ಸರಕಾರದಿಂದ ರಾಜ್ಯದಲ್ಲಿ ಮಿನಿ ತಾಲಿಬಾನ್‌ ನಿರ್ಮಾಣ: ಸಿ.ಟಿ. ರವಿ  

Team Udayavani, Jan 29, 2018, 6:15 AM IST

CT-RAVI-282018.jpg

ಚಿಕ್ಕಮಗಳೂರು: ಅಪರಾಧ ಪ್ರಕರಣಗಳಲ್ಲಿಯೂ ಜಾತಿ ಹುಡುಕುವ ಕೆಲಸ ಮಾಡಿದ ಮೊದಲ ಸರಕಾರವಿದ್ದರೆ ಅದು ರಾಜ್ಯದ ಕಾಂಗ್ರೆಸ್‌ ಸರಕಾರ. ಜಾತ್ಯತೀತತೆಯ ಹೆಸರಿನಲ್ಲಿ ಕಾಂಗ್ರೆಸ್‌ ರಾಜ್ಯದಲ್ಲಿ  ಮಿನಿ ತಾಲಿಬಾನ್‌ ನಿರ್ಮಿಸಲು ಮುಂದಾಗಿದೆಯೇ? ಎಂಬ ಅನುಮಾನ ಕಾಡುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ. ರವಿ ಹೇಳಿದರು.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರಕಾರ ಕೋಮುಗಲಭೆಗೆ ಕಾರಣರಾದವರ ವಿರುದ್ಧದ ಪ್ರಕ ರಣಗಳನ್ನು ಜಾತಿ ಹೆಸರಿನಲ್ಲಿ ಹಿಂಪಡೆ ದುಕೊಂಡಿದೆ. ಕ್ರೈಮ್‌ಗಳಿಗೆ ಜಾತಿ, ಜನಾಂಗ ಎಂಬುದೆಲ್ಲ ಇರುವುದಿಲ್ಲ. ಈ ರೀತಿ ಪ್ರಕರಣಗಳನ್ನು ವಾಪಸ್‌ ಪಡೆಯುವ ಮೂಲಕ ರಾಜ್ಯದಲ್ಲಿ ಕೋಮು ಗಲಭೆಗಳಿಗೆ ಸರಕಾರವೇ ಕಾರಣವಾಗುತ್ತಿದೆ. ಇಂತಹ ಕೆಲಸ ಗಳನ್ನು ಮಾಡಿಯೇ ದೇಶದಲ್ಲಿ  ಕಾಂಗ್ರೆಸ್‌ ನಿರ್ನಾಮವಾಗುತ್ತಿದೆ. ಕೆಟ್ಟರೂ ಬುದ್ಧಿ ಬಂದಿಲ್ಲ ಎಂಬುದಕ್ಕೆ ಅಲ್ಪಸಂಖ್ಯಾಕರ ಮೇಲಿನ ಪ್ರಕರಣ ಹಿಂಪಡೆದಿರುವುದೇ ನಿದರ್ಶನವಾಗಿದೆ ಎಂದರು.

ದತ್ತ ಪೀಠ ವಿಚಾರದಲ್ಲಿ ನಾಗ ಮೋಹನ್‌ದಾಸ್‌ ಸಮಿತಿ ಸಲ್ಲಿಸಿರುವ ವರದಿಯನ್ನು ಸಚಿವ ಸಂಪುಟಕ್ಕೆ ಸಲ್ಲಿಸಲಾಗಿದೆ ಎಂಬ ಸಚಿವ ರೋಷನ್‌ ಬೇಗ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ರವಿ, ಸಮಿತಿ ರಚಿಸುವ ಮೂಲಕ ರಾಜ್ಯ ಸರಕಾರ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದೆ. 2017 ರಲ್ಲಿ ಮುಜರಾಯಿ ಕಮೀಶನರ್‌ ಸಲ್ಲಿಸಿದ್ದ ವರದಿ ಆಧರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ಆದೇಶಿಸಿತ್ತು. ಆದರೆ ಸರಕಾರ ಆ ಕೆಲಸ ಮಾಡದೆ ಸಮಿತಿ ರಚಿಸಿತ್ತು ಎಂದು ದೂರಿದರು.

ಇತ್ತೀಚೆಗೆ ನಗರದಲ್ಲಿ ಎಡಪಂಥೀಯರು ನಡೆಸಿದ ಕಾರ್ಯಕ್ರಮದಲ್ಲಿ ಕೆಲವರು ನಾಗಮೋಹನ್‌ ದಾಸ್‌ ಸಮಿತಿಯ ವರದಿಯನ್ನು ಸರಕಾರ ಕೂಡಲೆ ಅನುಷ್ಠಾನಕ್ಕೆ ತರಬೇಕೆಂಬ ಹೇಳಿಕೆ ನೀಡಿದ್ದಾರೆ. ಸಮಿತಿಯು ಸಲ್ಲಿಸಿದ ವರದಿಯಲ್ಲಿ ಏನಿದೆ ಎಂಬುದು ಅವರಿಗೆ ತಿಳಿದಿದೆ ಎಂಬ ಅನುಮಾನ ಈ ಹೇಳಿಕೆಯಿಂದ ದೃಢವಾಗುತ್ತದೆ ಎಂದರು.

ಅವರ ಹೇಳಿಕೆಯನ್ನು ಗಮನಿಸಿದರೆ ಸರಕಾರ ಮತ್ತು ಎಡಪಂಥೀಯರು ಸೇರಿಕೊಂಡೆ ಸಮಿತಿಯಿಂದ ಹಿಂದೂ ವಿರೋಧಿ ವರದಿ ಸಿದ್ಧಪಡಿಸಿದ್ದಾರೆ ಎಂಬುದು ಖಚಿತವಾಗುತ್ತದೆ ಎಂದರು. ಸಿದ್ದರಾಮಯ್ಯ ಅವರ  ಒಡ್ಡೋಲಗದ ಸಾಹಿತಿ ಪ್ರೊ| ಭಗವಾನ್‌ ಪದೇ ಪದೆ ರಾಮ, ಕೃಷ್ಣರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದರೂ ಅವರ ವಿರುದ್ಧ ಈವರೆಗೂ ಒಂದು ಪ್ರಕರಣ ವನ್ನೂ ಸರಕಾರ ದಾಖಲಿಸಿಲ್ಲ ಎಂದು ದೂರಿದರು.

ಟಾಪ್ ನ್ಯೂಸ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.