ಮಾಸ್ಕ್ ಬಳಸುವುದರಿಂದ ಕೋವಿಡ್ ನಿಯಂತ್ರಣ ಸಾಧ್ಯ
Team Udayavani, Jun 20, 2020, 2:34 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮೂಡಿಗೆರೆ: ಕೋವಿಡ್-19 ಸೋಂಕಿನಿಂದ ಸುರಕ್ಷೆ ಹೊಂದಲು ಮಾಸ್ಕ್ ಮತ್ತು ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸುವುದರಿಂದ ಸೋಂಕಿನಿಂದ ತಪ್ಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ತಾಪಂ ಅಧ್ಯಕ್ಷ ಕೆ.ಸಿ. ರತನ್ ಹೇಳಿದರು.
ತಾಲೂಕು ಆಡಳಿತದಿಂದ ಮಾಸ್ಕ್ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಜಾಥಾ ಕಾರ್ಯಕ್ರಮಕ್ಕೆ ತಾಪಂ ಆವರಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯದಲ್ಲಿ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಾವಿನ ಸಂಖ್ಯೆ ಏರತೊಡಗಿದೆ. ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜತೆಗೆ ಸಭೆ ಸಮಾರಂಭದಿಂದ ದೂರವಿರಬೇಕು. ಪ್ರಾರ್ಥನಾ ಮಂದಿರ ತೆರೆಯಲು ಸರಕಾರ ಅನುಮತಿ ನೀಡಿದ್ದರೂ ಸುರಕ್ಷತಾ ದೃಷ್ಟಿಯಿಂದ ಪೂಜೆ, ಪ್ರಾರ್ಥನೆಯಿಂದ ಸಾಧ್ಯವಾದಷ್ಟು ದೂರವಿದ್ದು, ಮನೆಯಲ್ಲೇ ಪೂಜೆ ನೆರವೇರಿಸಿಕೊಳ್ಳಬೇಕು ಎಂದರು.
ತಾಪಂ ಉಪಾಧ್ಯಕ್ಷೆ ಪ್ರಮೀಳಾ, ಸದಸ್ಯರಾದ ಸುಂದರ್ ಕುಮಾರ್, ಭಾರತಿ ರವಿಂದ್ರ, ತಹಶೀಲ್ದಾರ್ ಎಚ್.ಎಂ. ರಮೇಶ್, ತಾಲೂಕು ಆರೋಗ್ಯಾಧಿಕಾರಿ ಡಾ| ಸುಂದರೇಶ್, ಪಪಂ ಮುಖ್ಯಾಧಿಕಾರಿ ಕೃಷ್ಣೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಹೇಮಂತರಾಜ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.