ಧರ್ಮಸ್ಥಳ ಯಾತ್ರಿಗಳಿಗೆಸಳೀಯರ ಸೇವೆ

ಪಾದಯಾತ್ರಿಗಳಿಗೆ ವಿಶ್ರಾಂತಿ ತಾಣ-ಅನ್ನಸಂತರ್ಪಣೆ ವ್ಯವಸ್ಥೆ

Team Udayavani, Feb 19, 2020, 3:18 PM IST

19-February-18

ಮೂಡಿಗೆರೆ: ಧರ್ಮಸ್ಥಳದಲ್ಲಿ ಶುಕ್ರವಾರದಂದು ನಡೆಯುವ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಸಾವಿರಾರು ಭಕ್ತರು ಪಾದಯಾತ್ರೆ ಕೈಗೊಂಡಿದ್ದು, ಈ ಯಾತ್ರಿಕರಿಗಾಗಿ ತಾಲೂಕಿನ ವಿವಿಧೆಡೆ ಸ್ಥಳೀಯರು ವಿಶ್ರಾಂತಿ ತಾಣ ಹಾಗೂ ಅನ್ನಸಂತರ್ಪಣೆ ಸೇವೆ ಕಲ್ಪಿಸುತ್ತಿದ್ದಾರೆ.

ಉತ್ತರ ಕರ್ನಾಟಕದ ಬಳ್ಳಾರಿ, ಗದಗ, ಹೊಸಪೇಟೆ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು, ಕೋಲಾರ, ತುಮಕೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಸ್ವಾಮಿ ದರ್ಶನಕ್ಕೆ ಭಕ್ತ ಸಾಗರ ಹರಿದು ಬರುತ್ತಿದ್ದು, ದಾರಿಯುದ್ದಕ್ಕೂ ಭಕ್ತರ ದಂಡು ಕಾಣಸಿಗುತ್ತಿದೆ.

ಧರ್ಮಸ್ಥಳಕ್ಕೆ ತೆರಳುವ ಮಾರ್ಗಮಧ್ಯೆ ಮೂಡಿಗೆರೆ ತಾಲೂಕು ಪ್ರವೇಶಿಸುವ ಯಾತ್ರಾರ್ಥಿಗಳಿಗೆ ಕಸ್ಕೇಬೈಲಿನಿಂದ ಕೊಟ್ಟಿಗೆಹಾರದವೆರೆಗೂ ಅಲ್ಲಲ್ಲಿ ವಿಶ್ರಾಂತಿ ತಾಣಗಳು, ಅನ್ನಸಂತರ್ಪಣೆ ಕೇಂದ್ರಗಳು, ಆರೋಗ್ಯ ತಪಾಸಣೆ ಕೇಂದ್ರಗಳನ್ನು ತೆರೆದು ಯಾತ್ರಾರ್ಥಿಗಳ ಯೋಗಕ್ಷೇಮ ವಿಚಾರಿಸಿಕೊಳ್ಳಲಾಗುತ್ತಿದೆ. ಸ್ಥಳೀಯ ಸ್ವಯಂಸೇವಕರು, ದಾನಿಗಳು ಯಾತ್ರಾರ್ಥಿಗಳಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಹಲವೆಡೆ ಉಚಿತ ಆರೋಗ್ಯ ತಪಾಸಣೆ ಕೇಂದ್ರಗಳನ್ನು ತೆರೆದು ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.

ಕಸ್ಕೆಬೈಲ್‌, ಹ್ಯಾಂಡ್‌ಪೋಸ್ಟ್‌, ಜನ್ನಾಪುರ ಗ್ರಾಮದಲ್ಲಿ ರಸ್ತೆ ಪಕ್ಕದಲ್ಲಿ ಉಚಿತವಾಗಿ ಪಾನಕ, ಮಜ್ಜಿಗೆ, ಕಾಫಿ, ಟೀ, ಹಾಲು ನೀಡಿ ಯಾತ್ರಾರ್ಥಿಗಳ ಸೇವೆ ಮಾಡಲಾಗುತ್ತಿದೆ. ಪಾದಯಾತ್ರಿಗಳಿಗಾಗಿ ದಾರಿಯುದ್ದಕ್ಕೂ ತಾತ್ಕಾಲಿಕ ಅಂಗಡಿಗಳನ್ನು ತೆರೆಯಲಾಗಿದ್ದು, ವ್ಯಾಪಾರದ ಭರಾಟೆ ಜೋರಾಗಿದೆ. ಸಂಜೆ ವೇಳೆಗೆ ಸುತ್ತಮುತ್ತಲ ಗ್ರಾಮಗಳಲ್ಲಿ ಉಳಿದುಕೊಳ್ಳುತ್ತಿರುವ ಪಾದಯಾತ್ರಿಗಳಿಗೆ ಸ್ಥಳೀಯರು ತಮ್ಮ ಮನೆಗಳ ಬಳಿ ಸ್ಥಳಾವಕಾಶ ಒದಗಿಸುತ್ತಿದ್ದು, ಊಟೋಪಚಾರ ಸೇರಿದಂತೆ, ಬಿಸಿ ನೀರಿನ ಸ್ನಾನಕ್ಕೆ ವ್ಯವಸ್ಥೆ ಮಾಡಿಕೊಡುತ್ತಿರುವುದು ಯಾತ್ರಾತ್ರಿಗಳ ಮನ ಗೆದ್ದಿದೆ.

