ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋಗಿ ನಾಪತ್ತೆಯಾಗಿದ್ದ ಮಹಿಳೆಯ ಶವ ನದಿಯಲ್ಲಿ ಪತ್ತೆ
Team Udayavani, Jul 23, 2024, 11:53 AM IST
ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಮಹಿಳೆಯೊಬ್ಬರು ಕೊಚ್ಚಿ ಹೋಗಿ ಮೃತಪಟ್ಟಿರುವ ಘಟನೆ ನಡೆದಿದ್ದು, ಆಸ್ಪತ್ರೆಗೆ ಹೋಗಿ ಮನೆಗೆ ಹಿಂದಿರುಗುವಾಗ ನದಿಗೆ ಬಿದ್ದು ಮಹಿಳೆ ಮೃತಪಟ್ಟಿದ್ದಾರೆಂದು ಹೇಳಲಾಗುತ್ತಿದೆ.
ಜಿಲ್ಲೆಯ ಕಳಸ ಪಟ್ಟಣ ಸಮೀಪದ ಗೇರು ತೋಟ ನಿವಾಸಿ ಶಾರದಾ (55) ಮೃತ ಮಹಿಳೆಯಾಗಿದ್ದಾರೆ.
ಜು.16 ರಂದು ಶಾರದಾ ಅವರು ಎನ್.ಆರ್.ಪುರದ ಆಸ್ಪತ್ರೆಗೆ ಹೋಗಿ ಬರುವುದಾಗಿ ಮನೆಯಿಂದ ಬಂದಿದ್ದರು. ಆಸ್ಪತ್ರೆ ಹೋಗುವುದಾಗಿ ಹೇಳಿ ಬಂದಿದ್ದ ಶಾರದಾ ಮತ್ತೆ ಮನೆಗೆ ಹಿಂದಿರುಗಿರಲಿಲ್ಲ. ಕುಟುಂಬಸ್ಥರು ಪೊಲೀಸರಿಗೆ ಕಾಣೆಯಾಗಿರುವ ಬಗ್ಗೆ ದೂರು ನೀಡಿದ್ದರು.
ಮಂಗಳವಾರ ಬೆಳಗ್ಗೆ ಗೇರುತೋಟ ಸಮೀಪದಲ್ಲಿ ಹರಿಯುವ ಭದ್ರಾ ನದಿಯಲ್ಲಿ ಮಹಿಳೆಯ ಶವವನ್ನು ಸ್ಥಳೀಯರು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಪೊಲೀಸರು ಧರ್ಮಸ್ಥಳ ವಿಪತ್ತು ನಿರ್ವಹಣ ತಂಡದವರ ನೆರವಿನಿಂದ ನದಿಯಲ್ಲಿದ್ದ ಶವವನ್ನು ಹೊರ ತೆಗೆದಿದ್ದಾರೆ.
ಮಹಿಳೆ ಕಾಲುಜಾರಿ ನದಿಗೆ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದು ಬರಬೇಕಿದೆ.
ಇದನ್ನೂ ಓದಿ: Union Budget 2024: ಉದ್ಯೋಗ, ಶಿಕ್ಷಣ, ಕೌಶಲ್ಯಾಭಿವೃದ್ದಿಗೆ 1.48 ಲಕ್ಷ ಕೋಟಿ ರೂ. ಮೀಸಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Director Guruprasad: ಖ್ಯಾತ ಸ್ಯಾಂಡಲ್ವುಡ್ ನಿರ್ದೇಶಕ ಗುರುಪ್ರಸಾದ್ ಆ*ತ್ಮಹತ್ಯೆ
Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
MUST WATCH
ಹೊಸ ಸೇರ್ಪಡೆ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ
UV Fusion: ಇತಿಹಾಸದಲ್ಲಿ ಮರೆಯಾದ ಭೈರಾದೇವಿಯ ಸಾಮ್ರಾಜ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.