ಪಡಿತರಕ್ಕಾಗಿ ಪ್ರತಿಭಟನೆ : ಕಳ್ಳಿಕೊಪ್ಪಲು ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಸಿಟಿ ರವಿ
Team Udayavani, May 30, 2021, 1:00 PM IST
ಚಿಕ್ಕಮಗಳೂರು : ಕಳಸಾಪುರ ಗ್ರಾಮದ ನ್ಯಾಯಬೆಲೆ ಅಂಗಡಿ ಎದುರು ಕಳ್ಳಿಕೊಪ್ಪಲು ಗ್ರಾಮಸ್ಥರು ರೇಷನ್ ವಿಚಾರವಾಗಿ ಪ್ರತಿಭಟನೆ ನಡೆಸಿದ ಬೆನ್ನಲ್ಲೆ ಇಂದು ( ಮೇ.30) ಶಾಸಕ ಸಿ.ಟಿ ರವಿ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಿದರು.
ಈ ವೇಳೆ ಮಾತನಾಡಿದ ಶಾಸಕರು, ನಾನು ಅಕ್ಕಿ ಕೊಟ್ಟಿರಲಿಲ್ಲ, ನಾನು ಕೊಟ್ಟಿದ್ದು ಸಾಂಬಾರು ಪದಾರ್ಥ ವಸ್ತುಗಳು. ಗ್ರಾಮ ಪಂಚಾಯಿತಿಯವರು ನಿಮಗೆ ಅಕ್ಕಿ ನೀಡಿದ್ದಾರೆ. ಅವರು ಪೂರ್ಣ ಪ್ರಮಾಣದಲ್ಲಿ ನೀಡದಿದ್ರೆ ಅಕ್ಕಿ, ಗೋಧಿ ನೀಡಲು ತಹಶೀಲ್ದಾರ್ ಗೆ ಹೇಳಿದ್ದೇನೆ ಎಂದು ಭರವಸೆ ನೀಡಿದರು.
ಕಳ್ಳಿಕೊಪ್ಪಲು ಗ್ರಾಮದಲ್ಲಿ ಸೋಂಕಿಗೆ ತುತ್ತಾಗಿದ್ದ ಕುಟುಂಬಗಳು ನ್ಯಾಯಬೆಲೆ ಅಂಗಡಿಯಲ್ಲಿ ತಮಗೆ ಸರಕಾರದ ರೇಷನ್ ನೀಡುತ್ತಿಲ್ಲ ಎಂದು ಆರೋಪಿಸಿ ಶನಿವಾರ ಕಳಸಾಪುರ ಗ್ರಾಮದ ನ್ಯಾಯಬೆಲೆ ಅಂಗಡಿ ಎದುರು ಧರಣಿ ನಡೆಸಿದ್ದರು.
ಕಳ್ಳಿಕೊಪ್ಪಲು ಗ್ರಾಮದ 47 ಕುಟುಂಬದ 75 ಜನರಿಗೆ ಪಾಸಿಟಿವ್ ಬಂದಿತ್ತು. ಎಲ್ಲರಿಗೂ ಕ್ವಾರಂಟೈನ್ ಮಾಡಿ ತಾಲೂಕು ಆಡಳಿತ ಕಿಟ್ ನೀಡಿತ್ತು. 10 ಕೆ.ಜಿ. ಅಕ್ಕಿ, ಎಣ್ಣೆ, ಬೆಳೆ, ಉಪ್ಪು ಸೇರಿ ವಿವಿಧ ಸಾಮಾಗ್ರಿಗಳ ಕಿಟ್ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ
Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್ ಮೇಲೇ ಕಣ್ಣು!
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.