ಮದುವೆಯಾದ ಮೂರೇ ದಿನಕ್ಕೆ ತವರು ಸೇರಿದ ಪತ್ನಿ; ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಆತ್ಮಹತ್ಯೆ
Team Udayavani, Feb 6, 2024, 12:13 PM IST
ಚಿಕ್ಕಮಗಳೂರು: ರಾಷ್ಟ್ರಮಟ್ಟದ ಕಬಡ್ಡಿ ಆಟಗಾರನೋರ್ವ ಕೌಟುಂಬಿಕ ಸಮಸ್ಯೆ ಕಾರಣದಿಂದ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ತೇಗೂರು ಗ್ರಾಮದಲ್ಲಿ ನಡೆದಿದೆ.
ವಿನೋದ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ತೇಗೂರು ಗ್ರಾಮದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಯತ್ನಿಸಿದ್ದ ವಿನೋದ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಪ್ರೀತಿಸಿ ಮದುವೆಯಾದ ಮೂರೇ ದಿನಕ್ಕೆ ಹೆಂಡತಿ ಬಿಟ್ಟು ಹೋದಳೆಂದು ಮನನೊಂದ ವಿನೋದ್ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ತೇಗೂರು ಗ್ರಾಮದ ತನುಜಾ ಎಂಬ ಯುವತಿ ಹಾಗೂ ವಿನೋದ್ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಇವರ ಪ್ರೀತಿಗೆ ಯುವತಿ ಮನೆಯವರ ಸಮ್ಮತಿ ಇರಲಿಲ್ಲ. ಹೀಗಾಗಿ ಯುವತಿ ಮನೆಯವರ ವಿರೋಧದ ನಡುವೆಯೇ ಇಬ್ಬರೂ ಓಡಿ ಹೋಗಿ ಮದುವೆಯಾಗಿದ್ದರು. ಡಿಸೆಂಬರ್ 10 ರಂದು ವಿನೋದ್ ಹಾಗೂ ತನುಜಾ ಮದುವೆಯಾಗಿದ್ದರು.
ಇನ್ನೇನು ಪರಸ್ಪರ ಪ್ರೀತಿ ಮಾಡಿದ್ದ ಜೋಡಿ ಹಕ್ಕಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟು ಸಂಸಾರ ಶುರು ಮಾಡುವ ಹೊತ್ತಲ್ಲೇ ಪೊಲೀಸರು ನವ ಜೋಡಿಯನ್ನು ಠಾಣೆಗೆ ಕರೆ ತಂದಿದ್ದರು. ಯುವತಿಯ ಕುಟುಂಬಸ್ಥರ ದೂರಿನ ಮೇರೆಗೆ ಠಾಣೆಯಲ್ಲಿ ಪಂಚಾಯಿತಿ ನಡೆದಿದ್ದು ಯುವತಿ ತನ್ನ ತಾಯಿ ಮನೆಗೆ ಹೋಗುವುದಾಗಿ ಹೇಳಿಕೆ ನೀಡಿದ್ದಳು.
ಮದುವೆಯಾದ ಮೂರೇ ದಿನ ಗಂಡನನ್ನು ಬಿಟ್ಟು ತಾಯಿ ಜೊತೆ ಹೋಗುವುದಾಗಿ ಹೇಳಿ ಯುವತಿ ಉಲ್ಟಾ ಹೊಡೆದಿದ್ದಾಳೆ. ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
Chikkamagaluru: ರೋಬೋಟಿಕ್ ಆನೆಯನ್ನು ಅರಣ್ಯ ಇಲಾಖೆಗೆ ಕೊಡುಗೆ ನೀಡಿದ ಬಾಲಿವುಡ್ ನಟಿ
MUST WATCH
ಹೊಸ ಸೇರ್ಪಡೆ
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು
Success: ಯಶಸ್ವಿ ಜೀವನಕ್ಕೆ ಸೂತ್ರಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.