ಶೌಚಾಲಯವಿದೆ ಬಳಕೆಯೇ ಆಗ್ತಿಲ್ಲ!

ಕಟ್ಟಡ ಬೀಗ ತೆರೆದು ದುರಸ್ತಿಗೊಳಿಸಿ ಮರುಬಳಕೆಗೆ ನೀಡಲು ಸಾರ್ವಜನಿಕರ ಮನವಿ

Team Udayavani, Feb 10, 2020, 12:58 PM IST

10-February-10

ಮೂಡಿಗೆರೆ: ಸರ್ಕಾರವು ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಸ್ವಚ್ಛ ಭಾರತ್‌, ನಿರ್ಮಲ ಭಾರತ್‌ ಅಭಿಯಾನ ಸೇರಿದಂತೆ ನಾನಾ ಯೋಜನೆಗಳ ಮೂಲಕ ಶೌಚಾಲಯಗಳ ಮಹತ್ವ ಸಾರುವ ಮೂಲಕ ಸಾರ್ವಜನಿಕರಿಗೆ ಸ್ವತ್ಛತೆಯ ಬಗ್ಗೆ ಅರಿವು ಮೂಡಿಸುತ್ತಿರುವ ಇಂದಿನ ದಿನಗಳಲ್ಲಿ ಪಟ್ಟಣದ ಪೊಲೀಸ್‌ ಸ್ಟೇಷನ್‌ ಎದುರಿನಲ್ಲಿರುವ ಸಾರ್ವಜನಿಕ ಶೌಚಾಲಯಕ್ಕೆ ಬೀಗ ಹಾಕಿರುವುದು ಸಾರ್ವಜನಿಕರ ಆಕ್ಷೇಪಕ್ಕೆ ಕಾರಣವಾಗಿದೆ.

ದಶಕದ ಹಿಂದೆ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಪಟ್ಟಣ ಪಂಚಾಯತಿ ವತಿಯಿಂದ ಸಾರ್ವಜನಿಕ ಶೌಚಾಲಯವನ್ನು ನಿರ್ಮಿಸಿ ಸಾರ್ವಜನಿಕರ ಬಳಕೆಗೆ ಅನುವು ಮಾಡಿಕೊಡಲಾಗಿತ್ತು. ಈ ಕಾರ್ಯವು ಅಂದಿನ ದಿನಗಳಲ್ಲಿ ಸಾರ್ವಜನಿಕರ ಪ್ರಶಂಸೆಗೆ ಕೂಡ ಕಾರಣವಾಗಿತ್ತು. ಆದರೆ ದಿನ ಕಳೆದಂತೆ ಸೂಕ್ತ ನಿರ್ವಹಣೆಯ ಕೊರತೆಯಿಂದಾಗಿ ಶೌಚಾಲಯವು 7 ವರ್ಷಗಳಿಂದ ಮುಚ್ಚಲ್ಪಟ್ಟಿದ್ದು, ಸಾರ್ವಜನಿಕರು ತಮ್ಮ ಶೌಚ ಕಾರ್ಯಗಳನ್ನು ತೀರಿಕೊಳ್ಳಲು ಖಾಲಿ ಜಾಗ ಹುಡುಕಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ.

ಶೌಚಾಲಯ ನಿರ್ಮಾಣ ಮಾಡಿರುವ ಸ್ಥಳವು ಪಟ್ಟಣದ ಮುಖ್ಯ ವಾಣಿಜ್ಯ ಕೇಂದ್ರದಲ್ಲಿದ್ದು, ಪಿ.ಡಬ್ಲ್ಯು.ಡಿ ಇಲಾಖೆ, ತಾಲೂಕು ಕಚೇರಿ, ಶಾಸಕರ ಕಚೇರಿ, ಪೊಲೀಸ್‌ ಠಾಣೆ, ಎಲ್‌ಐಸಿ ಕಚೇರಿ, ವ್ಯವಸಾಯ ಸಹಕಾರಿ ಸಂಘ, ಬ್ಯಾಂಕುಗಳು ಸೇರಿದಂತೆ ಹಲವು ವಾಣಿಜ್ಯ ವ್ಯಾಪಾರದ ಜನನಿಬಿಡ ಸ್ಥಳವಾಗಿದೆ. ಸದಾ ಚಟುವಟಿಕೆಯಿಂದ ಕೂಡಿರುವ ಇಂತಹ ಸ್ಥಳದಲ್ಲಿ ಸಾರ್ವಜನಿಕರು ತಮ್ಮ ಶೌಚ ಕಾರ್ಯಗಳನ್ನು ಪೂರೈಸಲು ಪರದಾಡುತ್ತಿದ್ದರು.

