Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
ಅರಣ್ಯ ಕಾಯ್ದೆಗಳನ್ನೇ ನೆಪವಾಗಿಸಿ ಮತ್ತೆ ಕರ್ನಾಟದಲ್ಲಿ ಹೋರಾಟ ರೂಪಿಸುವ ಉದ್ದೇಶವೇ?
Team Udayavani, Nov 14, 2024, 6:45 AM IST
ಚಿಕ್ಕಮಗಳೂರು: ಕೇರಳದಲ್ಲಿ ನಕ್ಸಲರನ್ನು ಹಿಮ್ಮೆಟ್ಟಿಸುವ ಕಾರ್ಯಾಚರಣೆ ತೀವ್ರವಾಗುತ್ತಲೇ ಅಲ್ಲಿರುವುದು ಸುರಕ್ಷಿತವಲ್ಲ ಎಂಬ ಕಾರಣಕ್ಕೆ ನಕ್ಸಲೀಯರು ಕರ್ನಾಟಕದ ಮಲೆನಾಡು ಮತ್ತು ಪಶ್ಚಿಮಘಟ್ಟ ಪ್ರದೇಶವನ್ನು ಅಡಗುತಾಣ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಕೊಪ್ಪ ತಾಲೂಕು ಜಯಪುರ ಸಮೀಪದ ಕಡೇಗುಂದಿ ಗ್ರಾಮದ ಸುಬ್ಬಗೌಡ ಅವರ ಒಂಟಿಮನೆಗೆ ನಕ್ಸಲರಾದ ಮುಂಡಗಾರು ಲತಾ ಹಾಗೂ ಜಯಣ್ಣ ಇದ್ದ ನಾಲ್ವರ ತಂಡ ಭೇಟಿ ನೀಡಿ ಅಲ್ಲಿಂದ ಪರಾರಿಯಾಗಿರುವ ಘಟನೆ ಮಲೆನಾಡು ಭಾಗದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ 1999-2000ರ ವೇಳೆಗೆ ತೀವ್ರಗೊಂಡಿದ್ದ ನಕ್ಸಲ್ ಚಟುವಟಿಕೆ ನಕ್ಸಲ್ ನಾಯಕ ಸಾಕೇತ್ ರಾಜನ್ ಹತ್ಯೆ ಹಾಗೂ 2005ರಲ್ಲಿ ಅಂದಿನ ಸರಕಾರ ನಕ್ಸಲ್ ಶರಣಾಗತಿ ಪ್ಯಾಕೇಜ್ ಘೋಷಣೆ ಬಳಿಕ ತಗ್ಗಿತ್ತು. ಕೆಲವು ನಕ್ಸಲರು ಶರಣಾಗತರಾಗಿ ನಾಗರಿಕ ಸಮಾಜಕ್ಕೆ ಮರಳಿದರೆ, ಉಳಿದವರು ಕೇರಳದತ್ತ ಮುಖ ಮಾಡಿ ಅಲ್ಲೇ ಅಡಗುತಾಣ ಮಾಡಿಕೊಂಡಿದ್ದರು.
ಇತ್ತೀಚಿನ ವರ್ಷಗಳಲ್ಲಿ ಕೇರಳ ಸರಕಾರ ಕೈಗೊಂಡ ದಿಟ್ಟ ಕ್ರಮಗಳಿಂದ ಅನೇಕ ನಕ್ಸಲರನ್ನು ಬಂಧಿ ಸಲಾಗಿತ್ತು. ಇನ್ನೂ ಕೆಲವು ನಕ್ಸಲರು ಮೃತಪಟ್ಟ ಬಳಿಕ ಆ ರಾಜ್ಯವೂ ಸುರಕ್ಷಿತವಲ್ಲ ಎಂಬ ಕಾರಣಕ್ಕೆ ಮಲೆನಾಡು, ಪಶ್ಚಿಮಘಟ್ಟ ಪ್ರದೇಶದತ್ತ ಮುಖಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಮಲೆನಾಡು ಭಾಗದಲ್ಲಿ ಸರಕಾರ ವಿ ಧಿಸುತ್ತಿರುವ ಅರಣ್ಯ ಕಾಯ್ದೆಗಳನ್ನೇ ನೆಪವಾಗಿಸಿ ಹೋರಾಟ ರೂಪಿಸಿ ತಮ್ಮ ಆಸ್ತಿತ್ವವನ್ನು ಸಾಬೀತುಪಡಿಸುವ ಜತೆಗೆ ವಯಸ್ಸು ಕುಂದುತ್ತಿರುವ ಹಿನ್ನೆಲೆಯಲ್ಲಿ ಸಮಯ ಸಂದರ್ಭ ನೋಡಿ ಶರಣಾಗಲು ನಕ್ಸಲರು ಮಲೆನಾಡನ್ನು ಅಡಗುತಾಣವಾಗಿ ಮಾಡಿಕೊಂಡಿರಬಹುದು ಎನ್ನುವ ಚರ್ಚೆಗಳೂ ನಡೆಯುತ್ತಿವೆ. ಅರಣ್ಯದಂಚಿನಲ್ಲಿರುವ ಸುಬ್ಬಗೌಡರ ಮನೆಯಲ್ಲಿ ಮುಂಡಗಾರು ಲತಾ, ಜಯಣ್ಣ ಹಾಗೂ ತಂಡ ಅಡುಗೆ ಮಾಡಿ ಊಟ ಮಾಡಿ ತಮ್ಮ ಜತೆಗೆ ತಂದಿದ್ದ ಕೋವಿಗಳನ್ನು ಬಿಟ್ಟು ಪರಾರಿಯಾಗಿದೆ ಎಂದು ಹೇಳಲಾಗುತ್ತಿದೆ.
ಪತ್ತೆ ಕಾರ್ಯಕ್ಕೆ 4 ತಂಡ
ಮಲೆನಾಡು ಭಾಗದಲ್ಲಿ ನಕ್ಸಲರು ಚಲನವಲನದ ಸುಳಿವು ದೊರೆಯುತ್ತಲೇ ನಕ್ಸಲ್ ನಿಗ್ರಹ ದಳ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಹೈಅಲರ್ಟ್ ಆಗಿದೆ. ಪರಾರಿಯಾಗಿರುವ ನಕ್ಸಲರ ಪತ್ತೆಗೆ ನಕ್ಸಲ್ ನಿಗ್ರಹ ದಳ ಹಾಗೂ ಪೊಲೀಸ್ ಇಲಾಖೆಯಿಂದ 4 ತಂಡಗಳನ್ನು ರಚನೆ ಮಾಡಲಾಗಿದ್ದು, ಕೂಂಬಿಂಗ್ ಕಾರ್ಯ ಚುರುಕುಗೊಂಡಿದೆ. ಅಂತರ್ ಜಿಲ್ಲಾ ಗಡಿಗಳಲ್ಲಿ ವಾಹನ ತಪಾಸಣೆ ಮಾಡಲಾಗುತ್ತಿದೆ. ಶೃಂಗೇರಿ, ಕೆರೆಕಟ್ಟೆ, ಆಗುಂಬೆ ಘಾಟಿ, ಕಳಸ, ಕುದುರೆಮುಖ, ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ. ಕುದುರೆಮುಖ ಗಡಿ ಭಾಗದಲ್ಲಿಯೂ ಶೋಧಕಾರ್ಯ ತೀವ್ರಗೊಳಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಮುಂಡಗಾರು ಲತಾ ಮೇಲೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ 38 ಹಾಗೆ ಜಯಣ್ಣ ವಿರುದ್ಧ 2 ಪ್ರಕರಣಗಳು ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.