![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Jan 10, 2024, 1:31 AM IST
ಚಿಕ್ಕಮಳೂರು: ಜಿಲ್ಲೆಯ ಮೂಡಿಗೆರೆ ಪಟ್ಟಣದ ಬಸ್ ನಿಲ್ದಾಣ ದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿರುವ ಪ್ರಕರಣ ನಡೆದಿದೆ.
ಅನ್ಯಕೋಮಿನ ಯುವಕನೋರ್ವನ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿದ್ದಾರೆ. ಮಂಗಳವಾರ ಸಂಜೆ ವೇಳೆ ಯುವತಿಯೋರ್ವಳಿಗೆ ಡೈರಿ ಮಿಲ್ಕ್ ಕೊಡುತ್ತಿದ್ದ ಎಂಬ ಕಾರಣಕ್ಕೆ ಬಣಕಲ್ ಮೂಲದ ಯುವಕನಿಗೆ ಮತ್ತೊಂದು ಯುವಕರ ಗಂಪು ಹಲ್ಲೆ ಹಲ್ಲೆ ನಡೆಸಿದ್ದಾರೆ.
ಕಾರಿನಲ್ಲಿ ಬಂದ ಯುವಕರು, ಹಲ್ಲೆ ನಡೆಸಿದ್ದು, ಈ ವೇಳೆ ಬಸ್ ನಿಲ್ದಾಣ ಅಧಿಕಾರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತತ್ ಕ್ಷಣವೇ ಆಗಮಿಸಿದ ಪಿಎಸೈ ಮತ್ತು ಸಿಬಂದಿ ಮುಂದಾಗುವ ಅನಾಹುತ ತಪ್ಪಿಸಿ ಗಾಯಗೊಂಡ ಯುವಕರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ. ಬಸ್ ನಿಲ್ದಾಣದಲ್ಲಿ ಪುಂಡ ಯುವಕರ ಹಾವಳಿ ಹೆಚ್ಚಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.