ಆಸ್ಪತ್ರೆ ಗೇಟ್ ಬಂದ್: ರೋಗಿಗಳ ಪರದಾಟ
ನನೆಗುದಿಗೆ ಬಿದ್ದ ಮಹಾತ್ಮ ಗಾಂಧಿ ಸ್ಮಾರಕ ಆಸ್ಪತ್ರೆಯ ಒಳಾಂಗಣ ರಸ್ತೆ ಕಾಮಗಾರಿ ಆ್ಯಂಬುಲೆನ್ಸ್ ಚಾಲಕರಿಗೂಸಂಕಷ್ಟ
Team Udayavani, Mar 14, 2020, 2:37 PM IST
ಮೂಡಿಗೆರೆ: ಪಟ್ಟಣದ ಮಹಾತ್ಮ ಗಾಂಧಿ ಸ್ಮಾರಕ ಆಸ್ಪತ್ರೆಯ ರಸ್ತೆಯನ್ನು ಅಭಿವೃದ್ಧಿಪಡಿಸುವ ನೆಪದಲ್ಲಿ ಒಂದು ತಿಂಗಳಿನಿಂದ ಆಸ್ಪತ್ರೆ ಬಲಭಾಗದ ಗೇಟ್ ಮುಚ್ಚಿರುವುದರಿಂದ ಆಸ್ಪತ್ರೆಯ ಒಳಗೆ ಹೋಗಲು ರೋಗಿಗಳು ಪರದಾಡುವಂತಾಗಿದೆ.
ಹಲವಾರು ವರ್ಷಗಳಿಂದ ಎಂಜಿಎಂ ಆಸ್ಪತ್ರೆ ರಸ್ತೆ ಹಾಗೂ ಆಸ್ಪತ್ರೆ ಪ್ರಾಂಗಣದಲ್ಲಿರುವ ರಸ್ತೆಗಳನ್ನು ಅಭಿವೃದ್ಧಿಪಡಿಸುವಂತೆ ಒತ್ತಾಯ ಕೇಳಿಬಂದಿತ್ತು. ಇದರಿಂದ ಜಿಲ್ಲಾಡಳಿತ ಆಸ್ಪತ್ರೆಗೆ ಸಾಗುವ ಹಾಗೂ ಒಳಾಂಗಣದ ರಸ್ತೆಗಳನ್ನು ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡುವಂತೆ ಅನುದಾನ ಬಿಡುಗಡೆಗೊಳಿಸಿತ್ತು. ಈ ಕಾರಣಕ್ಕಾಗಿ ಇಲ್ಲಿಗೆ ಒಂದು ತಿಂಗಳಿಗೆ ಸರಿಯಾಗಿ ಕೆಲಸ ಪ್ರಾರಂಭಿಸುವ ಉದ್ದೇಶದಿಂದ ಆಸ್ಪತ್ರೆಯ ಬಲಭಾಗದ ಗೇಟ್ ಮುಚ್ಚಲಾಗಿದೆ.
ಎಡಭಾಗದ ಗೇಟ್‌ನಲ್ಲಿ ಮಾತ್ರ ಓಡಾಟಕ್ಕೆ ಅನುಕೂಲ ಕಲ್ಪಿಸಲಾಗಿದೆ. ಆದರೆ, ಕೆಲಸ ಪ್ರಾರಂಭವಾಗಿ ಒಂದು ತಿಂಗಳು ಕಳೆದರೂ ಕಾಮಗಾರಿ ಮಾತ್ರ ಅನಿಷ್ಠಾನಕ್ಕೆ ಬಾರದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಬಗ್ಗೆ ಮಾತನಾಡಿದ ವೃದ್ಧೆ ಸುಶೀಲಮ್ಮ ಅವರು, ವಾರಕ್ಕೆ ಎರಡು ಬಾರಿ ಆಸ್ಪತ್ರೆಗೆ ಬಂದು ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು. ಇದೀಗ ಆಸ್ಪತ್ರೆಯ ಒಂದು ಗೇಟ್ ಮುಚ್ಚಲಾಗಿದೆ. ಕಾಂಪೌಂಡ್ ಮಧ್ಯಭಾಗದಲ್ಲಿ ಪಾದಚಾರಿಗಳಿಗೆ ಗೇಟ್ ಅಳವಡಿಸಲಾಗಿದೆಯಾದರೂ ಮೆಟ್ಟಿಲು ಹತ್ತಿ ಒಳಗೆ ಸಾಗಬೇಕು. ಇಲ್ಲವಾದಲ್ಲಿ ಬಳಸಿಕೊಂಡು ಎಡಭಾಗದ ಗೇಟಿನಲ್ಲಿ ಹೋಗಬೇಕು. ನಡೆದಾಡಲೂ ಕಷ್ಟಕರವಾಗಿರುವ ನನಗೆ ಬಳಸಿಕೊಂಡು ಆಸ್ಪತ್ರೆಗೆ ಹೋಗಲು ಕಷ್ಟವಾಗುತ್ತಿದೆ.
