ಮಕ್ಕಳ ಆರೋಗ್ಯದತ್ತ ನಿಗಾ ವಹಿಸಿ
Team Udayavani, Oct 18, 2020, 7:58 PM IST
ಚಿಕ್ಕಮಗಳೂರು: ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ನಿಗಾ ವಹಿಸುವಂತೆ ಜಿಲ್ಲಾಡಳಿತಕ್ಕೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ| ಆರ್.ಜಿ. ಆನಂದ್ ಸೂಚಿಸಿದರು.
ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 18 ವರ್ಷದ ಒಳಗಿನ ಮಕ್ಕಳಲ್ಲಿ ಕೋವಿಡ್ ಸೋಂಕಿನ ಕುರಿತಾಗಿ ಜಿಲ್ಲೆಯಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ನಿಗಾ ವಹಿಸಿರುವ ಮಾಹಿತಿ ಪಡೆದು, ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಸಮತೋಲನ ಆಹಾರ ಸಿಗುವಂತೆ ನೋಡಿಕೊಳ್ಳ ಬೇಕು. ಮಾತೃಪೂರ್ಣ ಯೋಜನೆಯಡಿ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ನಿರ್ದಿಷ್ಟ ಅವಧಿಗೆ ಪೌಷ್ಟಿಕ ಆಹಾರ ವಿತರಣೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಗ್ರಾಮ ಪಂಚಾಯತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಮೂಲಕ ಜನಜಾಗೃತಿಮಾಡಬೇಕು. ಮನೆ- ಮನೆಗಳಿಗೆ ತೆರಳಿ ಕೋವಿಡ್-19 ವೈರಾಣು ತಪಾಸಣೆ ನಡೆಸಬೇಕು ಎಂದರು. ಜಿಲ್ಲೆಯಲ್ಲಿ 18 ವರ್ಷದೊಳಗಿನ 1,54,006 ಮಕ್ಕಳು ಶಿಕ್ಷಣ ಪಡೆಯುತ್ತಿದ್ದು, ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ವಿದ್ಯಾಗಮ ಯೋಜನೆ ಮತ್ತು ಆನ್‌ಲೈನ್ ಮೂಲಕ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ. ವಿದ್ಯಾಗಮ ಯೋಜನೆ ಪ್ರಾರಂಭದಿಂದ ಈವರೆಗೆ ಜಿಲ್ಲೆಯಲ್ಲಿ 16 ಮಕ್ಕಳಿಗೆ ಮಾತ್ರ ಕೋವಿಡ್ ಸೋಂಕು ದೃಢಪಟ್ಟಿದೆ. ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, ಮಕ್ಕಳು ಗುಣಮುಖರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿ ತಿಳಿಸಿದರು.
2019-20ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 41 ಬಾಲ್ಯವಿವಾಹ ನಡೆದಿದ್ದು 4 ಪ್ರಕರಣ ಪ್ರಕರಣ ದಾಖಲಾಗಿದೆ ಹಾಗೂ ಪ್ರಸ್ತುತ ಸಾಲಿನ ಏಪ್ರಿಲ್ ನಿಂದ ಸೆಪ್ಟೆಂಬರ್‌ವರೆಗೆ 55 ಬಾಲ್ಯವಿವಾಹ ಪ್ರಕರಣ ದಾಖಲಾಗಿವೆ. ಪೋಕ್ಸೋ ಕಾಯ್ದೆಗೆ ಸಂಬಂಧಿ ಸಿದಂತೆ 2019ರ ಜನವರಿಯಿಂದ 2020ರ ಸೆಪ್ಟಂಬರ್‌ವರೆಗೆ 108 ಪ್ರಕರಣ ವರದಿಯಾಗಿದ್ದು, 72 ಪ್ರಕರಣ ನ್ಯಾಯಾಲಯದವಿಚಾರಣೆ ಹಂತದಲ್ಲಿದ್ದು, 33 ಪ್ರಕರಣಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಭಾರ ಉಪ ನಿರ್ದೇಶಕ ಮಲ್ಲಿಕಾರ್ಜುನ್ ತಿಳಿಸಿದರು.
ನಗರದಲ್ಲಿ ಆಶಾಕಿರಣ ಮತ್ತು ಕಡೂರು ಪಟ್ಟಣದಲ್ಲಿ ನಿವೇ ತಾ ಅಂಧ ಮಕ್ಕಳ ಪೋಷಣಾ ಕೇಂದ್ರಗಳಿದ್ದು, ಎರಡು ಕೇಂದ್ರಗಳಲ್ಲಿ 200ಕ್ಕೂ ಹೆಚ್ಚು ಮಕ್ಕಳನ್ನು ಪೋಷಣೆ ಮಾಡಲಾಗುತ್ತಿದೆ. ಕೋವಿಡ್-19 ಕಾರಣದಿಂದಾಗಿ ಮಕ್ಕಳನ್ನುಪೋಷಕರ ಆಶ್ರಯಕ್ಕೆ ನೀಡಲಾಗಿದೆ. ಕೇಂದ್ರಗಳ ನಿರ್ವಹಣೆಗೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅನುದಾನ ನೀಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಿಂದ ಮಾಹಿತಿ ಪಡೆದರು.
ಕೋವಿಡ್ ಸೋಂಕು ತಡೆಗೆ ಜಿಲ್ಲಾಡಳಿತ ಈಗಾಗಲೇ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಜನತೆಯಲ್ಲಿ ಹೆಚ್ಚು ಜಾಗೃತಿ ಮೂಡಿಸಿ ಇದರ ನಿಯಂತ್ರಣಕ್ಕಾಗಿ ಜಿಲ್ಲಾಡಳಿತದೊಂದಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ವಿವಿಧ ಇಲಾಖಾಧಿಕಾರಿಗಳಿಗೆ ಹೇಳಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್, ಜಿಪಂ ಮುಖ್ಯ ಕಾರ್ಯ ನಿರ್ವಹಣಾಕಾರಿ ಎಸ್. ಪೂವಿತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಚ್. ಅಕ್ಷಯ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಉಮೇಶ್, ಜಿಲ್ಲಾ ಸರ್ಜನ್ ಡಾ| ಮೋಹನ್, ಜಿಲ್ಲಾ ಸರ್ವೇಕ್ಷಣಾಧಿ ಕಾರಿ ಡಾ| ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮುದ್ದಣ್ಣ, ಆರೋಗ್ಯಾಧಿಕಾರಿ ಡಾ| ಭರತ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.