ಇಂತಹ ಆಯಕಟ್ಟಿನ ಜಾಗದಲ್ಲಿ ಸಾರ್ವಜನಿಕ ಶೌಚಾಲಯದ ನಿರ್ಮಾಣದ ಒತ್ತಡ ಕೇಳಿ ಬಂದಿದ್ದರಿಂದ ಶೌಚಾಲಯದ ನಿರ್ಮಾಣ ಕಾರ್ಯ ಕೂಡ ಆಗಿತ್ತು. ಆದರೆ ಪಪಂ ಜನಪ್ರತಿನಿಧಿಗಳು ಹಾಗೂ ಅಧಿ ಕಾರಿಗಳ ನಿರ್ಲಕ್ಷ್ಯದಿಂದಾಗಿ ಲಕ್ಷಾಂತರ ರೂ. ಖರ್ಚು ಮಾಡಿ ನಿರ್ಮಿಸಿದ ಕಟ್ಟಡ ಇದೀಗ ಸರಿಯಾದ ನಿರ್ವಹಣೆ ಇಲ್ಲದೆ ಪಾಳು ಬಿದ್ದಿದ್ದು, ಯಾವುದೇ ಉಪಯೋಗಕ್ಕೆ ಬಾರದಂತಾಗಿದೆ.

ಸ್ಥಳೀಯ ಹಾಗೂ ಅಂಗಡಿಯೊಂದರ ಮಾಲೀಕ ಕೇಶವ ಪೂಜಾರಿ ಪ್ರಕಾರ, ನಾನು ಹಲವು ವರ್ಷಗಳಿಂದ ಎಂ.ಜಿ ರಸ್ತೆಯ ಪಕ್ಕದಲ್ಲಿ ಅಂಗಡಿಯೊಂದನ್ನು ನಡೆಸುತ್ತಿದ್ದೇನೆ. ನನ್ನ ಅಂಗಡಿ ಸೇರಿದಂತೆ ಬಹುತೇಕ ಅಂಗಡಿ ಮಳಿಗೆಗಳ ಕಟ್ಟಡದಲ್ಲಿ ಯಾವುದೇ ಶೌಚಾಲಯಗಳಿಲ್ಲ. ಆದ್ದರಿಂದ ನಮ್ಮ ಶೌಚಾಲಯ ಕಾರ್ಯಗಳನ್ನು ಮುಗಿಸಿಕೊಳ್ಳಲು ಸಾರ್ವಜನಿಕ ಶೌಚಾಲಯದ ಅಗತ್ಯವಿದೆ. ಈ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಶೌಚಾಲಯ ನಿರ್ಮಾಣ ಮಾಡಿಕೊಡುವಂತೆ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಒಟ್ಟುಗೂಡಿ ಪಪಂ ಮೇಲೆ ಒತ್ತಡ ತಂದು ನೂತನ ಶೌಚಾಲಯದ ನಿರ್ಮಾಣ ಕಾರ್ಯದಲ್ಲಿ ಯಶಸ್ವಿಯಾಗಿದ್ದೆವು. ಶೌಚಾಲಯ ನಿರ್ಮಾಣವಾಯಿತಾದರೂ ಸೂಕ್ತ ನಿರ್ವಹಣೆಯಿಲ್ಲದೆ ಕೆಲವೇ ದಿನಗಳಲ್ಲಿ ಬಾಗಿಲು ಮುಚ್ಚಲಾಯಿತು. ಇದರಿಂದಾಗಿ ಹಳೇ ಪರಿಸ್ಥಿತಿ ಪುನಃ ಮರುಕಳಿಸಿದೆ. ಇದರೊಂದಿಗೆ ದಿನಕಳೆದಂತೆ ವ್ಯಾಪಾರ, ವಹಿವಾಟುಗಳ ಹೆಚ್ಚಳದೊಂದಿಗೆ ಸಾರ್ವಜನಿಕರ ಓಡಾಟ ಕೂಡ ಹೆಚ್ಚಳವಾಗಿರುವುದರಿಂದ ಶೌಚ ಕಾರ್ಯಗಳಿಗೆ ತೊಂದರೆಯಾಗಿದೆ ಎಂದರು.

