Missing Case: ದೇವರ ಮನೆ ಪ್ರವಾಸಕ್ಕೆ ಹೋಗಿ ನಾಪತ್ತೆಯಾದ ಯುವಕನ ಪ್ರಕರಣ ಸುಖಾಂತ್ಯ
ಮನೆ ಹತ್ತಿರದ ಮೋರಿ ಬಳಿ ಕುಳಿತ್ತಿದ್ದ ಯುವಕ
Team Udayavani, Oct 11, 2023, 10:38 AM IST
ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ಐತಿಹಾಸಿಕ ಹಾಗೂ ಪ್ರವಾಸಿ ತಾಣ ದೇವರ ಮನೆ ಪ್ರವಾಸಕ್ಕೆ ಬಂದಿದ್ದ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದೀಕ್ಷಿತ್ (27) ಅಕ್ಟೋಬರ್ 10 ರಂದು ಮಂಗಳವಾರ ಸಂಜೆ ನಾಪತ್ತೆಯಾಗಿದ್ದ. ಇದೀಗ ಆಕ್ಟೋಬರ್ 11 ರಂದು ಬೆಳಗ್ಗೆ ಮನೆಯ ಹತ್ತಿರದ ಮೋರಿ ಬಳಿ ಕುಳಿತಿದ್ದನ್ನು ಊರವರು ಪತ್ತೆ ಹಚ್ಚಿ ಮನೆಗೆ ಸೇರಿಸಿದ್ದಾರೆ.
ಪ್ರಕರಣ ಸಂಬಂಧಿಸಿದಂತೆ ಸ್ಥಳೀಯರು ಹಾಗೂ ಬಣಕಲ್ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದರು.
ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಅರಂತೊಟ್ಟು ದೀಕ್ಷಿತ್ ಪೂಜಾರಿ , ಸಂಪಾಜೆ ನಿವಾಸಿ ದೀಕ್ಷಿತ್ ಗೌಡ, ಜಾರ್ಲೋಟ್ಟು ನಿವಾಸಿ ಕಿರೋತ್ ಪೂಜಾರಿ, ಅಡೆಂಕಿಲೊಟ್ಟು ನಿವಾಸಿ ಸುದರ್ಶನ್ ಗೌಡ ಒಂದೇ ಊರಿನವರಾಗಿದ್ದು ಇವರೆಲ್ಲ ದೇವರ ಮನೆ ಕಾರಿನಲ್ಲಿ ಹೋಗಿದ್ದರು. ದೇವರಮನೆಗೆ ಪ್ರವಾಸಕ್ಕೆ ಬಂದಿದ್ದು ಪ್ರವಾಸ ಮುಗಿಸಿ ಹಿಂದಿರುಗುವಾಗ ಯುವಕರ ನಡುವೆ ಯಾವುದೋ ವಿಚಾರದಲ್ಲಿ ಗಲಾಟೆ ನಡೆದು ಹೊಡೆದಾಟ ಮಾಡಿಕೊಂಡಿದ್ದರು. ನಂತರ ಕೋಪದಿಂದ ದೀಕ್ಷಿತ್ ಪೂಜಾರಿ ಬೇರೆಯಾಗಿ ಹೋಗಿದ್ದ. ದೇವರ ಮನೆ ಸುತ್ತಮುತ್ತ ಮಂಜು ಕವಿದಿದ್ದರಿಂದ ಹುಡುಕಾಟಕ್ಕೆ ಅಡಚಣೆಯಾಗಿದ್ದು ಇಂದು ಕಾರ್ಯಾಚರಣೆ ಮುಂದುವರೆಸಿದ್ದರು.
ಇದೀಗ ಯುವಕ ಬೇರೆ ವಾಹನದ ಮೂಲಕ ಊರಿಗೆ ಮರಳಿ ಪತ್ತೆಯಾಗಿರುವ ಬಗ್ಗೆ ಬಣಕಲ್ ಪೊಲೀಸರಿಗೆ ಮನೆ ಮಂದಿ ಮಾಹಿತಿ ನೀಡಿದ್ದಾರೆ. ಇದರೊಂದಿಗೆ ಯುವಕನ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ.
ಇದನ್ನೂ ಓದಿ: Hamas ಉಗ್ರರಿಂದ ಜರ್ಮನ್ ಯುವತಿಯ ಬೆತ್ತಲೆ ಮೆರವಣಿಗೆ.. “ನನ್ನ ಮಗಳು ಇನ್ನೂ ಬದುಕಿದ್ದಾಳೆ”
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್?
Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್’
High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು
MUST WATCH
ಹೊಸ ಸೇರ್ಪಡೆ
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Washington: ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ
MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.