![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 20, 2020, 9:00 AM IST
ಮೂಡಿಗೆರೆ ( ಚಿಕ್ಕಮಗಳೂರು): ಚಾರ್ಮಾಡಿ ಘಾಟಿಯ ಮಲಯ ಮಾರುತ ಬಳಿ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಕಿಗೆ ಬಂದಿದೆ.
ಚಿಕ್ಕಮಗಳೂರು ಜಿಲ್ಲೆಯ ಮಲಯ ಮಾರುತ ಬಳಿ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದರು. ಕಾರಿನಲ್ಲಿ ದೊರೆತ ದಾಖಲೆಗಳ ಪ್ರಕಾರ ಮೃತಪಟ್ಟ ವ್ಯಕ್ತಿಯನ್ನು 44 ವರ್ಷದ ನಾಗರಾಜು ಎಂದು ಗುರುತಿಸಲಾಗಿದೆ. ಈತ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಹೊರಕೆರೆ ದೇವಪುರ ಗ್ರಾಮದವರು ಎನ್ನಲಾಗಿದೆ.
ಮಂಗಳವಾರ ಸಂಜೆಯಿಂದ ಕಾರು ಇಲ್ಲಿದ್ದು, ಬುಧವಾರ ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಕಾರಿನ ಪಕ್ಕ ವಿಷದ ಬಾಟಲಿ ಪತ್ತೆಯಾಗಿದ್ದು, ಡ್ರೈವಿಂಗ್ ಸೀಟಿನಲ್ಲಿ ಕುಳಿತು ವಿಷ ಸೇವಿಸರಬಹುದು ಎಂದು ಅಂದಾಜಿಸಲಾಗಿದೆ.
ಡೆತ್ ನೋಟ್ ಪತ್ತೆ: ಕಾರಿನಲ್ಲಿ ನಾಗರಾಜು ಬರೆದಿದ್ದಾನೆ ಎನ್ನಲಾದ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ಗಿರೀಶ್ ಎಂಬಾತ ನನಗೆ 26 ಸಾವಿರ ರೂಪಾಯಿ ಹಣ ನೀಡಬೇಕಿದ್ದು, ನನ್ನ ಬೈಕ್ ಕೂಡಾ ಆತನಿಗೆ ಕೊಟ್ಟಿದ್ದೇನೆ ಎಂದು ಬರೆದಿದ್ದಾರೆ.
ಅಗಲಿದ ಪತ್ನಿಯ ನೆನಪು: ನಾಗರಾಜು ಅವರ ಪತ್ನಿ 20 ದಿನಗಳ ಹಿಂದೆ ಸಾವನ್ನಪ್ಪಿದ್ದರು ಎನ್ನಲಾಗಿದೆ. “ ಪತ್ನಿಯನ್ನು ಕಳೆದುಕೊಂಡ ಮೇಲೆ ನನಗೆ ಜೀವನ ಬೇಸರವಾಗಿದೆ. ಅವಳನ್ನು ಬಿಟ್ಟು ನನಗೆ ಜೀವನವೇ ಇಲ್ಲ. ಹಾಗಾಗಿ ಅವಳ ದಾರಿಗೆ ನಾನು ಸಾಗುವೆ” ಎಂದು ಡೆತ್ ನೋಟ್ ನಲ್ಲಿ ಬರೆದುಕೊಂಡಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.