ಕೂಡಲೇ ರಸ್ತೆ ಕಾಮಗಾರಿ ಮುಗಿಸಿ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಅಳಲು ತೋಡಿಕೊಂಡರು. ಹೆಸರು ಹೇಳಲಿಚ್ಛಿಸದ ಆ್ಯಂಬುಲೆನ್ಸ್ ಚಾಲಕರೊಬ್ಬರು ಮಾತನಾಡಿ, ಹಲವು ಬಾರಿ ತುರ್ತಾಗಿ ವಾಹನ ಚಲಾಯಿಸಬೇಕಾದ ಅನಿವಾರ್ಯತೆ ಇರುತ್ತದೆ. ಗೇಟ್ ಮುಚ್ಚಿರುವ ಬಗ್ಗೆ ಅರಿವು ಇಲ್ಲದೆ ಏಕಾಏಕಿ ಆಸ್ಪತ್ರೆ ಬಲಭಾಗದ ಗೇಟ್ ಬಳಿ ವಾಹನ ಚಲಾಯಿಸಿ ಮುಜುಗರಕ್ಕೆ ಒಳಗಾಗಿದ್ದೇವೆ. ಕಾಮಗಾರಿ ಮಾಡುತ್ತಿರುವ ಬಗ್ಗೆ ಯಾವುದೇ ಸೂಚನಾ ಫಲಕಗಳನ್ನು ಅಳವಡಿಸದೇ ಇರುವುದು ಸಮಸ್ಯೆಗೆ ಕಾರಣವಾಗಿದೆ ಎಂದರು.
ಅಲ್ಲದೇ, ತಾಲೂಕು ಆಸ್ಪತ್ರೆ ಎಂದರೆ ಬಹಳ ಪ್ರಾಮುಖ್ಯತೆ ಇರುತ್ತದೆ. ಪ್ರತಿನಿತ್ಯ ಸಾವಿರಾರು ರೋಗಿಗಳು ಬಂದು ಹೋಗುವ ಸ್ಥಳವಾಗಿದೆ. ಕಾಮಗಾರಿ ಬೇಗ ಮುಕ್ತಾಯಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿತ್ತು. ತುರ್ತು ಸಂದರ್ಭಗಳಲ್ಲಿ ಒಂದೊಂದು ನಿಮಿಷ ಸಹ ಗಣನೆಗೆ ಬರುತ್ತದೆ. ಮತ್ತೂಂದು ಗೇಟ್ ಬಳಸಿಕೊಂಡು ಸಾಗಲು ಸಮಯ ವ್ಯರ್ಥವಾಗುವುದರಿಂದ ತೊಂದರೆ ಹೆಚ್ಚು ಎಂದು ಅಭಿಪ್ರಾಯಪಟ್ಟರು.
ಸರ್ಕಾರದ ಕೆಲಸ ದೇವರ ಕೆಲಸ ಎಂಬ ಮಾತನ್ನು ತಪ್ಪಾಗಿ ಅರ್ಥೈಸಿಕೊಂಡು ಸರ್ಕಾರದ ಕೆಲಸವನ್ನು ದೇವರೇ ಬಂದು ಮಾಡಿಕೊಳ್ಳಲಿ ಎಂಬಂತೆ ಇಲ್ಲಿ ಕೆಲಸದ ಕುರಿತು ಅಸಡ್ಡೆ ಪ್ರದರ್ಶನ ಮಾಡಲಾಗುತ್ತಿದೆ. ರಸ್ತೆ ಕಾಮಗಾರಿ ಕೈಗೆತ್ತಿಕೊಂಡಿರುವುದು ಒಳ್ಳೆಯ ಕಾರ್ಯ. ಆದರೆ, ಸಾರ್ವಜನಿಕರ, ವೃದ್ಧರ, ಮಹಿಳೆಯರ, ಮಕ್ಕಳ ಹಾಗೂ ರೋಗಿಗಳ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ನಿಗದಿತ ಸಮಯಕ್ಕಿಂತ ಬೇಗ ಕಾಮಗಾರಿ ಮುಗಿಸಿದ್ದರೆ ಎಲ್ಲರಿಗೂ ಅನುಕೂಲವಾಗುತ್ತಿತ್ತು. ಆದರೆ, ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯತನ ಖಂಡನೀಯ ಎಂದು ಕಾಂಗ್ರೆಸ್ ವಕ್ತಾರ ಎಂ.ಎಸ್.ಅನಂತ್ ಅವರು ಆರೋಪ ವ್ಯಕ್ತಪಡಿಸಿದರು.
ಆರೋಪ- ಪ್ರತ್ಯಾರೋಪಗಳು ಏನೇ ಇದ್ದರೂ ಕಾಮಗಾರಿಯ ನಿಧಾನಗತಿಯಿಂದಾಗಿ ಸಾರ್ವಜನಿಕರು ಪ್ರತಿನಿತ್ಯ ಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಸದಾ ಜನನಿಬಿಡತೆಯಿಂದ ಕೂಡಿರುವ ತಾಲೂಕು ಆಸ್ಪತ್ರೆ ಇಂತಹದ್ದೊಂದು ನಿರ್ಲಕ್ಷ್ಯತೆಯ ಕಾರಣದಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿ ಗುರುತಿಸಿಕೊಳ್ಳುತ್ತಿರುವುದು ಸಾರ್ವಜನಿಕರಲ್ಲಿ ಬೇಸರ ಮೂಡಿಸಿದೆ.
ಸುಧೀರ್ ಮೊದಲಮನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.