ಸಾಮಾಜಿಕ ಅಂತರ ಕಾಯ್ದುಕೊಳ್ಳಿ: ರವಿ


Team Udayavani, Apr 1, 2020, 6:12 PM IST

cm-tdy-1

ಚಿಕ್ಕಮಗಳೂರು: ಕೋವಿಡ್ 19 ಸೋಂಕನ್ನು ನಿಯಂತ್ರಿಸುವುದರ ಜೊತೆಗೆ ತಡೆಗಟ್ಟಲು ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ಎಚ್ಚರ ವಹಿಸುವುದು ಅಗತ್ಯ ಎಂದು ಸಚಿವ ಸಿ.ಟಿ. ರವಿ ಹೇಳಿದರು.

ಮಂಗಳವಾರ ಕೊಪ್ಪ ತಾಪಂ ಸಭಾಂಗಣದಲ್ಲಿ ಕೋವಿಡ್‌-19 ಸೋಂಕು ತಡೆಗಟ್ಟುವಿಕೆ ಸಂಬಂಧ ತಾಲೂಕಿನಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು ಹಾಗೂ ಶಾಂತಿ ಸುವ್ಯವಸ್ಥೆ ಕುರಿತು ಇಲಾಖೆ ಅಧಿಕಾರಿಗಳೊಂದಿಗಿನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲೂಕಿಗೆ ಹೊರ ದೇಶದಿಂದ 31 ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ 1778 ಜನರು ಬಂದಿದ್ದು ಅವರ ಮೇಲೆ ಎಚ್ಚರ ವಹಿಸಿ ನಿತ್ಯ ಆರೋಗ್ಯ ತಪಾಸಣೆಗೆ ಒಳಪಡಿಸಬೇಕು ಎಂದ ಅವರು, ತಾಲೂಕಿನಲ್ಲಿ ನಿರ್ಗತಿಕರು, ಅಲೆಮಾರಿಗಳು, ಅಸಹಾಯಕರು ಇದ್ದಲ್ಲಿ ಅವರನ್ನು ಗುರುತಿಸಿ ಪಟ್ಟಿ ಮಾಡಿ ಅವರಿಗೆ ಸೂಕ್ತ ಆಹಾರ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು.

ಕಾಫಿ ತೋಟಗಳಲ್ಲಿ ಕೂಲಿ ಕೆಲಸ ಮಾಡುವ ಕಾರ್ಮಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ನಿರ್ವಹಿಸಲು ಯಾವುದೇ ಅಡ್ಡಿಯಿಲ್ಲ. ಆದರೆ, ಬೇರೆ ಹಳ್ಳಿಗಳು ಅಥವಾ ನಗರಗಳಿಗೆ ಬಾರದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.

ತಾಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಮಾಡುವ ಸಂದರ್ಭದಲ್ಲಿ ದಿನಕ್ಕೆ ನಿಗದಿತವಾಗಿ ಎಷ್ಟು ಪಡಿತರದಾರರಿಗೆ ವಿತರಿಸಬಹುದು ಎಂಬುದನ್ನು ಅಂದಾಜು ಮಾಡಿ ಸಮಯ ನಿಗದಿಗೊಳಿಸಿ ಟೋಕನ್‌ ವಿತರಿಸುವುದರೊಂದಿಗೆ ಪಡಿತರ ವಿತರಿಸಬೇಕು. ಒಟಿಪಿ ಮೂಲಕ ಪಡಿತರ ವಿತರಣೆಗೆ ಆದೇಶದ ಹಿನ್ನೆಲೆ ಬಯೋಮೆಟ್ರಿಕ್‌ ತೆಗೆದುಕೊಳ್ಳುವಾಗ ಸ್ವತ್ಛತೆ ಕಾಪಾಡಲು ಸ್ಯಾನಿಟೈಸರ್‌ ಅನ್ನು ತಪ್ಪದೇ ಬಳಸಬೇಕು ಎಂದರು.

ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಮಾತನಾಡಿ, ಕೊರೋನಾ ಸೋಂಕಿನ ಲಕ್ಷಣ ಆಧರಿಸಿ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಸೂಕ್ತ ಔಷಧಗಳನ್ನು ಇಟ್ಟುಕೊಂಡಿರಬೇಕು. ಗೃಹ ನಿರ್ಬಂಧದಲ್ಲಿರುವವರನ್ನು ನಿತ್ಯ ಆರೋಗ್ಯ ತಪಾಸಣೆ ಮಾಡಬೇಕು ಎಂದರು.

ಸಭೆಯಲ್ಲಿ ಜಿಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ, ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ, ಜಿಪಂ ಮುಖ್ಯ ಕಾರ್ಯನಿರ್ವಣಾಧಿ ಕಾರಿ ಎಸ್‌. ಪೂವಿತಾ, ಎಸ್ಪಿ ಹರೀಶ್‌ ಪಾಂಡೆ ಮತ್ತಿತರರಿದ್ದರು.

ಟಾಪ್ ನ್ಯೂಸ್

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.