ನೆರೆಯಿಂದ ಕುಸಿದ ಶಾಲೆಗೆ ಹೊಸ ಕಟ್ಟಡ

Team Udayavani, Feb 25, 2020, 1:16 PM IST

cb-tdy-01

ಕೊಟ್ಟಿಗೆಹಾರ: ಕಳೆದ ವರ್ಷದ ಆಗಸ್ಟ್‌ನಲ್ಲಿ ನೆರೆಯಿಂದಾಗಿ ಕುಸಿದು ಹೋಗಿದ್ದ ಬಾಳೂರು ಹೊರಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೂರು ನೂತನ ಕಟ್ಟಡಗಳನ್ನು ಮುಂದಿನ ಶೈಕ್ಷಣಿಕ ವರ್ಷಾರಂಭದೊಳಗೆ ನಿರ್ಮಾಣ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಹೇಳಿದರು.

ಹೊರನಾಡು ದೇವಸ್ಥಾನಕ್ಕೆ ಖಾಸಗಿ ಭೇಟಿ ನೀಡಿದ ನಂತರ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಬಾಳೂರು ಹೊರಟ್ಟಿ ಶಾಲೆಗೆ ಭೇಟಿ ನೀಡಿ ಅವರುಮಾತನಾಡಿದರು. ನೂತನ ಕಟ್ಟಡ ನಿರ್ಮಾಣಕ್ಕೆ  ಲೋಕೋಪಯೋಗಿ ಇಲಾಖೆಗೆ ನಿರ್ದೇಶನ ನೀಡಲಾಗಿದ್ದು, ಸುಭದ್ರ ಕಟ್ಟಡ ನಿರ್ಮಾಣವಾಗಲಿದೆ. ಈ ಶಾಲೆಯಲ್ಲಿ 1 ರಿಂದ 5 ನೇ ತರಗತಿ ವರೆಗೆ 12 ಮಕ್ಕಳಿದ್ದು, 4 ನೇ ತರಗತಿಯಲ್ಲಿ ಕೇವಲ ಒಂದೇ ಮಗು ಇದೆ. 5 ನೇ ತರಗತಿಯಲ್ಲಿ 3 ಮಕ್ಕಳಿದ್ದಾರೆ. ಮಕ್ಕಳ ಸಂಖ್ಯೆ ಕೂಡ ಕಡಿಮೆ ಇದೆ. ಮಕ್ಕಳಿಗೆ ಸಹಪಾಠಿಗಳ ಸಂಖ್ಯೆ ಹೆಚ್ಚಿದ್ದರೆ ಮತ್ತಷ್ಟು ಉತ್ಸಾಹದಿಂದ ಕಲಿಯಲು ಸಾಧ್ಯವಾಗುತ್ತದೆ ಎಂದರು.

ಶಾಲಾ ಕಟ್ಟಡ ನಿರ್ಮಾಣಕ್ಕೆ ಮಂಜೂರಾತಿಯಾಗಿದ್ದು, ಶೀಘ್ರದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಾರಂಭವಾಗಲಿದೆ. ರಾಜ್ಯದ ವಿವಿಧೆಡೆಗಳಲ್ಲಿ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಶಾಲಾ ಕಟ್ಟಡಗಳು ಹಾನಿಯಾಗಿರುವ ಘಟನೆಗಳು ನಡೆದಿವೆ. ಶಾಲಾ ದುರಸ್ತಿಗಾಗಿ ಈಗಾಗಲೇ 199 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಗಳು ಪ್ರಾರಂಭವಾಗಿವೆ. ನೂತನ ಶಾಲಾ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಕೇಳಲಾಗಿದೆ. ಮಾಧ್ಯಮಗಳ ಮೂಲಕ ಕುಗ್ರಾಮದ ಶಾಲೆಯ ಸ್ಥಿತಿ ನನ್ನ ಗಮನಕ್ಕೆ ಬಂದಿದೆ. ಶಾಲಾಭಿವೃದ್ಧಿಗೆ ಇಲಾಖೆಯಿಂದ ಶ್ರಮಿಸಲಾಗುವುದು ಎಂದರು.

ನಂತರ ನೆಲದಲ್ಲಿ ಕುಳಿತು ಮಕ್ಕಳೊಡನೆ ಸಚಿವರು ಮಾತನಾಡಿದರು. ವಿದ್ಯಾರ್ಥಿನಿ ಯೊಬ್ಬಳಿಗೆ ಮಗ್ಗಿ ಬರುತ್ತಾ, 7 ರ ಮಗ್ಗಿ ಹೇಳು ನೋಡೋಣ ಎಂದು ಮಗ್ಗಿ ಹೇಳಿಸಿದರು. ಆ ಶಾಲೆ ಏನಾಯ್ತು ಎಂದು ಮಕ್ಕಳಳನ್ನು ಕೇಳಿದಾಗ, ಮಕ್ಕಳು ಮಳೆಗೆ ಕುಸಿದು ಹೋಯ್ತು ಎಂದರು. ಹೊಸ ಸ್ಕೂಲ್‌ ಬೇಕಾ, ಕಟ್ಟೋಣ. ನೀವೆಲ್ಲಾ ಚೆನ್ನಾಗಿ ಓದ್ಬೇಕು ಎಂದು ಕೆಲಕಾಲ ಮಕ್ಕಳೊಡನೆ ಸಮಯ ಕಳೆದರು. ನಂತರ ಕಟ್ಟಡ ನಿರ್ಮಾಣವಾಗುವ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಮೂಡಿಗೆರೆ ಕ್ಷೇತ್ರ ಶಿಕ್ಷಣಾಧಿಕಾರಿ ಹೇಮರಾಜ್‌, ತಾಪಂ ಇಒ ವೆಂಕಟೇಶ್‌, ಜಿಪಂ ಸದಸ್ಯ ಶಾಮಣ್ಣ, ತಾಪಂ ಅಧ್ಯಕ್ಷ ಕೆ.ಸಿ. ರತನ್‌, ಬಾಳೂರು ಗ್ರಾಪಂ ಪಿಡಿಒ ವಿಶ್ವನಾಥ್‌, ಬಿಜೆಪಿ ತಾಲೂಕು ಉಪಾಧ್ಯಕ್ಷ ಬಿ.ಎಂ. ಭರತ್‌, ಬಿಜೆಪಿ ಮುಖಂಡರಾದ ಪರೀಕ್ಷಿತ್‌, ರಘುಪತಿ, ಬಿ.ಬಿ. ಮಂಜುನಾಥ್‌, ಗ್ರಾಪಂ ಸದಸ್ಯ ಪೂರ್ಣೇಶ್‌, ಸಿಬ್ಬಂದಿ ರಜತ್‌, ಗ್ರಾಮಸ್ಥರಾದ ನಾಗರಾಜ್‌, ಶಿಕ್ಷಕ ಲೋಕೇಶ್‌, ಶಿಕ್ಷಕಿ ಶ್ಯಾಮಲಾ, ಶಾಲಾ ಸಮಿತಿ ಅಧ್ಯಕ್ಷ ವೆಂಕಟೇಶ್‌ ಮುಂತಾದವರು ಇದ್ದರು.

ಟಾಪ್ ನ್ಯೂಸ್

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

9

Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ

8

Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.