ಸರ್ಕಾರಿ ಕಚೇರಿಗಳು, ವ್ಯಾಪಾರ ವಹಿವಾಟುಗಳಿಗೆ ನಿತ್ಯ ಹಳ್ಳಿ ಹಾಗೂ ಪಟ್ಟಣದ ಸುತ್ತಮುತ್ತಲಿನ ಗ್ರಾಮಗಳಿಂದ ಬರುವ ಸಾರ್ವಜನಿಕರ ಮೂಲ ಅವಶ್ಯಕತೆ ಮರೆತು ಕುಳಿತಿರುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿ ಗಳು ಇನ್ನು ಮುಂದಾದರೂ ಸಮಸ್ಯೆ ಬಗೆಹರಿಸಿಕೊಡುವರೇ ಎಂದು ಕಾಯ್ದು ನೋಡಬೇಕಿದೆ.

ಈ ವಿಷಯದ ಬಗ್ಗೆ ಹಲವು ಒತ್ತಾಯಗಳು ಕೇಳಿಬರುತ್ತಿವೆ. ಪಪಂಗೆ
ಆಜ್ಞೆ ಮಾಡುವ ಅಧಿಕಾರ ನಮಗೆ ಇರುವುದಿಲ್ಲ. ಆದರೆ ಸಾರ್ವಜನಿಕ ಹಿತದೃಷ್ಟಿಯಿಂದ ಈ ವಿಚಾರವಾಗಿ
ಶಾಸಕರು ಹಾಗೂ ಪಟ್ಟಣ ಪಂಚಾಯತಿ ಅಧಿಕಾರಿಗಳೊಡನೆ ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಡುತ್ತೇವೆ.
„ಕೆ.ಸಿ.ರತನ್‌, ತಾಪಂ ಅಧ್ಯಕ್ಷರು.

ಈ ಭಾಗದಲ್ಲಿ ಸಾರ್ವಜನಿಕರ ಶೌಚಾಲಯದ ಅವಶ್ಯಕತೆಯಿದೆ. ಇದ್ದ ಒಂದು ಶೌಚಾಲಯ ನಿರ್ವಹಣೆ ಕಾರಣ ನೀಡಿ ಮುಚ್ಚಲಾಗಿದೆ. ಕಟ್ಟಡ ಭದ್ರವಾಗಿದ್ದು, ನಿರ್ವಹಣೆಯ ಕೊರತೆಯಿಂದಾಗಿ ಬಾಗಿಲು ಮುಚ್ಚಿದೆ. ಕಟ್ಟಡ ಪುನರ್‌ ನವೀಕರಿಸಿ ಸಾರ್ವಜನಿಕರ ಬಳಕೆಗೆ ಅನುಕೂಲ ಮಾಡಿಕೊಡಬೇಕು.
„ನವೀನ್‌,
ಆಟೋ ಚಾಲಕರ

ಪಟ್ಟಣದಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆಯಿದೆ. ಪಾಳು
ಬಿದ್ದಿರುವ ಹಳೆಯ ಶೌಚಾಲಯದ ಜತೆಗೆ ಇನ್ನೂ ಹೊಸ ಶೌಚಾಲಯಗಳ ನಿರ್ಮಾಣದ ಬಗ್ಗೆ ಸಂಬಂಧಪಟ್ಟ
ಅಧಿಕಾರಿಗಳೊಡನೆ ಚರ್ಚಿಸಿ ಸಮಸ್ಯೆ ಬಗೆಹರಿಸಿ ಕೊಡಲಾಗುವುದು.
„ಎಚ್‌.ಎಂ.ರಮೇಶ್‌,
ತಹಶೀಲ್ದಾರ್‌

ಸುಧೀರ್‌ ಬಿ.ಟಿ.

ಟಾಪ್ ನ್ಯೂಸ್

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.