ್ರೀಕೃಷ್ಣ, ಅಡಕೆ ಸಂಶೋಧನಾ ಕೇಂದ್ರದ ನಾರಾಯಣಸ್ವಾಮಿ, ಜಿಪಂ ಸದಸ್ಯ ಬಿ.ಶಿವಶಂಕರ್, ತಾಪಂ ಅಧ್ಯಕ್ಷೆ ಜಯಶೀಲ, ರೈತಸಂಘದ ಅಧ್ಯಕ್ಷ ಕಾನುವಳ್ಳಿ ಚಂದ್ರಶೇಖರ್, ಪದಾಧಿಕಾರಿಗಳಾದ ಶ್ರೀಧರರಾವ್, ಚನ್ನಕೇಶವ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.