ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ: ಮನವೊಲಿಕೆ


, Apr 3, 2019, 5:33 PM IST

Udayavani Kannada Newspaper

ಎನ್‌.ಆರ್‌.ಪುರ: ತಾಲೂಕಿನ ಹೊನ್ನೇಕೊಡಿಗೆ ಗ್ರಾಮ ಪಂಚಾಯತ್‌ನ ಸಾರ್ಯ ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಮೂಲ ಸೌಕರ್ಯ ಒದಗಿಸಿಲ್ಲ ಎಂದು ಆರೋಪಿಸಿ ಗ್ರಾಮದ ಟಿಸಿಯೊಂದಕ್ಕೆ ಬಹಿಷ್ಕಾರದ ಬ್ಯಾನರ್‌ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದರು.

ಸಾರ್ಯಗ್ರಾಮಸ್ಥರು ಆರೋಪಿಸಿದಂತೆ ಮುಖ್ಯವಾಗಿ ಸ್ವಾತಂತ್ರ್ಯ ಬಂದು 72 ವರ್ಷವಾದರೂ ದೂರ ಸಂಪರ್ಕ ವ್ಯವಸ್ಥೆ ಸರಿಯಾಗಿಲ್ಲ. ಬಿ.ಎಸ್‌.ಎನ್‌.ಎಲ್‌ ಆಗಲೀ ಅಥವಾ ಖಾಸಗಿ ಕಂಪನಿಯ ಟವರ್‌ ಆಗಿಲೀ ಇಲ್ಲ. ದೂರವಾಣಿ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದ ಇಲ್ಲಿನ ಗ್ರಾಮಸ್ಥರು ಹೊರಜಗತ್ತಿನ ಸಂಪರ್ಕ ಕಳೆದುಕೊಂಡಿದ್ದೇವೆ. ಆನೆ ಹಾಗೂ ಇತರ ಕಾಡು ಪ್ರಾಣಿಗಳಿಂದ ಬೆಳೆ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.ಆನೆ ಬರದಂತೆ ಅರಣ್ಯ ಇಲಾಖೆಯವರು ಟ್ರಂಚ್‌ ಪ್ರಾರಂಭಿಸಿದ್ದರೂ ಅರ್ಧಕ್ಕೆ ನಿಲ್ಲಿಸಲಾಗಿದೆ.

ಅರಣ್ಯ ಹಕ್ಕು ಸಮಿತಿಗೆ ಭೂಮಿ ಮಂಜೂರು ಮಾಡಲು ಅರ್ಜಿ ಸಲ್ಲಿಸಲಾಗಿತ್ತು. ಆ ಅರ್ಜಿಗಳನ್ನು ವಜಾ ಮಾಡಲಾಯಿತು. ನಂತರ ಎ.ಸಿ.ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದೆವು. ಆದರೆ ಇದುವರೆಗೂ ಯಾವುದೇ ತೀರ್ಮಾನಕ್ಕೆ ಬಂದಿಲ್ಲ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ. ಚುನಾವಣಾ ಬಹಿಷ್ಕಾರದ ವಿಷಯ ಹಬ್ಬುತ್ತಿದ್ದಂತೆ ಹೊನ್ನೇಕೊಡಿಗೆ ಗ್ರಾಮ ಪಂಚಾಯತ್‌ಗೆ ತಹಶೀಲ್ದಾರ್‌ ಚಂದ್ರಶೇಖರ ನಾಯ್ಕ, ಸೆಕ್ಟರ್‌ ಅಧಿಕಾರಿ ಹಾಗೂ ಇ.ಇ.ಒ ಹೊಂಗಯ್ಯ, ಎ.ಎಸ್‌.ಐ.ವರ್ಗೀಸ್‌, ನಾಗಲಾಪುರ ಗ್ರಾಮ ವೃತ್ತದ ಗ್ರಾಮ ಲೆಕ್ಕಿಗ ವಿಶ್ವನಾಥ, ಹೊನ್ನೇಕೊಡಿಗೆ ಪಿ.ಡಿ.ಒ.ಜೋಸೆಫ್‌ ಆಗಮಿಸಿ ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ ಗ್ರಾಮಸ್ಥರ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್‌ ಚಂದ್ರಶೇಖರ ನಾಯ್ಕ ಮಾತನಾಡಿ, ಮತದಾನ ಎಲ್ಲರ ಹಕ್ಕಾಗಿದೆ. ಗ್ರಾಮದ ಸಮಸ್ಯೆಗಳನ್ನು ಹಂತ, ಹಂತವಾಗಿ ಬಗೆಹರಿಸುತ್ತೇವೆ. ನಿಮ್ಮ ಚುನಾವಣಾ ಬಹಿಷ್ಕಾರವನ್ನು ಹಿಂತೆಗೆದುಕೊಳ್ಳಿ ಎಂದು ಮನವಿ ಮಾಡಿದರು.

ಗ್ರಾಮ ಪಂಚಾಯತ್‌ ಕಚೇರಿಯಿಂದಲೇ ಬಿ.ಎಸ್‌.ಎನ್‌. ಎಲ್‌.ಅಧಿಕಾರಿಗಳೊಂದಿಗೆ ಮಾತನಾಡಿ ಸಾರ್ಯ ಗ್ರಾಮಕ್ಕೆ ಟವರ್‌ ನಿರ್ಮಿಸುವಂತೆ ಸೂಚಿಸಿದರು. ಕಾಡು ಪ್ರಾಣಿಗಳ ಹಾವಳಿ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿದರು. ಈ ಸಮಸ್ಯೆಯನ್ನು ಹಂತ,ಹಂತವಾಗಿ ಬಗೆ ಹರಿಸುತ್ತೇವೆ. ಚುನಾವಣೆ ನಿಮ್ಮ ಹಕ್ಕಾಗಿದ್ದು ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳಿ ಎಂದು ಮನವಿ ಮಾಡಿದರು. ತಹಶೀಲ್ದಾರ್‌ ಮಾತು ಕೇಳಿದ ಗ್ರಾಮಸ್ಥರು ಮಾತನಾಡಿ, ನಿಮ್ಮ ಭರವಸೆಯಂತೆ ಚುನಾವಣೆಯಲ್ಲಿ ಪಾಲ್ಗೊಳ್ಳುತ್ತೇವೆ. ಆದರೆ, ಮುಂದೆಯೂ ಸಮಸ್ಯೆ ಉಳಿದರೆ ಮುಂದಿನ ಚುನಾವಣೆಯಲ್ಲಿ ಮತ್ತೆ ಚುನಾವಣೆ ಬಹಿಷ್ಕಾರ ಹಾಕುತ್ತೇವೆ ಎಂದು ಎಚ್ಚರಿಸಿದರು. ಗ್ರಾಮಸ್ಥರಾದ ಸಾರ್ಯ
ನಾಗರಾಜ್‌, ಕಕೂìಟದ ಗುರುಮೂರ್ತಿ, ಕೂಸಗಲ್‌ ಪರಮೇಶ್‌, ಕರ್ಕೂಟದ ರಘು ಸೇರಿದಂತೆ 48 ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸಭೆಯಲ್ಲಿ ನಡೆದ ಚರ್ಚೆಯ ನಡಾವಳಿಗಳನ್ನು ಗ್ರಾಮ ಪಂಚಾಯ್ತಿಯಲ್ಲಿ ದಾಖಲಿಸಲಾಯಿತು.

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.