ಸಚಿವ ಸಿಟಿ ರವಿಗೂ ತಾಗಿದ ಕೋವಿಡ್ ಸೋಂಕು: ಯಾವುದೇ ಸೋಂಕು ಲಕ್ಷಣಗಳಿಲ್ಲ ಎಂದ ಸಚಿವ
Team Udayavani, Jul 11, 2020, 7:54 PM IST
ಚಿಕ್ಕಮಗಳೂರು: ಸಚಿವ ಸಿ.ಟಿ.ರವಿ ಅವರಿಗೆ ಕೋವಿಡ್-19 ಪಾಸಿಟಿವ್ ದೃಢವಾಗಿದೆ. ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್ ಬೆಂಗಳೂರಿನಲ್ಲಿ ಮಾದ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿದ್ದು, ನಾಣು ಕ್ಷೇಮವಾಗಿದ್ದೇನೆ. ನನಗೆ ಕೋವಿಡ್ ಸೋಂಕಿನ ಯಾವುದೇ ಲಕ್ಷಣಗಳಿಲ್ಲ. ಚಿಕ್ಕಮಗಳೂರು ಸಮೀಪದ ರಾಮನಹಳ್ಳಿ ಯಲ್ಲಿರುವ ಫಾರಂಹೌಸ್ನಲ್ಲಿ ಸ್ವತಃ ಹೋಮ್ ಕ್ವಾರಂಟೈನ್ ಆಗಿರುವುದಾಗಿ ಬರೆದುಕೊಂಡಿದ್ದಾರೆ.
ಸಚಿವ ಸಿ.ಟಿ.ರವಿ ಶುಕ್ರವಾರ ತಡರಾತ್ರಿ ಚಿಕ್ಕಮಗಳೂರು ನಗರಕ್ಕೆ ಆಗಮಿಸಿ ತಮ್ಮ ಫಾರಂಹೌಸ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶನಿವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್ ಮಾದ್ಯಮಗಳಿಗೆ ಹೇಳಿಕೆ ನೀಡುವ ಸಂದರ್ಭದಲ್ಲಿ ಸಚಿವ ಸಿ.ಟಿ.ರವಿ ಅವರಿಗೂ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಹೇಳಿದ್ದರು.
ವೈದ್ಯಕೀಯ ಶಿಕ್ಷಣ ಸಚಿವರ ಹೇಳಿಕೆಯಿಂದ ಗೊಂದಲಕ್ಕೆ ಒಳಗಾದ ಪಕ್ಷದ ಮುಖಂಡರು ಹಾಗೂ ಸಾರ್ವಜನಿಕರು ಸಚಿವ ಸಿ.ಟಿ.ರವಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಯತ್ನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನನಗೆ ಸೋಂಕಿನ ಲಕ್ಷಣಗಳಿಲ್ಲ. ಆದರೂ ಚಿಕ್ಕಮಗಳೂರು ಸಮೀಪದ ರಾಮನಹಳ್ಳಿಯಲ್ಲಿರುವ ಫಾರಂಹೌಸ್ನಲ್ಲಿ ತಾವೇ ಸ್ವತಹಃ ಹೋಮ್ ಕ್ವಾರಂಟೈನ್ ನಲ್ಲಿರುವುದಾಗಿ ಟ್ವೀಟ್ ಮಾಡಿದ್ದಾರೆ.
ನಾನು ಕ್ಷೇಮವಾಗಿದ್ದೇನೆ. ಕೋರೋನಾ ಲಕ್ಷಣಗಳಿಲ್ಲ. ಈಗ ಹೋಮ್ ಕ್ವಾರಂಟೈನ್-ನಲ್ಲಿ ಇದ್ದೇನೆ. ಸದ್ಯ ನನ್ನ ತೋಟದ ಮನೆಯಲ್ಲೇ ವಾಕ್ ಮಾಡುತ್ತಿದ್ದೇನೆ.
— C T Ravi ?? ಸಿ ಟಿ ರವಿ (@CTRavi_BJP) July 11, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suvarna Bharathi Mahotsava: ಶೃಂಗೇರಿಯಲ್ಲಿ ದಾಖಲೆ ಬರೆದ ತ್ರಿವೇಣಿ ಸ್ತೋತ್ರ ಪಠಣ
Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…
Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್ ಮಾರ್ಮಿಕ ಮಾತು
chikkamagaluru: ಹೆಬ್ಬಾಳ್ಕರ್ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ
Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ
MUST WATCH
ಹೊಸ ಸೇರ್ಪಡೆ
ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್’ ದ್ವಿತೀಯ
Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ
ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ
ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ
ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.