Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Team Udayavani, Jan 8, 2025, 9:29 AM IST
ಚಿಕ್ಕಮಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಆರೋಪದಡಿ ಕಡೂರು ತಾಲೂಕು ವೈದ್ಯಾಧಿಕಾರಿ ಡಾ.ಉಮೇಶ್ ಮನೆ ಮೇಲೆ ಬುಧವಾರ(ಜ8) ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಡಾ.ಉಮೇಶ್ 1995ರಲ್ಲಿ ವೈದ್ಯಾಧಿಕಾರಿಯಾಗಿ ಸೇವೆಗೆ ನೇಮಕವಾಗಿದ್ದು, 2023 ರಿಂದ ಕಡೂರು ತಾಲೂಕು ವೈದ್ಯಾಧಿ ಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇವರು 2020 ರಿಂದ 2023 ರ ವರೆಗೆ ಚಿಕ್ಕಮಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
1995 ರಿಂದ ಸೇವೆಗೆ ಸೇರಿದಲ್ಲಿಂದ ಇಲ್ಲಿಯವರೆಗೆ ತಮ್ಮ ಅಧಿಕಾರವನ್ನು ದುರುಪ ಯೋಗ ಮಾಡಿಕೊಂಡು ಕಾನೂನು ಬದ್ದ ಮೂಲ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಚಿರಾಸ್ಥಿ ಹಾಗೂ ಚರಾಸ್ಥಿ ಸಂಪಾದನೆ ಮಾಡಿದ್ದಾರೆ ಆರೋಪವಿದೆ.
ಪತ್ನಿ ಟಿ.ಎಸ್.ಮಂಜುಳ ಹಾಗೂ ಕುಟುಂಬ ಸದಸ್ಯರ ಹೆಸರಿನಲ್ಲಿ ಸ್ಥಿರಾಸ್ತಿಯನ್ನು ಖರೀದಿ ಮಾಡಿದ್ದಾರೆ. ಇಬ್ಬರು ಮಕ್ಕಳು ರಾಯಚೂರು ಮತ್ತು ದಾವಣಗೆರೆ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಮಾಡಿದ ಆರೋಪದ ಹಿನ್ನಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.