ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್ ಹೆಗ್ಡೆ
ಸುಪ್ರೀಂ ಕೋರ್ಟ್ ಬಯಲಿಗೆಳೆದಿರುವುದು ದೇಶಕ್ಕೆ ತಿಳಿದಿದೆ ಎಂದರು.
Team Udayavani, Apr 16, 2024, 4:32 PM IST
ಉದಯವಾಣಿ ಸಮಾಚಾರ
ಮೂಡಿಗೆರೆ: 10 ವರ್ಷದಿಂದ ನೆಮ್ಮದಿ ಕಳೆದುಕೊಂಡ ಜನರು ತಕ್ಕ ಉತ್ತರ ನೀಡಲು ಸಿದ್ಧರಾಗಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.
ತಾಲೂಕಿನ ಬಣಕಲ್, ಕಸಬಾ, ಗೋಣಿ ಬೀಡು, ಬಾಳೂರು ಹೋಬಳಿ ವ್ಯಾಪ್ತಿ ಯಲ್ಲಿ ಏರ್ಪಡಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಭ್ರಷ್ಟಾಚಾರ ರಹಿತ ಆಡಳಿತದ ನಡೆಸುತ್ತಿದ್ದೇವೆ ಎಂದು ಜನರನ್ನು ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ. ಚುನಾವಣೆ ಬಾಂಡ್ ಹಗರಣದಿಂದ ಇವರ ಭ್ರಷ್ಟಾಚಾರದ ಬಗ್ಗೆ ಸುಪ್ರೀಂ ಕೋರ್ಟ್ ಬಯಲಿಗೆಳೆದಿ
ರುವುದು ದೇಶಕ್ಕೆ ತಿಳಿದಿದೆ ಎಂದರು.
ನಾನು ಸಂಸದನಾಗಿ ದ್ದಾಗ ಕಡೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಅನುಮೋದನೆಯಾಗಿತ್ತು. ಆದರೆ 10 ವರ್ಷ ಕಳೆದರೂ ರಸ್ತೆ ಅಗಲೀಕರಣ ಮಾಡಲು ಬಿಜೆಪಿಯವರಿಗೆ ಸಾಧ್ಯವಾಗಿಲ್ಲ. ಅಲ್ಲದೆ ಹಿಂದಿನ ಸಂಸದೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಮಂತ್ರಿ ಕೂಡ ಆಗಿದ್ದರು. ಆದರೆ ಇಲ್ಲಿನ ಕಾಫಿ ಬೆಳೆಗಾರರ ಸಮಸ್ಯೆ, ಅಡಕೆ ರೋಗ ನಿವಾರಣೆ ಸೇರಿದಂತೆ ರೈತರ
ಹಾಗೂ ಜನರ ಸಮಸ್ಯೆ ನಿವಾರಿಸಲಿಲ್ಲ.
ಪೆಟ್ರೋಲ್ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನ ನೆಮ್ಮದಿಯಿಂದ ಬದುಕದಂತೆ ಮಾಡಿದ್ದಾರೆ. ಯಾವುದೇ ಅಭಿವೃದ್ಧಿ ಹಾಗೂ ಜನಪರ ಯೋಜನೆ ರೂಪಿಸದೆ ಕೇವಲ ಮೋದಿ ಹೆಸರು ಹೇಳಿಕೊಂಡು ಪುನಃ ಮತ ಕೇಳಿದರೆ ಜನ ಬೆಂಬಲಿಸುತ್ತಾರೆಂಬ ಭ್ರಮೆಯಲ್ಲಿ ಬಿಜೆಪಿಯವರಿದ್ದಾರೆಂದು ದೂರಿದರು.
ಶಾಸಕಿ ನಯನಾ ಮೋಟಮ್ಮ ಮಾತನಾಡಿ, ರಾಜ್ಯ ಸರಕಾರ ನೀಡಿರುವ 5 ಗ್ಯಾರಂಟಿಯಿಂದ ಜನರಿಗೆ ಅನುಕೂಲ ವಾಗಿದೆ. ಅಲ್ಲದೆ ನಮ್ಮ ಅಭ್ಯರ್ಥಿ ಜಯ ಪ್ರಕಾಶ್ ಹೆಗ್ಡೆ ಅವರು ಹಿಂದೆ 20 ತಿಂಗಳು ಸಂಸದರಾಗಿದ್ದಾಗ ಅನೇಕ ಜನಪರ ಕೆಲಸ ಮಾಡಿದ್ದಾರೆ. ಇದರಿಂದಜನರ ಬಳಿ ತೆರಳಿ ಮತ ಕೇಳುವ ಧೈರ್ಯ ನಮಗಿದೆ. ಆದರೆ ಕಳೆದ 10 ವರ್ಷದಲ್ಲಿ ಕೇಂದ್ರದ ಬಿಜೆಪಿ ಸರಕಾರದ ದುರಾಡಳಿತ ಹಾಗೂ ಹಿಂದಿನ ಸಂಸದೆ ಶೋಭಾ ಕರಂದ್ಲಾಜೆ ಅವರ ಅಭಿವೃದ್ಧಿ ಕಾರ್ಯ ಶೂನ್ಯವೆಂದು ಅವರದೇ ಪಕ್ಷದವರು
ಗೋ ಬ್ಯಾಕ್ ಶೋಭಾ ಎಂದು ಇಲ್ಲಿಂದ ಓಡಿಸಿದ್ದಾರೆ. ಇದರಿಂದ ಬಿಜೆಪಿಯವರಿಗೆ ಜನರ ಬಳಿ ಹೋಗಿ ಮತ ಕೇಳಲು
ಅಂಜಿಕೆ ಉಂಟಾಗಿದೆ ಎಂದರು.
ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಜಿ. ಸುರೇಂದ್ರ, ಪಪಂ ಸದಸ್ಯ ಕೆ.ವೆಂಕಟೇಶ್, ಸಿ.ಬಿ.ಶಂಕರ್, ಸಿ.ಕೆ. ಇಬ್ರಾಹಿಂ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ
KFD; ಮಲೆನಾಡು ಭಾಗದಲ್ಲಿ ಎರಡನೇ ಪ್ರಕರಣ ಪತ್ತೆ: ಜನತೆಯಲ್ಲಿ ಆತಂಕ
Kottigehara: ಯುವ ಕೃಷಿಕನಿಗೆ ಹೃದಯಾಘಾತ… ಆಸ್ಪತ್ರೆ ದಾರಿಯಲ್ಲೇ ಕೊನೆಯುಸಿರು
Chikkamagaluru: ಎರಡು ದಿನದ ಮಗುವನ್ನು ಕಾಫಿ ತೋಟದಲ್ಲಿ ಬಿಟ್ಟುಹೋದ ತಾಯಿ
ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ
MUST WATCH
ಹೊಸ ಸೇರ್ಪಡೆ
ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.