ಕೋವಿಡ್ ಪತ್ತೆಗೆ ಥರ್ಮಲ್ ಸ್ಕ್ಯಾನರ್
Team Udayavani, Apr 12, 2020, 6:02 PM IST
ಮೊಳಕಾಲ್ಮೂರು: ಎದ್ದುಲಬೊಮ್ಮಯ್ಯನಹಟ್ಟಿ ಚೆಕ್‌ಪೋಸ್ಟ್‌ಗೆ ತಹಶೀಲ್ದಾರ್ ಎಂ.ಬಸವರಾಜ್ ಭೇಟಿ ನೀಡಿ ಪರಿಶೀಲಿಸಿದರು.
ಮೊಳಕಾಲ್ಮೂರು: ತಾಲೂಕಿನ ಗಡಿ ಭಾಗದ ಚೆಕ್ ಪೋಸ್ಟ್ ಗಳಲ್ಲಿ ಕೋವಿಡ್ ವೈರಸ್‌ನ ಸೋಂಕಿತರನ್ನು ಪತ್ತೆ ಹಚ್ಚಲು ಥರ್ಮಲ್ ಸ್ಕ್ಯಾನರ್‌ನ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಹಶೀಲ್ದಾರ್ ಎಂ.ಬಸವರಾಜ್ ತಿಳಿಸಿದ್ದಾರೆ.
ಪಟ್ಟಣದ ಹೊರವಲಯದ ಗಡಿ ಭಾಗದಲ್ಲಿರುವ ಎದ್ದುಲಬೊಮ್ಮಯ್ಯನಹಟ್ಟಿ ಯ ಚೆಕ್‌ಪೋಸ್ಟ್ ನಲ್ಲಿ ಕೋವಿಡ್ ವೈರಸ್ ಅನ್ನು ಪತ್ತೆ ಹಚ್ಚುವ ಥರ್ಮಲ್ ಸ್ಕ್ಯಾನರ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು. ತಾಲೂಕಿನಲ್ಲಿನ ಎದ್ದುಲಬೊಮ್ಮಯ್ಯನಹಟ್ಟಿ ಮತ್ತು ತಮ್ಮೇನಹಳ್ಳಿ ಚೆಕ್ ಪೋಸ್ಟ್ ಗಳಲ್ಲಿ ತಾಲೂಕಿಗೆ ಒಳ ಬರುವವರಲ್ಲಿ ಕೋವಿಡ್ ವೈರಸ್ ಸೋಂಕು ಇರುವುದನ್ನು ಉಷ್ಣಾಂಶದ ಮೂಲಕ ಪತ್ತೆ ಹಚ್ಚಲು ಎರಡು ಥರ್ಮಲ್ ಸ್ಕ್ಯಾನರ್ ಗಳನ್ನು ನೀಡಲಾಗಿದೆ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯಾ ಧಿಕಾರಿಗಳು ಈ ಥರ್ಮಲ್ ಸ್ಕ್ಯಾನರ್ ಸೌಲಭ್ಯ ಕಲ್ಪಿಸಲಾಗಿದೆ. ಈ ಸ್ಕ್ಯಾನರ್ ನಿಂದ ಒಳ ಬರುವವರನ್ನು ಉಷ್ಣಾಂಶ ಪರಿಶೀಲಿಸಲು ಸಹಕಾರಿಯಾಗಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಿ.ಚಿದಾನಂದಪ್ಪ ಮಾತನಾಡಿ, ಥರ್ಮಲ್ ಸ್ಕ್ಯಾನರ್ ನಿಂದ ನಿಯೋಜನೆಗೊಂಡ ಅಧಿಕಾರಿ ಸಿಬ್ಬಂದಿಗಳಿಂದ ತಪಾಸಣೆ ಮಾಡಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. 38 ಡಿಗ್ರಿಸೆಲ್ಸಿಯಸ್ ಕ್ಕಿಂತಲೂ ಹೆಚ್ಚಿದ್ದಲ್ಲಿ ಅಂತವರನ್ನು ವಾಪಾಸ್ ಕಳುಹಿಸಲಾಗುವುದು, ಕಡಿಮೆ ಉಷ್ಣಾಂಶ ಇದ್ದಲ್ಲಿ ಸಾಮಾನ್ಯ ವೆಂದು ಪರಿಗಣಿಸಲಾಗುವುದು ಎಂದರು. ಪ್ರಭಾರಿ ತಾಲೂಕು ಆರೋಗ್ಯ ಅಧಿಕಾರಿ ಡಾ| ಪದ್ಮಾವತಿ , ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಶ್ರೀನಿವಾಸ್, ಕಂದಾಯ ನಿರೀಕ್ಷಕ ಉಮೇಶ್, ಗ್ರಾಮ ಲೆಕ್ಕಾಧಿಕಾರಿ ಮಾಲೇಕರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.