ರವಿ ವಿರುದ್ಧ ಶಾಸಕ ಕುಮಾರಸ್ವಾಮಿ ಅಸಮಾಧಾನ
Team Udayavani, Jul 17, 2021, 11:01 AM IST
ಚಿಕ್ಕಮಗಳೂರು: ಜಿಲ್ಲೆಯ ಜನಪ್ರತಿನಿಧಿಗಳ ನಡುವೆ ಬಿರುಕು ಮೂಡಿದೆ. 2 ಬಣಗಳಾಗಿವೆ ಎಂಬ ಸುದ್ದಿ ಹರಿದಾಡುತ್ತಿತ್ತು. ಕೆಲವುದಿನಗಳ ಹಿಂದೆ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ಸಚಿವಕೆ. ಸುಧಾಕರ್ ಭೇಟಿ ನೀಡಿದಾಗ ಶಾಸಕರು ಗುಪ್ತ್ ಗುಪ್ತ್ ಸಭೆ ನಡೆಸಿದ್ದರು ಎಂಬ ಸುದ್ದಿಹರಿದಾಡಿದ ಬೆನ್ನಲ್ಲೇ ಮೂಡಿಗೆರೆಕ್ಷೇತ್ರ ಶಾಸಕ ಎಂ.ಪಿ.ಕುಮಾರಸ್ವಾಮಿ ಸಿ.ಟಿ. ರವಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಜಿಲ್ಲೆಯಲ್ಲಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿಸುತ್ತಿದ್ದು ನಮ್ಮ ಗಮನಕ್ಕೆ ತಂದಿಲ್ಲ, ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳುತ್ತಾರೆಎಂದು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದು ಜಿಲ್ಲೆಯ ಜನಪ್ರತಿನಿಧಿಗಳ ನಡುವೆ ಸಮನ್ವಯತೆ ಇಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ.
ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಈ ಸಂಬಂಧ ಮಾದ್ಯಮದವರು ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ, ಯಾವುದೇ ಅಧಿಕಾರಿ ವರ್ಗಾವಣೆ ಮಾಡಬೇಕಾದರೆ ಕೋರ್‌ಕಮಿಟಿಯಲ್ಲಿ ಚರ್ಚಿಸಬೇಕು. ಉಸ್ತುವಾರಿ ಸಚಿವರಿಂದ ಆಗಬೇಕು ಎಂಬ ತೀರ್ಮಾನ ಆಗಿತ್ತು. ಇದ್ಯಾವುದೂ ನಡೆಯುತ್ತಿಲ್ಲ ಎಂದು ತಿಳಿಸಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ವರ್ಗಾವಣೆ ಬಗ್ಗೆ ನಾನು ಆಕ್ಷೇಪ ವ್ಯಕ್ತಪಡಿಸಿದ್ದೇನೆ. ಏಕೆಂದರೆ ನಮ್ಮಲ್ಲಿ ಅರಣ್ಯ ಸಮಸ್ಯೆ ಇದೆ. ನುರಿತ ಮತ್ತು ತಾಳ್ಮೆಯುಳ್ಳ ಉಪ ಅರಣ್ಯ ಸಂರಕ್ಷಣಾಧಿಕಾರಿ ಬೇಕಿದೆ. ಸಿ.ಟಿ.ರವಿಯವರ ಕ್ಷೇತ್ರದಲ್ಲಿ ಅರಣ್ಯ ಸಮಸ್ಯೆ ಇಲ್ಲ. ಅವರು ಹೋಗಿ ಉಪ ಅರಣ್ಯ ಸಂರಕ್ಷಣಾಧಿಕಾರಿಯನ್ನು ವರ್ಗಾವಣೆ ಮಾಡಿಸಿಕೊಂಡು ತಮಗೆ ಬೇಕಾದವರನ್ನು ಹಾಕಿಸಿಕೊಂಡು ಬಂದರೆ ಹೇಗೆ ಎಂದು ಪ್ರಶ್ನಿಸಿದರು.
