ಮುಂದಿನ ದಿನಗಳಲ್ಲಿ ನಮ್ಮಂತವರು ಚುನಾವಣೆ ಎದುರಿಸುವುದು ತುಂಬಾ ಕಷ್ಟ : ಮೋಟಮ್ಮ
Team Udayavani, Jun 15, 2022, 6:44 PM IST
ಚಿಕ್ಕಮಗಳೂರು : ಕಳೆದ ಚುನಾವಣೆಯಲ್ಲಿ ನಾನು ಸಾಕಷ್ಟು ನೊಂದಿದ್ದೇನೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಚಿವೆ ಮೋಟಮ್ಮ ಪಕ್ಷದ ನಾಯಕರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಮೋಟಮ್ಮ ಚುನಾವಣೆ ಎನ್ನುವುದು ನಮ್ಮ ಪಾಲಿಗೆ ದುಸ್ತರವಾಗಿದೆ, ಮುಂದಿನ ದಿನಗಳಲ್ಲಿ ನಮ್ಮಂತವರು ಚುನಾವಣೆ ಎದುರಿಸುವುದು ತುಂಬಾ ಕಷ್ಟದ ಸಂಗತಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು ಕಳೆದ ಬಾರಿಯ ಚುನಾವಣೆಯಲ್ಲೇ ನಾನು ಸಾಕಷ್ಟು ನೊಂದಿದ್ದೇನೆ ಅಲ್ಲದೆ ಚುನಾವಣೆ ವೆಚ್ಚ ಭರಿಸಲು ನನ್ನ ಮನೆಯನ್ನೇ ಭೋಗ್ಯಕ್ಕೆ ನೀಡಿ ನಾನು ಬಾಡಿಗೆ ಮನೆಯೊಂದರಲ್ಲಿ ಜೀವನ ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ.
ನನ್ನ ಜೀವನದಲ್ಲಿ ಇದುವರೆಗೆ ಎಂಟು ಚುನಾವಣೆಗಳನ್ನು ಎದುರಿಸಿದ್ದೇನೆ ಆದರೆ ೨೦೧೮ ರಲ್ಲಿ ನಡೆದ ಚುನಾವಣೆ ನನ್ನ ಜೀವಮಾನದಲ್ಲಿ ನೋಡಲಿಲ್ಲ ಎಂದು ಆಡಳಿತ ಪಕ್ಷದ ನಾಯಕರ ವಿರುದ್ಧ ಬೇಸರವನ್ನು ತೋಡಿಕೊಂಡಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ಎರಡು ರೋಡ್ ಶೋಗಳಲ್ಲಿ ಪ್ರಧಾನಿ ಭಾಗಿ ಸಾಧ್ಯತೆ; ಅಗತ್ಯ ಸಿದ್ಧತೆ
ಮುಂದಿನ ದಿನಗಳಲ್ಲಿ ನನ್ನ ಮಗಳಿಗೆ ಟಿಕೆಟ್ ಕೊಡಿಸುವ ಪ್ರಯತ್ನ ನಡೆಸುವುದಾಗಿ ತಿಳಿಸಿದ ಅವರು ಬಿಜೆಪಿಯವರ ಕೈ-ಬಾಯಿ ಸರಿ ಇಲ್ಲ ಎಂದು ಗೊತ್ತಾದ ಮೇಲೆ ಮತ್ತೆ ಅವರ ಸ್ನೇಹ ಬೆಳೆಸುವುದು ಸರಿಯಲ್ಲ ಹಾಗಂತ ಅಲ್ಲಿ ಮೇವು ಸಿಗುತ್ತೆ ಅಂತ ನಮ್ಮ ಪಕ್ಷದವರೇ ಕೆಲವರು ಬಿಜೆಪಿ ಸೇರಿದ್ದಾರೆ ಎಂದರು. ಕುಮಾರಸ್ವಾಮಿಗೆ ಟಿಕೆಟ್ ಕೊಡುವ ಬದಲು ಕಾಂಗ್ರೆಸ್ ನ ಬೂತ್ ಕಾರ್ಯಕರ್ತನಿಗೆ ನೀಡಲಿ ಎಂದರು, ಸಿದ್ದರಾಮಯ್ಯ ಹಿಂದೆ ನಾನೂ ಇದ್ದೇ ಅವರ ಎಲ್ಲ ಕಾರ್ಯಗಳಿಗೆ ಬೆನ್ನೆಲುಬಾಗಿ ನಿಂತಿದ್ದೆ ಆದರೆ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಾಗ ನನ್ನನ್ನ ಕಡೆಗಣಿಸಿದರು, ಆ ವೇಳೆ ಮಹಿಳಾ ಕೋಟದಲ್ಲಿ ನನಗೆ ಸಚಿವ ಸ್ಥಾನ ನೀಡಬಹುದಿತ್ತು.. ಆದರೆ ಸಿದ್ದರಾಮಯ್ಯ ಸಂತೆಯಲ್ಲಿ ಮೆಂತೆ ಕದ್ದವರೆಂದು ನನ್ನ ಆತ್ಮಕಥೆಯಲ್ಲಿ ಬರೆದಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.