MUDA Scam Case ಸಿಎಂ ಸಿದ್ದು ವಿರುದ್ಧ ಸುಳ್ಳು ಆರೋಪ: ಜಾರ್ಜ್
Team Udayavani, Jul 30, 2024, 12:39 AM IST
ಚಿಕ್ಕಮಗಳೂರು: ಮುಡಾದಲ್ಲಿ ನಿವೇಶನ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡಿರುವ ಪ್ರತಿಪಕ್ಷಗಳು, ಮುಖ್ಯಮಂತ್ರಿಯವರು ಪತ್ರಿಕಾಗೋಷ್ಠಿಯಲ್ಲಿ ದಾಖಲೆ ಸಹಿತ ಸ್ಪಷ್ಟನೆ ನೀಡಿದ್ದರೂ ಸುಳ್ಳನ್ನು ಸತ್ಯ ಮಾಡುವ ಪ್ರಯತ್ನ ನಡೆಸುತ್ತಿವೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಆರೋಪಿಸಿದರು.
ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಪತ್ನಿಗೆ 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡಿರುವುದು ಅಕ್ರಮ ಎಂಬುದು ಪ್ರತಿಪಕ್ಷದವರ ಆರೋಪ. ಆದರೆ, 50:50 ಅನುಪಾತದಲ್ಲಿ ಹಂಚಿಕೆ ಮಾಡುವ ನಿರ್ಧಾರ ಕೈಗೊಂಡಿದ್ದು ಯಾರು? ಬಿಜೆಪಿ ಸರ್ಕಾರವಲ್ಲವೇ? ಈಗ ಅವರು ಮುಖ್ಯಮಂತ್ರಿಗಳ ವಿರುದ್ಧವೇ ಆರೋಪ ಮಾಡುತ್ತಿದ್ದಾರೆ.
ಈ ಆರೋಪದಲ್ಲಿ ಸತ್ಯಾಂಶವೇ ಇಲ್ಲ. ವಾಲ್ಮೀಕಿ ನಿಗಮ ಹಗರಣ ಕುರಿತು ಸದನದಲ್ಲಿ ಚರ್ಚಿಸಿದ ಪ್ರತಿಪಕ್ಷದವರು ಸರ್ಕಾರ, ಮುಖ್ಯಮಂತ್ರಿಗಳ ವಿರುದ್ಧ ಸಲ್ಲದ ಆರೋಪಗಳನ್ನು ಮಾಡಿದರು. ಬಳಿಕ ಉತ್ತರಕ್ಕೂ ಅವಕಾಶ ನೀಡದೆ ರಾಜಕಾರಣ ಮಾಡಿದರು. ಇಂತಹ ವಿಚಾರಗಳಲ್ಲಿ ಮಾಧ್ಯಮಗಳು ಸತ್ಯ ಸಂಗತಿಯನ್ನು ಬೆಳಕಿಗೆ ತರಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.