ಬಿಳಗುಳದ ಗಜೇಂದ್ರ ಅವರು ತಮ್ಮ ಮನೆಯ ಬಳಿ ಯಾತ್ರಾರ್ಥಿಗಳಿಗೆ ಉಳಿದುಕೊಳ್ಳಲು ಹಾಗೂ ಭಜನೆ ಕಾರ್ಯಗಳನ್ನು ನಡೆಸಲು ವ್ಯವಸ್ಥೆ ಕಲ್ಪಿಸಿರುವುದು ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗಿದೆ. ಇತ್ತ ನೀರುಗಂಡಿಯ ಯೋಗೇಶ್‌ ಅವರ ಕಾಫಿ ಕ್ಯೂರಿಂಗ್‌ ಆವರಣದಲ್ಲಿ ಧರ್ಮಸ್ಥಳ ಯಾತ್ರಿಗಳ ಸಮಾಜ ಸೇವಾ ಸಂಘದ ವತಿಯಿಂದ ಬೃಹತ್‌ ಶಿಬಿರವನ್ನು ತೆರೆಯಲಾಗಿದೆ. ಶಿಬಿರದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ, ಸದ್ವಿದ್ಯಾ ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ಆಯುರ್ವೇದ ಚಿಕಿತ್ಸೆ, ಪಾದಯಾತ್ರಿಗಳಿಗೆ ಸ್ನಾನದ ವ್ಯವಸ್ಥೆ, ಅನ್ನಸಂತರ್ಪಣೆ, ಪಾದ ಮಜ್ಜನ ಸೇರಿದಂತೆ ಹತ್ತು ಹಲವು ಸೇವೆಗಳನ್ನು ನೀಡಲಾಗುತ್ತಿದೆ.

ಹೆಸಗಲ್‌, ಚಿನ್ನಿಗಾ, ಗೋಣಿಬೀಡು, ಬಿದಿರಹಳ್ಳಿ, ಬಾಳೂರು, ಕೂವೆ, ತರುವೆ, ಬಣಕಲ್‌ ಮುಂತಾದ ಗ್ರಾಮ ಪಂಚಾಯತಿಗಳಿಂದ ಯಾತ್ರಿಗಳಿಗೆ ದಾರಿಯುದ್ದಕ್ಕೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಯಲ್ಲಿ ಹೆದ್ದಾರಿಯುದ್ದಕ್ಕೂ ವಾಹನಗಳ ಸಂಖ್ಯೆ ಕೂಡ ಹೆಚ್ಚಳವಾಗಿದೆ. ಹಾಗಾಗಿ, ಪಾದಯಾತ್ರಿಗಳು ಎಚ್ಚರಿಕೆಯಿಂದ ಚಲಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಶಿವರಾತ್ರಿಗೆ ಇನ್ನು ಕೇವಲ 2 ದಿನಗಳು ಬಾಕಿ ಇದ್ದು, ಹೆಚ್ಚಿನ ಯಾತ್ರಿಕರ ಆಗಮನದ ನಿರೀಕ್ಷೆ ಇರುವುದರಿಂದ ತಾಲೂಕು ಆಡಳಿತ ಹಾಗೂ ಸ್ಥಳೀಯ ಸ್ವಯಂಸೇವಕರು ಸೇವೆಗೆ ಸಕಲ ರೀತಿಯಿಂದ ಸಜ್ಜಾಗಿದ್ದಾರೆ.

ಟಾಪ್ ನ್ಯೂಸ್

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

19-naxalite

Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್‌ ಟಿ20: ಆಸ್ಟ್ರೇಲಿಯ 3-0 ಜಯಭೇರಿ

T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್‌ ಟಿ20: ಆಸ್ಟ್ರೇಲಿಯ 3-0 ಜಯಭೇರಿ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.