ತಾಲೂಕಿನಲ್ಲಿ ಅರಣ್ಯ ಸಮಸ್ಯೆ ಬಗೆಹರಿಯುತ್ತಿಲ್ಲ ಎಂಬ ನೋವು ಜನಪ್ರತಿನಿಧಿಗಳು ಮತ್ತು ರೈತರಿಗಿದೆ.ಈ ಹಿನ್ನೆಲೆಯಲ್ಲಿ ಚರ್ಚೆಯಾಗದೆ ಅಧಿಕಾರಿಯನ್ನು ವರ್ಗಾವಣೆ ಮಾಡಿಸಿಕೊಂಡು ಬಂದರೆ ರೈತರನ್ನು, ಒತ್ತುವರಿದಾರರನ್ನು ಕಾಪಾಡುವವರು ಯಾರಿದ್ದಾರೆ ಎಂಬ ಬೇಜಾರು ನಮಗಿದೆ ಎಂದರು.
ಸಿ.ಟಿ.ರವಿ ಅವರ ಅಣತಿಯಂತೆ ಎಲ್ಲವೂ ನಡೆಯುತ್ತಿದೆ. ಯಾಕೆ ನಮ್ಮನ್ನು ಕೇಳದೆ ಈ ರೀತಿ ಮಾಡುತ್ತಿದ್ದಾರೆ ಎಂದು ತಿಳಿಯುತ್ತಿಲ್ಲ, ಅವರು ಉನ್ನತ ಹುದ್ದೆಯಲ್ಲಿದ್ದಾರೆ. ಉನ್ನತ ಹುದ್ದೆಯಲ್ಲಿದ್ದವರು ರಾಜಕೀಯದಲ್ಲಿ ಹಿರಿಯರು ಎಂಬ ಭಾವನೆ ಇದೆ. ಎಲ್ಲರನ್ನೂ ಒಂದೇ ರೀತಿ ಕೊಂಡೊಯ್ಯಬೇಕು. ಆದರೆ, ಸಿ.ಟಿ. ರವಿ ಅವರು ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಜಿಲ್ಲೆಯಲ್ಲಿ ಅಧಿಕಾರಿಗಳ ವರ್ಗಾವಣೆಯಾಗುತ್ತಿರುವುದು ಉಳಿದ ಶಾಸಕರ ಗಮನಕ್ಕೆ ಬರುವುದಿಲ್ಲ. ಬಂದ ಅಧಿಕಾರಿಗಳು ಸೌಜನ್ಯಕ್ಕೂ ಪರಿಚಯ ಮಾಡಿಕೊಳ್ಳುವುದಿಲ್ಲ. ದಾರಿಯಲ್ಲಿ ಸಿಕ್ಕಾಗ ಪರಿಚಯ ಮಾಡಿಕೊಳ್ಳುತ್ತಾರೆ. ಜಿಲ್ಲೆಯಲ್ಲಿ ಎಲ್ಲವೂ ಸಿ.ಟಿ.ರವಿ ಅವರ ಅಣತಿಯಂತೆ ನಡೆಯುತ್ತಿದೆ. ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಒಳ್ಳೆಯ ಅಧಿಕಾರಿಗಳು ಬರಬೇಕು ಎಂಬುದು ನಮ್ಮ ಆಸೆಯಾಗಿದೆ ಎಂದರು.
ಸಿ.ಟಿ.ರವಿ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಂತಹ ಉನ್ನತ ಹುದ್ದೆಯಲ್ಲಿದ್ದೇನೆ. ಎಲ್ಲವೂ ನಾನು ಹೇಳಿದಂತೆ ಆಗಬೇಕು ಎಂಬ ಮನಸ್ಥಿತಿ ಹೊಂದಿರಬೇಕು. ಇದೇ ರೀತಿ ಅವರ ವರ್ತನೆ ಮುಂದುವರಿದರೆ ಪಕ್ಷದ ರಾಷ್ಟ್ರೀಯ ನಾಯಕರು ಮತ್ತು ರಾಜ್ಯ ನಾಯಕರ ಗಮನಕ್ಕೆ ತರುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.