ಕೋವಿಡ್ ವಿಚಾರದಲ್ಲಿ ಜಾಗೃತಿ ವಹಿಸಿ: ಬಗಾದಿ ಗೌತಮ್‌


Team Udayavani, May 20, 2020, 4:47 PM IST

20-April-18

ಸಾಂದರ್ಭಿಕ ಚಿತ್ರ

ಮೂಡಿಗೆರೆ: ಕೋವಿಡ್ ವಿಚಾರವಾಗಿ ಜನ ಆತಂಕಕ್ಕೊಳಗಾಗದೆ ಜಾಗ್ರತೆಯಿಂದ ವ್ಯವಹರಿಸುವಂತೆ ಜಿಲ್ಲಾಧಿಕಾರಿ ಬಗಾದಿ ಗೌತಮ್‌ ಮನವಿ ಮಾಡಿದರು.

ಪಟ್ಟಣದ ನಂದೀಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಜಿಲ್ಲಾಧಿಕಾರಿಗಳು ನಂತರ ಸುದ್ದಿಗಾರರೊಂದಿಗೆ ಮಾತನಾಡಿ, 2 ತಿಂಗಳಿನಿಂದ ಎಲ್ಲರೂ ಒಗ್ಗಟ್ಟಾಗಿ  ಕೋವಿಡ್ ವಿರುದ್ದ ಹೋರಾಟ ನಡೆಸಿ ಜಿಲ್ಲೆಯನ್ನು ಗ್ರೀನ್‌ ಜೋನ್‌ನಲ್ಲಿ ಇರುವಂತೆ ನೋಡಿಕೊಂಡಿದ್ದೆವು. ದುರದೃಷ್ಟವಶಾತ್‌ ಇದೀಗ ಕೋವಿಡ್ ಸೋಂಕು ದೃಢಪಟ್ಟಿದೆ. ಅದರಲ್ಲೂ ವೈದ್ಯರೊಬ್ಬರಿಗೆ ಸೋಂಕು ತಗುಲಿರುವುದು ಹೆಚ್ಚಿನ ಆತಂಕ ಉಂಟು ಮಾಡುತ್ತದೆ. ಆದರೆ ಸಾರ್ವಜನಿಕರು ಹೆದರಬೇಕಿಲ್ಲ. ಜಿಲ್ಲಾಡಳಿತ ಈ ಬಗ್ಗೆ ಎಚ್ಚರಿಕೆಯ ಕ್ರಮ ಕೈಗೊಂಡಿದೆ. ಮೊದಲಿಗಿಂತಲೂ ಈಗ ನಾವೆಲ್ಲರೂ ಹೆಚ್ಚಿನ ಜವಾಬ್ದಾರಿ ವಹಿಸಿಕೊಳ್ಳುವ ಅಗತ್ಯ ಇದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡಲ್ಲಿ  ಕೋವಿಡ್ ಸೋಂಕಿನ ವಿರುದ್ಧದ ಹೋರಾಟ ಯಶಸ್ವಿಗೊಳಿಸಬಹುದು ಎಂದರು.

ಸೊಂಕಿತರ ಟ್ರಾವೆಲ್‌ ಹಿಸ್ಟರಿಯನ್ನು ಪಡೆದುಕೊಳ್ಳಲಾಗಿದೆ. ಅವರ ಜೊತೆ ಸಂಪರ್ಕದಲ್ಲಿ ಇರುವ ಎಲ್ಲಾ ವ್ಯಕ್ತಿಗಳನ್ನು ಪರಿಶೀಲನೆಗೆ ಒಳಪಡಿಸಲಾಗುವುದು. ಸದ್ಯ ಈಗ ನಂದೀಪುರ ಗ್ರಾಮ ಹಾಗು ವೈದ್ಯರು ವಾಸವಾಗಿರುವ ಬಿಳಗುಳದ ಸುಶಾಂತ್‌ ನಗರವನ್ನು ಸೀಲ್‌ಡೌನ್‌ ಮಾಡಲಾಗಿದ್ದು ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಯಾರೂ ಆತಂಕಪಡಬೇಕಾಗಿಲ್ಲ ಎಂದರು.
ಕೋವಿಡ್  ಸೋಂಕು ಇದೆ ಎನ್ನುವ ವಿಚಾರ ತಿಳಿಯುತ್ತಿದ್ದಂತೆ ಪೊಲೀಸ್‌ ಇಲಾಖೆ ಪಟ್ಟಣದಾದ್ಯಂತ ಬಿಗಿ ಬಂದೋಬಸ್ತ್ ಮಾಡಿದ್ದು ಬ್ಯಾರಿಕೇಡ್‌ಗಳನ್ನು ಹಾಕಿ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಇತ್ತ ಸಾರ್ವಜನಿಕ ವಲಯದಲ್ಲಿ ಈ ವಿಚಾರ ವ್ಯಾಪಕ ಚರ್ಚೆಗೆ ಒಳಗಾಗಿದೆ.

ಟಾಪ್ ನ್ಯೂಸ್

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.